Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಸಿಸಿಐ ವತಿಯಿಂದ ಬೆಲೆಕ್ಸ್- 2026 ಬೃಹತ್ ಕೈಗಾರಿಕಾ, ವಾಣಿಜ್ಯ ಪ್ರದರ್ಶನ



ಬೆಳಗಾವಿ:ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ (BCCI) ವತಿಯಿಂದ ಮಾರ್ಚ್ 24, 25 ಹಾಗೂ 26, 2026ರಂದು ಬೆಳಗಾವಿಯಲ್ಲಿ ಬೃಹತ್ ಕೈಗಾರಿಕಾ ಮತ್ತು ವಾಣಿಜ್ಯ ಪ್ರದರ್ಶನ ಆಯೋಜಿಸಲಾಗಿದೆ.


ಬಿಸಿಸಿಐ ಅಧ್ಯಕ್ಷ ಪ್ರಭಾಕರ ನಾಗರಮುನೋಳಿ ಮತ್ತು ಇವೆಂಟ್ ಚೇರಮನ್ ಉದಯ ಜೋಶಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು.


 ಉದ್ಯಮಬಾಗ್‌ನ ಬೆಳಗಾವಿ ಫೌಂಡ್ರಿ ಕ್ಲಸ್ಟರ್‌ನಲ್ಲಿ BELEX 2026 ಹೆಸರಿನಲ್ಲಿ ಇಂಡಸ್ಟ್ರಿಯಲ್ ಮತ್ತು ಟ್ರೇಡ್ ಎಕ್ಸಿಬಿಷನ್ ಆಯೋಜಿಸಲಾಗುತ್ತಿದೆ.


ಈ ಪ್ರದರ್ಶನದ ಮೂಲಕ ಬೆಳಗಾವಿ ಹಾಗೂ ಉತ್ತರ ಕರ್ನಾಟಕದ ಉತ್ಪಾದನಾ (Manufacturing), ವ್ಯಾಪಾರ (Trading), ಶಿಕ್ಷಣ (Education), ಕೃಷಿ (Agro) ಮತ್ತು ಆಹಾರ ಸಂಸ್ಕರಣಾ (Food Processing) ಕ್ಷೇತ್ರಗಳ ಸಾಮರ್ಥ್ಯವನ್ನು ಹೆಚ್ಚು ವ್ಯಾಪಕವಾಗಿ ಪರಿಚಯಿಸುವ ಉದ್ದೇಶ ಹೊಂದಲಾಗಿದೆ ಎಂದು ಅವರು ತಿಳಿಸಿದರು.


 ಅಲ್ಲದೆ, ನಮ್ಮ ಕೈಗಾರಿಕೆಗಳ ಶಕ್ತಿಯನ್ನು ಪ್ರದರ್ಶಿಸುವುದರ ಜೊತೆಗೆ ವಿವಿಧ ಉತ್ಪನ್ನಗಳು ಮತ್ತು ಸೇವೆಗಳನ್ನು ಈ ವೇದಿಕೆಯ ಮೂಲಕ ಪ್ರಚಾರ ಮಾಡುವ ಅವಕಾಶವನ್ನೂ ಕಲ್ಪಿಸಲಾಗಿದೆ. ಬೆಳಗಾವಿ ಅಲ್ಲದೆ ಗೋವಾ, ಕೊಲ್ಲಾಪುರ, ಹುಬ್ಬಳ್ಳಿ ಧಾರವಾಡ ಉದ್ಯಮಿಗಳನ್ನೂ ಆಹ್ವಾನಿಸಲಾಗಿದೆ ಎಂದರು.


ಈ ಎಕ್ಸಿಬಿಷನ್‌ಗಾಗಿ 85ಕ್ಕಿಂತ ಹೆಚ್ಚು ಸ್ಟಾಲ್‌ಗಳನ್ನು ಹಾಕಲಾಗಿದ್ದು, ಇದರಿಂದ ಕೈಗಾರಿಕೆ ಮತ್ತು ವ್ಯಾಪಾರ ವಲಯದವರಿಗೆ ಪರಸ್ಪರ ಸಂವಹನ, ನೆಟ್‌ವರ್ಕಿಂಗ್ ಮತ್ತು ವ್ಯಾಪಾರ ವಿಸ್ತರಣೆಗೆ ಉತ್ತಮ ಅವಕಾಶಗಳು ದೊರೆಯಲಿವೆ ಎಂದರು.


BELEX 2026 ಒಂದು B2B (ಬಿಸಿನೆಸ್-ಟು-ಬಿಸಿನೆಸ್) ಪ್ರದರ್ಶನವಾಗಿದ್ದು, ಬೆಳಗಾವಿಯ ಕೈಗಾರಿಕಾ ಪರಿಸರದ ಶಕ್ತಿಯನ್ನು ಪರಿಚಯಿಸುವುದರ ಜೊತೆಗೆ ಉದ್ಯಮಿಗಳಲ್ಲಿ ಜಾಗೃತಿ ಮೂಡಿಸುವುದು ಹಾಗೂ ಸ್ಥಳೀಯ ಕೈಗಾರಿಕೆಗಳ ಪುನರುಜ್ಜೀವನ ಮತ್ತು ಬೆಳವಣಿಗೆಯನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಲಾಗಿದೆ ಎಂದು ಅವರು ತಿಳಿಸಿದರು.


ಬಿಸಿಸಿಐ ಹಾಗೂ ವ್ಯವಸ್ಥಾಪಕ ಸಮಿತಿಯ ಪರವಾಗಿ ಎಲ್ಲಾ ಕೈಗಾರಿಕೋದ್ಯಮಿಗಳು, ವ್ಯಾಪಾರಿಗಳು, ಉದ್ಯಮಿಗಳು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಈ ಪ್ರದರ್ಶನಕ್ಕೆ ಭೇಟಿ ನೀಡಿ ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು.


ಬಿಸಿಐ ಕಾರ್ಯದರ್ಶಿ ಸತೀಶ್ ಕುಲಕರ್ಣಿ, ಇವೆಂಟ್ ಉಪಾಧ್ಯಕ್ಷ,   ವಿಕ್ರಮ ಜೈನ್, ಬಿಸಿಸಿಐ ಮಾಜಿ ಅಧ್ಯಕ್ಷ, ಎಫ್.ಕೆಸಿಸಿಐ ನಿರ್ದೇಶಕ ಸಂಜೀವ ಕತ್ತಿಶೆಟ್ಟಿ, ಬಿಸಿಸಿಐ ಹಿರಿಯ ಉಪಾಧ್ಯಕ್ಷ ಸ್ವಪ್ನಿಲ್ ಶಹ, ಜಂಟಿ ಕಾರ್ಯದರ್ಶಿ ಮನೋಜ ಮತ್ತಿಕೊಪ್ಪ, ಆಡಳಿತ ಮಂಡಳಿಯ ಸದಸ್ಯರಾದ ವೈಭವ ವೆರ್ಣೇಕರ್, ಸುಧೀರ ಚೌಗಲೆ, ಎಂ.ಕೆ.ಹೆಗಡೆ ಮೊದಲಾದವರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ