ಬಳ್ಳಾರಿ, ನ. ೧೭:: ಬಿಡಿಸಿಸಿಐನ ಸದಸ್ಯರು, ಕಾಟನ್ ಜಿನ್ನಿಂಗ್ ಅಂಡ್ ಪ್ರೆಸ್ಸಿಂಗ್ ಕೈಗಾರಿಕೆಯವರಾದ ಕೆ.ಜೆ. ರಘು ಅವರಿಗೆ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು ನೀಡುವ ೨೦೨೬ನೇ ಸಾಲಿನ ಪ್ರತಿಷ್ಠಿತ ‘ಉದ್ಯಮಿ ರತ್ನ’ ಪ್ರಶಸ್ತಿಯನ್ನು ಪ್ರದಾನ ಮಾಡಿದೆ.ಕಾಟನ್ ಜಿನ್ನಿಂಗ್ ಮತ್ತು ಪ್ರೆಸ್ಸಿಂಗ್ ಉದ್ಯಮ ಕ್ಷೇತ್ರದಲ್ಲಿ ಕೆ.ಜೆ. ರಘು ಅವರು ಸಲ್ಲಿಸಿರುವ ಗಣನೀಯ ಸೇವೆ, ಉದ್ಯಮಶೀಲತೆ ಹಾಗೂ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿರುವುದು ಬಳ್ಳಾರಿ ಜಿಲ್ಲೆಯ ಉದ್ಯಮ ವಲಯಕ್ಕೆ ಹೆಮ್ಮೆಯ ವಿಷಯವಾಗಿದೆ.ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ ಹಾಗೂ ವಿಶೇಷ ಆಹ್ವಾನಿತರಾದ ಬಿ.ವಿ. ಬದರಿನಾರಾಯಣ ಅವರು ಉಪಸ್ಥಿತರಿದ್ದರು