Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆ. 2 ರಿಂದ ಬೆಳಗಾವಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆ: ಅರ್ಜಿ ಆಹ್ವಾನ

ಬೆಳಗಾವಿ: 2025-26ನೇ ಸಾಲಿನ  ಬೆಳಗಾವಿ ತಾಲೂಕಾ ಮಟ್ಟದ ದಸರಾ ಕ್ರೀಡಾಕೂಟವನ್ನು  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಪುರುಷ ಮತ್ತು ಮಹಿಳೆಯರಿಗಾಗಿ ಬೆಳಗಾವಿ ಜಿಲ್ಲಾಕ್ರೀಡಾಂಗಣದ ಆಟದ ಮೈದಾನದಲ್ಲಿ  ಆಯೋಜಿಸಲಾಗಿದೆ.

ಭಾಗವಹಿಸುವ ತಾಲೂಕಿನ ಕ್ರೀಡಾಪಟುಗಳು ಸೆ. 02  ರಂದು ಬೆಳಿಗ್ಗೆ 9.00 ಗಂಟೆಗೆ ಆಗಮಿಸಿ  ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು.ಅಥ್ಲೆಟಿಕ್ಸ್ ಕ್ರೀಡೆಗಳಾದ (ಮಹಿಳೆಯರಿಗೆ ಮತ್ತು ಪುರುಷರಿಗೆ) ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಹರ್ಡಲ್ಸ್ ಹಾಗೂ ಗುಂಪು ಆಟಗಳಾದ ವಾಲಿಬಾಲ್, ಫುಟ್ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗಾಸನ, ಕ್ರೀಡೆಗಳಲ್ಲಿ ಭಾಗವಹಿಸಬಹುದಾಗಿದೆ.

ನಿಯಮಗಳು: ದಸರಾ ಭಾಗವಹಿಸುವ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಬೆಳಗಾವಿ ತಾಲೂಕಿನ ರಹವಾಸಿಯಾಗಿರಬೇಕು. ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗ ವಹಿಸಲು ಅರ್ಹರಾಗಿರುವುದಿಲ್ಲ. ಈ ಕ್ರೀಡಾಕೂಟದಲ್ಲಿ ತಾಲೂಕಿನ ಶಾಲಾ ಕಾಲೇಜು, ಯುವಕ/ತಿ ಸಂಘಗಳ ಹಾಗೂ ಕ್ರೀಡಾ ಸಂಘ ಸಂಸ್ಥೆಗಳ ಕ್ರೀಡಾಪಟುಗಳು ಭಾಗವಹಿಸಬಹುದು. ಭಾಗವಹಿ ಭಾಗವಹಿಸಬಹುದು. ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿ ತರತಕ್ಕದ್ದು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳು ಮತ್ತೊಂದು ತಾಲೂಕಿನಲ್ಲಿ ಭಾಗವಹಿಸತಕ್ಕದ್ದಲ್ಲ. ಒಂದು ವೇಳೆ ಭಾಗವಹಿಸಿದಲ್ಲಿ ಅಂತವರ ಆಯ್ಕೆಯನ್ನು ರದ್ದು ಗೊಳಿಸಲಾಗುವುದು.  ನಿರ್ಣಾಯಕರ ನಿರ್ಣಯವೇ ಅಂತಿಮವಾಗಿದ್ದು, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಆಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು.

ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು https://dasaracmcup-2025.etrpindia.com/KA-sports  (ಆನ್‍ಲೈನ್ ಲಿಂಕ್)  ಮೂಲಕ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 9632487391, 7411144485 ಗಳಿಗೆ ಅಥವಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ