ಬೆಳಗಾವಿ, ಮಾರ್ಚ್ 15: ಮಹಾನಗರ ಪಾಲಿಕೆಯ
(Municipality) ಮೂರನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ಗೆ ಚುನಾವಣೆ
(Election) ನಡೆದಿತ್ತು. ಗದ್ದುಗೆ ಏರಲು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಂತ್ರ ಪ್ರತಿತಂತ್ರ ರೂಪಿಸಿದ್ದವು. ಹೀಗಾಗಿ ತೀವ್ರ ಕುತೂಹಲ ಮೂಡಿಸಿತ್ತು. ಸದ್ಯ ಈ ಕುತೂಹಲಕ್ಕೆ ಬ್ರೇಕ್ ಬಿದ್ದಿದ್ದು, ಬೆಳಗಾವಿ ಪಾಲಿಕೆ ಬಿಜೆಪಿ ಮಡಿಲಿಗೆ ಸೇರಿದೆ. ಆ ಮೂಲಕ ನೂತನ ಮೇಯರ್ ಆಗಿ ಮಂಗೇಶ್ ಪವಾರ್ ಆಯ್ಕೆ ಆಗಿದ್ದು, ಉಪಮೇಯರ್ ಆಗಿ ವಾಣಿ ವಿಲಾಸ್ ಜೋಶಿ ಆಯ್ಕೆ ಆಗಿದ್ದಾರೆ.
3ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಕೈ ಎತ್ತುವ ಮೂಲಕ ಆಯ್ಕೆಗೆ ಚುನಾವಣಾಧಿಕಾರಿ ಅವಕಾಶ ನೀಡಿದ್ದರು. ಮಂಗೇಶ್ ಪರವಾಗಿ 40 ಮತಗಳು ವಿರುದ್ಧವಾಗಿ 5 ಮತ ಚಲಾವಣೆ ಆಗಿದ್ದರೆ, ವೀಣಾ ಪರವಾಗಿ 40 ಹಾಗೂ ವಿರುದ್ಧವಾಗಿ 19 ಮತಗಳು ಚಲಾವಣೆ ಮಾಡಲಾಗಿದೆ.
ಮೇಯರ್ ಸ್ಥಾನಕ್ಕೆ ಬಿಜೆಪಿಯ ಮಂಗೇಶ ಪವಾರ್, ಎಂಇಎಸ್ನ ಬಸವರಾಜ ಮಾರುತಿ ಮೋದಗೇಕರ, ಎಐಎಂಐಎಂನ ಶಾಹಿದಖಾನ್ ಪಠಾಣ ಮತ್ತು ರಾಜು ಭಾತಖಾಂಡೆ ತಲಾ 2 ನಾಮಪತ್ರ ಸಲ್ಲಿಸಿದ್ದರು. ಅದೇ ರೀತಿಯಾಗಿ ಉಪಮೇಯರ್ ಸ್ಥಾನಕ್ಕೆ ದೀಪಾಲಿ ಟೊಪ್ಪಗಿ, ವಾಣಿ ವಿಲಾಸ ಜೋಶಿ, ಲಕ್ಷ್ಮೀ ಲೋಕರಿ ಮತ್ತು ಶ್ರೀಮತಿ ಖುರ್ಷಿದ್ ಮುಲ್ಲಾ ತಲಾ 2 ನಾಮಪತ್ರ ಸಲ್ಲಿದರು. ಬಳಿಕ ಖುರ್ಷಿದ್ ಮುಲ್ಲಾ ಹಾಗೂ ದೀಪಾಲಿ ಉಮೇದುವಾರಿಕೆ ವಾಪಸ್ ಪಡೆದುಕೊಂಡರು.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.