Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ವಿಧಾನಮಂಡಳ ಚಳಿಗಾಲ ಅಧಿವೇಶನ: ಪೂರ್ವ ಸಿದ್ಧತೆ ಪರಿಶೀಲನಾ ಸಭೆ

ಅಧಿವೇಶನ-ಅಗತ್ಯ ಸಿದ್ಧತೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಫರೀದ್ ಸೂಚನೆ

ಬೆಳಗಾವಿ, ಅ.18: ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನಮಂಡಳದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಸೂಚನೆ ನೀಡಿದರು.

ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ(ಅ.18) ನಡೆದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು.

ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ‌ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೊಪಹಾರದ ವ್ಯವಸ್ಥೆಯಾಗಬೇಕು ಎಂದರು.

ಸುವರ್ಣ ಸೌಧದ ಪ್ರವೇಶದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರತಿಭಟನಾ ಸ್ಥಳ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸಿ ನಿರಂತರವಾಗಿ ನಿಗಾವಹಿಸಲು ತಿಳಿಸಿದರು.

ಅಧಿವೇಶನ‌ದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಸುವರ್ಣ ಸೌಧದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಲಾಪಗಳ‌ ವೀಕ್ಷಣೆಗೆ ಆಗಮಿಸುವ ಶಾಲೆಗಳ ವಿವರಗಳನ್ನು‌ ಮುಂಚಿತವಾಗಿ ನೀಡಬೇಕು. ಕಾಯುವಿಕೆ ಸಮಯದಲ್ಲಿ‌ ಮಕ್ಕಳಿಗೆ ನೆರಳಿನ ವ್ಯವಸ್ಥೆ ಮಾಡಬೇಕು.

ಕಳೆದ ಬಾರಿಯ ಅಧಿವೇಶನದಂತೆ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಅಚ್ಚುಕಟ್ಟಾಗಿ ಜರುಗಿಸಬೇಕು.‌ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರ‌ ಮೂಲಕ ಚಳಿಗಾಲದ ಅಧಿವೇಶನವನ್ನು ಯಶಸ್ವಿಗಾಗಿ ಎಲ್ಲ‌ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಿಳಿಸಿದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು‌ ಮಾತನಾಡಿ, ಕಳೆದ‌ ಬಾರಿಯಂತೆ ಈ ಬಾರಿಯು ಪ್ರತಿದಿನ ಬೇರೆ ಬೇರೆ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಕಾರ್ಯಕ್ರಮಗಳಿಗೆ ಅಕ್ಕಪಕ್ಕದ‌ ಜಿಲ್ಲೆಗಳ ಕಲಾವಿದರಿಗೆ ಆದ್ಯತೆ ನೀಡಬೇಕು ಎಂದರು.

ಅಧಿವೇಶನದ ಸಂದರ್ಭದಲ್ಲಿ ಅಂತರ್ಜಾಲ‌ ವ್ಯವಸ್ಥೆಯಲ್ಲಿ ಯಾವುದೇ ಅಡತಡೆ ಆಗದಂತೆ‌ ನೋಡಿಕೊಳ್ಳಲು ಸೂಚಿಸಿದರು. ಶಾಸಕರು, ಸಚಿವರುಗಳು ವಾಸ್ತವ್ಯ ಮಾಡುವಂತಹ ಹೊಟೆಲಗಳಲ್ಲಿ ಸಾರ್ವಜನಿಕರ‌ ಭೇಟಿಗೆ ಲಾಂಜ್ ವ್ಯವಸ್ಥೆ ಮಾಡಬೇಕು. ಈ ಕುರಿತು ಹೋಟೆಲ್‌ ಮಾಲಿಕರೊಂದಿಗೆ ಸಭೆ ಜರುಗಿಸಿ ಸೂಕ್ತ ನಿರ್ದೆಶನಗಳನ್ನು ನೀಡಲು ತಿಳಿಸಿದರು.

ಸುವರ್ಣ ಸೌಧದಲ್ಲಿ ಶಾಸಕರ‌ ಭವನ‌ ನಿರ್ಮಾಣ ಹಾಗೂ ನಿರಂತರ‌ ನೀರು‌‌‌ ಪೂರೈಕೆಗೆ ಸಂಬಂಧಿಸಿದಂತೆ ಯೋಜನೆಯನ್ನು ರೂಪಿಸಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ‌ ಮೊಹಮ್ಮದ್‌ ರೋಷನ್ ಅವರು‌ ಮಾತನಾಡಿ, ಅಧಿವೇಶನವನ್ನು ವ್ಯವಸ್ಥಿತವಾಗಿ ಜರುಗಿಸುವ‌ ಹಿನ್ನೆಲೆಯಲ್ಲಿ ವಸತಿ, ಆಹಾರ‌ ಹಾಗೂ ಭದ್ರತಾ‌ ಸಮಿತಿಗಳನ್ನು ರಚಿಸಿ ಸಭೆಗಳನ್ನು ಆಯೋಜಿಸಲಾಗಿದೆ. ಅಧಿವೇಶನಕ್ಕೆ‌ ಆಗಮಿಸುವ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಸೂಕ್ತ‌ ವಸತಿ‌ ಹಾಗೂ ಊಟೋಪಹಾರದ ಕಲ್ಪಿಸಲು ಸಭೆಯಲ್ಲಿ‌ ಚರ್ಚಿಸಲಾಗಿರುತ್ತದೆ. ಅಲ್ಲದೇ ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ‌ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.

ಸುವರ್ಣ ಸೌಧದಲ್ಲಿ ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಹಾಗೂ ಪೋಲಿಸ್ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗುವದು. ಅಲ್ಲದೇ ಸುಮಾರು ನಾಲ್ಕು‌ ಖಾಸಗಿ ಕ್ಯಾಂಟಿನ್ ಗಳನ್ನು ತೆರೆಯಲಾಗುವುದು.

ಡಿ.ಸಿ.ಪಿ.ರೋಹನ ಜಗದೀಶ‌ ಕಳೆದ ಅಧಿವೇಶನಕ್ಕೆ ಅಂದಾಜು ಐದು ಸಾವಿರ ಪೋಲಿಸ್ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ‌ ಹಾಗೂ ಸಿಬ್ಬಂದಿಗಳಿಗೆ ಅಚ್ವುಕಟ್ಟಾದ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಗಳಲ್ಲಿ ಅಗತ್ಯ ಪೋಲಿಸ್ ಬಂದೋಬಸ್ತ ಜೊತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಸಭೆಯಲ್ಲಿ ಶಾಸಕರಾದ ರಾಜು(ಆಸೀಫ್)ಸೇಠ ಕರ್ನಾಟಕ ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿಗಳಾದ ಮಹಾಲಕ್ಷ್ಮೀ, ಜಿಲ್ಲಾ‌ ಪೊಲಿಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ,
ಜಿಲ್ಲಾ ಪಂಚಾಯತ ಸಿ.ಇ.ಓ. ರಾಹುಲ್ ಶಿಂಧೆ,
ಪ್ರಶಿಕ್ಷಣಾರ್ಥಿ ಆಯ್.ಎಸ್. ಅಧಿಕಾರಿ ದಿನೇಶಕುಮಾರ್ ಮೀನಾ, ವಿವಿಧ ಇಲಾಖೆಗಳ‌ ಅಧಿಕಾರಿಗಳು ಉಪಸ್ಥಿತರಿದ್ದರು.

ಸುವರ್ಣಸೌಧ ಪರಿಶೀಲನೆ; ಸಮರ್ಪಕ ನಿರ್ವಹಣೆಗೆ ನಿರ್ದೇಶನ:

ಸಭೆಗೂ ಮುಂಚೆ ಸಭಾಧ್ಯಕ್ಷರಾದ ಯು.ಟಿ.ಖಾದರ‌್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣಸೌಧದ ವಿವಿಧ ಸಭಾಂಗಣಗಳನ್ನು ವೀಕ್ಷಿಸಿದರು‌

ಇದೇ ಸ್ವಚ್ಛತಾ ಸಿಬ್ಬಂದಿಗಳನ್ನು ಮಾತನಾಡಿಸಿದ ಯು.ಟಿ.ಖಾದರ್ ಅವರು, ದೈನಂದಿನ ಸ್ವಚ್ಛತಾ ಕೆಲಸದ ಕುರಿತು ಮಾಹಿತಿ ಪಡೆದುಕೊಂಡರು.

ತದನಂತರ ವಿಧಾನ ಸಭೆ, ವಿಧಾನ‌ ಪರಿಷತ್ ಸಭಾಂಗಣಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಸ್ವಚ್ಛತೆ, ಆಸನಗಳ ನಿರ್ವಹಣೆ, ಪ್ರವೇಶ ದ್ವಾರದ ಬ್ಯಾಗೇಜ್ ಸ್ಕ್ಯಾನರ್ ಮತ್ತಿತರ ವ್ಯವಸ್ಥೆಗಳನ್ನು ಮುಂಚಿತವಾಗಿ ಸಿದ್ಧವಾಗಿಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ