LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಭಾರತ್ ಜೋಡೊ ಯುವ ಸಂಘದ ಸದಸ್ಯರಾಗಿ

 


 ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ, ಸಾಮುದಾಯಿಕ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಭಾರತ್ ಜೋಡೊ ಯುವ ಸಂಘಗಳನ್ನು ರಚಿಸಲು ಆದೇಶಿಸಿದ್ದು ಶೇಡಬಾಳ ಪಟ್ಟಣ ಪಂಚಾಯತಿ ವ್ಯಾಪ್ತಿಯ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂಘಗಳ ಸದಸ್ಯತ್ವಕ್ಕೆ ನೋಂಧಾಯಿಸಿಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಶ್ರೀ ಕೆ. ಕೆ. ಗಾವಡೆ ಕೋರಿದ್ದಾರೆ. ರಾಜ್ಯ ಸರ್ಕಾರ ಯುವಜನರಲ್ಲಿ ನಾಯಕತ್ವ ಗುಣ, ಕ್ರೀಡೆ ಹಾಗೂ ಸಾಮಾಜಿಕ ಸೌಹಾರ್ದತೆ ಬೆಳೆಸಲು ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದೆ. ಯುವ ಸಂಘಗಳನ್ನು ರಚಿಸಲು ಉದ್ದೇಶಿಸಲಾಗಿದೆ. ಯುವಜನರು ಸದಸ್ಯತ್ವ ನೋಂದಣಿ ಮಾಡಿಕೊಳ್ಳಬೇಕು ಎಂದು ಸಲಹೆ ಮಾಡಿದರು. 
 ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ೪ ಸಾವಿರ ಜನಸಂಖ್ಯೆಗೆ ಒಂದರAತೆ ಸಂಘ ಸ್ಥಾಪಿಸಲಾಗುವುದು. ಸಂಘ ನೋಂದಣಿಯಾದ ಬಳಿಕ ೧೫ ಜನರ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಬೇಕಿದೆ. ತಲಾ ಒಬ್ಬ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಖಜಾಂಚಿ ಹಾಗೂ ೧೨ ಕಾರ್ಯಕಾರಿ ಸಮಿತಿ ಇರುವುದು ಕಡ್ಡಾಯ. ಅಧ್ಯಕ್ಷ ಅಥವಾ ಉಪಾಧ್ಯಕ್ಷ ಹುದ್ದೆಗಳಲ್ಲಿ ಯಾವುದಾದರೂ ಒಂದಕ್ಕೆ ಯುವತಿ ಇರಬೇಕು. ಸಮಿತಿಯಲ್ಲಿ ಪರಿಶಿಷ್ಟರಿಗೆ ೩ ಸ್ಥಾನ, ಓಬಿಸಿಗೆ ೪ ಸ್ಥಾನ ಮೀಸಲು ಕಡ್ಡಾಯವಾಗಿದೆ ಎಂದರು.
 ೧೬ ರಿಂದ ೩೫ ವರ್ಷಗೊಳಗಿನ ಯುವಜನರು ಸಂಘದ ವೆಬ್‌ಸೈಟ್ ಮೂಲಕವೂ ಆಧಾರಿತವಾಗಿ ಸದಸ್ಯತ್ವಕ್ಕೆ ನೋಂದಾಯಿಸಿಕೊಳ್ಳಬಹುದು. ನೋಂದಣಿಗೆ ರೂ.೧೦/- ಶುಲ್ಕ ನಿಗಧಿಪಡಿಸಲಾಗಿದ್ದು, ಒಬ್ಬರು ಒಂದು ಸಂಘಕ್ಕೆ ಮಾತ್ರ ಸದಸ್ಯರಾಗಲು ಅವಕಾಶವಿದೆ. ಪ್ರತಿ ಸಂಘದ ರಚನೆಗೆ ಕನಿಷ್ಠ ೧೦೦ ಯುವಕರ ಸದಸ್ಯತ್ವ ಕಡ್ಡಾಯ. ಪ್ರತಿ ಸಂಘಕ್ಕೆ ವಾರ್ಷಿಕ ರೂ.೧೦ ಲಕ್ಷ ಅನುದಾನ ಲಭ್ಯವಿದ್ದು, ಒಬ್ಬ ತರಬೇತುದಾರರಿಗೆ ವಾರ್ಷಿಕ ತಲಾ ರೂ.೨೪೦೦೦/- ಗೌರವಧನವಿದೆ ಎಂದರು.
 ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ಅನುಷ್ಟಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ದಿ ಇಲಾಖೆ, ಕಂದಾಯ ಇಲಾಖೆ, ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ಭಾರತ್ ಜೋಡೊ ಯುವ ಸಂಘಗಳ ಮೂಲಕ ಯುವಜನರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿ, ಅವರನ್ನು ಸಬಲೀಕರಣಗೊಳಿಸಿ, ನಾಡಿನ ಸತ್ಪçಜೆಗಳಾಗಿ ರೂಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್