Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಡಿಸಿಸಿ ಬ್ಯಾಂಕ್ ಉತ್ತಮ ಆಡಳಿತ ನೀಡುತ್ತದೆ : ಸತೀಶ್ ಜಾರಕಿಹೊಳಿ

ಬೆಳಗಾವಿ, ನವೆಂಬರ್ 13: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಬಿಡಿಸಿಸಿ) ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಎಲ್ಲರ ಅಭಿಪ್ರಾಯ ಪಡೆದುಕೊಂಡು ಒಳ್ಳೆಯ ರೀತಿ ಆಡಳಿತ ನಡೆಸಬೇಕೆಂಬ ತಿರ್ಮಾಣ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ರಾಯಬಾಗ ತಾಲೂಕಿನ ಅಪ್ಪಾಸಾಹೇಬ ಕುಲಗೋಡೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಬಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಅವರೇ ಮುಂದುವರೆಯಲಿದ್ದು, ಎಲ್ಲ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು, ಸದಸ್ಯರು, ಶಾಸಕರ ನಿರ್ಣಯ ಪಡೆದು ನೇಮಕ ಮಾಡಲಾಗಿದೆ ಎಂದು ಹೇಳಿದರು.ಮೂರು ಸಹೋದರರು ಒಂದೇ ವೇದಿಕೆಯಲ್ಲಿ ಭಾಗವಹಿಸಿರುವ ಕುರಿತು ಮಾತನಾಡಿದರು.

ನಾವು ಸಹೋದರರು ಬೇರೆ ಬೇರೆ ಪಕ್ಷದಲ್ಲಿದ್ದೂ, ಅವರವರ ಅಭ್ಯರ್ಥಿಗಳು ಇರುವದರಿಂದ ನಾವು ಇಲ್ಲಿ ಬಂದಿದ್ದೇವೆ ಅಷ್ಟೆ. ಇದರಲ್ಲಿ ಏನು ವಿಶೇಷತೆಯಿಲ್ಲ ಎಂದ ಅವರು, ಒಂದೊಂದು ಪಾರ್ಟಿಯಲ್ಲಿ ಒಬ್ಬಬ್ಬ ಅಭ್ಯರ್ಥಿ ಇರುವದರಿಂದ ಹೀಗಾಗಿ ಸಹೋದರರು ಕೋಡಿದ್ಧೇವೆ ಅಷ್ಟೆ ಎಂದು ನಗೆ ಚಟಾಕಿ ಹಾರಿಸಿದರು.

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು: ಮೂರು ಕ್ಷೇತ್ರಗಳಲ್ಲಿ ನಡೆಯುವ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ 105 ಹಳ್ಳಿಗಳಲ್ಲಿ ಪ್ರಚಾರ ಮಾಡಿದ್ದೇವೆ. ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದೆ. ಸರಕಾರ ರಚನೆ ಆದ ಮೇಲೆ ಗ್ಯಾರಂಟಿಗಳನ್ನು ಜಾರಿ ಗೊಳಿಸಿದ್ದೇವೆ. ನುಡಿದಂತೆ ನಡೆದಿದ್ದು ನಮ್ಮ ಸರಕಾರ. ಜೊತೆಗೆ ಅಭಿವೃದ್ಧಿ ಯೋಜನೆಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಎಸ್‌ ಡಿಎ ಆತ್ಮಹತ್ಯೆ ಪ್ರಕರಣ ರೀಪೋರ್ಟ ಬರಲಿ: ಕಳೆದ ದಿನಗಳ ಹಿಂದೆ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್ ಡಿಎ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಏನು ಹೇಳಲು ಸಾಧ್ಯವಿಲ್ಲ. ಆತ್ಮಹತ್ಯೆ ಪ್ರಕರಣದ ರಿಪೋರ್ಟ್ ಬಂದ ನಂತರವೇ ಏನು ಕ್ರಮ ಕೊಗೊಳ್ಳಬೇಕೆಂಬ ನಿರ್ಧಾರ ಮಾಡಬೇಕಾಗುತ್ತದೆ. ಪ್ರಕರಣ ಈಗಾಗಲೇ ತನಿಖಾ ಹಂತದಲ್ಲಿರುವದರಿಂದ ಈಗಲೇ ಏನು ಹೇಳಲು ಆಗುವುದಿಲ್ಲ ಎಂದ ಅವರು, ಬೆಳಗಾವಿಯಲ್ಲಿ ಕೆಳ ಹಂತದ ಅಧಿಕಾರಿಗಳಿಗೆ ಕಿರುಕುಳ ‌ನೀಡುತ್ತಿರುವ ವಿಚಾರ‌ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ