ನಗರದ ತಿನಿಸು ಕಟ್ಟೆಯಲ್ಲಿ ಪತ್ನಿಯರ ಹೆಸರಿನ ಮೇಲೆ ಮಳಿಗೆ ಪಡೆದ ಆರೋಪವನ್ನು ಇಬ್ಬರು ಮಹಾನಗರ ಪಾಲಿಕೆ ಸದಸ್ಯರು ಎದುರಿಸುತ್ತಿದ್ದರು. ಬೆಳಗಾವಿ ದಕ್ಷಿಣ ಕ್ಷೇತ್ರದ ಮಹಾನಗರ ಪಾಲಿಕೆಯ ಇಬ್ಬರು ಸದಸ್ಯರುಗಳಾದ ವಾರ್ಡ್ ನಂ 41 ರ ಸದಸ್ಯ, ಮೇಯರ್ ಮಂಗೇಶ ಪವಾರ್ ಹಾಗೂ 23 ರ ಸದಸ್ಯ ಜಯಂತ್ ಜಾಧವ್ ಮೇಲೆ ಆರೋಪ ಕೇಳಿಬಂದಿತ್ತು. ಅಧಿಕಾರ ದುರುಪಯೋಗ ಮಾಡಿಕೊಂಡ ಕುರಿತು ಸಾಮಾಜಿಕ ಹೋರಾಟಗಾರ ಸುಜೀತ್ ಮುಳುಗುಂದ ಪ್ರಾದೇಶಿಕ ಆಯುಕ್ತರಿಗೆ ದೂರು ಸಲ್ಲಿಸಿದ್ದರು.
ದೂರಿನ ಆಧಾರದ ಮೇಲೆ ಸುದೀರ್ಘ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತ ಎಸ್ಬಿ ಶೆಟ್ಟೆನ್ನವರ್ ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಿದ್ದರು. ತಮ್ಮ ಸದಸ್ಯತ್ವ ರದ್ದತಿಯನ್ನು ಪ್ರಶ್ನಿಸಿ ಇಬ್ಬರು ಮಹಾನಗರ ಪಾಲಿಕೆ ಸದಸ್ಯರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಮಧ್ಯೆ ಇಬ್ಬರು ಸದಸ್ಯರು ತಮ್ಮ ಸದಸ್ಯತ್ವ ರದ್ದತಿ ಖಂಡಿಸಿ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸರಕಾರಕ್ಕೆ ನಿರ್ದೇಶನ ನೀಡಿತ್ತು.