LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕ ಸರ್ಕಾರ ಜೆಟ್​ಗೆ ಮುನ್ನವೇ ಬಿಯರ್​ ದರ ಏರಿಕೆ

ಬೆಂಗಳೂರು, ಜನವರಿ 10: ಬಸ್​ ಟಿಕೆಟ್​ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್​ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೆಟ್​ಗೆ ಮುನ್ನವೇ ಬಿಯರ್​ ದರ ಏರಿಕೆ ಮಾಡಿದೆ.

ಪ್ರೀಮಿಯಂ ಮದ್ಯದ ಬಾಟಲ್​ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್​ನಲ್ಲಿನ ಅಲ್ಕೋಹಾಲ್​ ಅಂಶದ ಮೇಲೆ ದರ ಏರಿಕೆಯಾಗಲಿದೆ. ಈ ಪರಿಷ್ಕೃತ ದರ ಜನವರಿ 20 ರಿಂದ ಜಾರಿಗೆ ಬರಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್​) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್​​ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.

ಬಿಯರ್​ ದರ ಪರಿಷ್ಕರಿಸಲು 2024ರ ಆಗಸ್ಟ್​ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಾನಾ ಕಾರಣಗಳಿಂದ ದರ ಪರಿಷ್ಕರಣೆ ಕಡತಕ್ಕೆ ಮುಖ್ಯಮಂತ್ರಿಗಳು ಸಹಿ ಹಾಕಿರಲಿಲ್ಲ. ಈಗ, ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.

ಪ್ರೀಮಿಯಂ ಬಿಯರ್​ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ​ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್​ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.

ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್