LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಬೆಳಗಾವಿಯ 'ಪ್ರಯತ್ನ' ಸಂಘಟನೆಯಿಂದ ಖಾನಾಪುರದ ಸರ್ಕಾರಿ ಪಿಯು ಕಾಲೇಜಿಗೆ 39 ಡೆಸ್ಕ್ ದೇಣಿಗೆ

ಖಾನಾಪುರ: "ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಬೆಳಗಾವಿಯ 'ಪ್ರಯತ್ನ' ಸಂಘಟನೆಯಿಂದ ಒಟ್ಟು 39 ಡೆಸ್ಕ್ ಗಳನ್ನು ದೇಣಿಗೆ ರೂಪದಲ್ಲಿ ನೀಡಲಾಗಿದ್ದು, ಕಾಲೇಜಿನಲ್ಲಿ ಡೆಸ್ಕ್ ಗಳ ಕೊರತೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡ ಸಂಘಟನೆ ಈ ಸಾಮಾಜಿಕ ಕಾರ್ಯಕ್ಕೆ ಮುಂದಾಗಿದೆ" ಎಂದು ಪ್ರಯತ್ನ ಸಂಘಟನೆಯ ಅಧ್ಯಕ್ಷೆ ಶಾಂತಾ ಆಚಾರ್ಯ ಅಭಿಪ್ರಾಯ ಪಟ್ಟರು.
ಪಟ್ಟಣದ ಪಿಯು ಕಾಲೇಜು ಸಭಾಗೃಹದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡೆಸ್ಕ್ ಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು, "ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆಯೂ ಆಸಕ್ತಿ ಹೊಂದಬೇಕು. ಗಾಯನ, ನೃತ್ಯ, ಚಿತ್ರಕಲೆ, ಕ್ರೀಡೆ, ಸಾಹಿತ್ಯ, ಸಂಗೀತ, ಭಾಷಣ, ನಾಟಕ ಮತ್ತಿತರ ತಮ್ಮಿಷ್ಟದ ಮತ್ತು ತಮ್ಮಲ್ಲಿ ಅಡಗಿರುವ ಕಲೆಯನ್ನು ಆವಿಷ್ಕಾರಗೊಳಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಸಂಘಟನೆ ಕಳೆದ ಹಲವು ವರ್ಷಗಳಿಂದ ಸಮಾಜಮುಖಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ" ಎಂದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಹಿರಿಯ ಪತ್ರಕರ್ತ ಎಂ.ಕೆ ಹೆಗಡೆ, "ಪ್ರತಿಯೊಬ್ಬರೂ ತಾವು ಕಲಿತ ಶಾಲೆಗೆ, ಕಾಲೇಜಿಗೆ, ಊರಿಗೆ, ಶಿಕ್ಷಕರಿಗೆ ಮತ್ತು ವಿಶೇಷವಾಗಿ ಹೆತ್ತವರಿಗೆ ಗೌರವ ನೀಡುವುದನ್ನು ರೂಢಿಸಿಕೊಳ್ಳಬೇಕು. ತಾವು ದೊಡ್ಡವರಾದ ಮೇಲೆ ತಮ್ಮನ್ನು ಈ ಮಟ್ಟಕ್ಕೆ ತಂದ ಸಮಾಜಕ್ಕೆ ತಮ್ಮ ಕೈಲಿಂದ ಸಾಧ್ಯವಾದ ಸಾಮಾಜಿಕ ಕಾರ್ಯ ಮಾಡುವುದನ್ನು ಮರೆಯಬಾದರು" ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ವತಿಯಿಂದ ಸಂಘಟನೆಯ ಪದಾಧಿಕಾರಿಗಳನ್ನು ಗೌರವಿಸಿ ಅಭಿನಂದಿಸಲಾಯಿತು. ಪ್ರಯತ್ನ ಸಂಘಟನೆಯ ಸದಸ್ಯರಾದ ಸುಮಾ ಹೊಂಡದ, ಲತಾ ಕಟ್ಟಿ, ಶೀಲಾ ದೇಶಪಾಂಡೆ, ವೀಣಾ ಕುಲಕರ್ಣಿ, ಶುಭಾ ಕಡಗದಕೈ, ವರದಾ ಭಟ್, ಪದ್ಮಾ ವೇರ್ಣೇಕರ, ಬೀನಾ ರಾವ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರಸನ್ನ ಕುಲಕರ್ಣಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯ ಎಸ್.ಕೆ ಅಕಿವಾಟ ಸ್ವಾಗತಿಸಿದರು. ಎಫ್.ಡಿ ತಳವಾರ ನಿರೂಪಿಸಿದರು. ಎಸ್.ಎಸ್ ಚಿಂಚಣಿ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುಪಿಐ ಬಳಕೆದಾರರಿಗೆ ಹೊಸ ಶುಲ್ಕವಿಲ್ಲ: ರಾಜ್ಯಸಭೆಯಲ್ಲಿ ವಿಪಕ್ಷಗಳ ಸಭಾತ್ಯಾಗದ ನಡುವೆ ಪ್ರಮುಖ ಹಣಕಾಸು ಮಸೂದೆಗಳಿಗೆ ಅಂಗೀಕಾರಬೆಳಗಾವಿಯ 'ಪ್ರಯತ್ನ' ಸಂಘಟನೆಯಿಂದ ಖಾನಾಪುರದ ಸರ್ಕಾರಿ ಪಿಯು ಕಾಲೇಜಿಗೆ 39 ಡೆಸ್ಕ್ ದೇಣಿಗೆಹುಬ್ಬಳ್ಳಿ ಧಾರವಾಡ 74 ಪಶ್ಚಿಮ ವಿಧಾನ ಸಭಾ ಮತ ಕ್ಷೇತ್ರದ ವತಿಯಿಂದ ಸಂಘಟನ್ ಸೃಜನ ಅಭಿಯಾನ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ : ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ  ಚಂದ್ರಶೇಖರ ನುಗ್ಲಿ  ಭರವಸೆರಾಜ್ಯದ ರೈತರಿಗೆ ಕೂಡಲೇ ಬರ ಪರಿಹಾರ ಘೋಷಿಸಿ: ಎನ್. ರವಿಕುಮಾರ್.ಕಿತ್ತೂರು ಗತವೈಭವಕ್ಕೆ ಹೊಸ ಸ್ಪರ್ಶ: ಪರಂಪರೆ ಸಂರಕ್ಷಣೆಗೆ ತಜ್ಞರ ಮಹತ್ವದ ಸಲಹೆಗಳುಯುವಕರು ಆರೋಗ್ಯಯುತ ಹವ್ಯಾಸಗಳನ್ನು ರೂಢಿಸಿಕೊಳ್ಳಬೇಕು : ಸರ್ವೋತ್ತಮ ಜಾರಕಿಹೊಳಿಪ್ರೌಢಶಾಲಾ ಮಕ್ಕಳಿಗಾಗಿ ಹಾಸ್ಯ ಭಾಷಣ ಸ್ಪರ್ಧೆ ಸ್ಪರ್ಧೆಗಳು ಮಕ್ಕಳಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುತ್ತವೆ : ಡಾ. ಅರವಿಂದ ಕುಲಕರ್ಣಿವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ವಸತಿ ನಿಲಯಗಳು ಪೂರಕವಾಗಲಿವಚನಾನುಸಂಧಾನ ವ್ಯಕ್ತಿತ್ವವನ್ನು ರೂಪಿಸುತ್ತದೆ : ತೋಂಟದ ಶ್ರೀ