Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಲ್ಯಾಣ ಕರ್ನಾಟಕ ಸಭೆಗೆ ಬಳ್ಳಾರಿ ಶಾಸಕರು ಗೈರು



ಬಳ್ಳಾರಿ, ಮಾ.25: ನಿನ್ನೆ ಸಂಜೆ ವಿಧಾನಸೌಧದಲ್ಲಿ ಕರ್ನಾಟಕ ಯೋಜನಾ ಆಯೋಗದ ಉಪಾಧ್ಯಕ್ಷ ಬಿ. ಆರ್. ಪಾಟೀಲ್ ಅವರು ಡಾ ಗೋವಿಂದಶಾಸಕರಾದ ಡಾ ಶ್ರೀನಿವಾಸ್ , ಲತಾ ಮಲ್ಲಿಜಕಾರ್ಜುನ್ ಹಾಗೂ ಕೃಷ್ಣ ನಾಯಕ್ ಭಾಗವಹಿಸಿದ್ದರು. ಗೋವಿಂದ ರಾವ್ ಅವರು ಸಲ್ಲಿಸಿದ ಡಾ ನಂಜುಂಡಪ್ಪ ವರದಿಯ ಅನುಷ್ಠಾನದ ಸ್ಥಿತಿ ಗತಿಯ ವರದಿಯನ್ನು ರಾಜ್ಯ ಸರ್ಕಾರ ಅಂಗೀಕಾರದ ನಂತರ ತೆಗೆದುಕೊಳ್ಳಬೇಕಾದ ಅಭಿವೃದ್ಧಿ ಕ್ರಮಗಳ ಬಗ್ಗೆ ಚರ್ಚಿಸಲು ಕರೆದಿದ್ದ ಕಲ್ಯಾಣ ಕರ್ನಾಟಕ ಭಾಗದ ಶಾಸಕರ ಚೊಚ್ಚಲ ಸಭೆಗೆ ಬಳ್ಳಾರಿ ಜಿಲ್ಲೆಯ ಯಾವ ಶಾಸಕರೂ ಪಾಲ್ಗೊಂಡಿಲ್ಲ.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್ ಸಿಂಗ್, 371 (ಜೆ) ಅನುಷ್ಠಾನ ಸಂಪುಟ ಉಪಸಮಿತಿಯ ಅಧ್ಯಕ್ಷರೂ ಆದ ಸಚಿವ ಶರಣ ಪ್ರಕಾಶ್ ಪಾಟೀಲ್, ೨೦ ಕ್ಕೂ ಹೆಚ್ಚು ಶಾಸಕರು , ಅಹಿಕಾರಿಗಳು ಹಾಗೂ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಮುಖಂಡರು ಭಾಗವಹಿಸಿದ್ದರು.

ಸಭೆಯಲ್ಲಿ ಹಾಜರಿದ್ದ. ವಿಜಯನಗರ ಜಿಲ್ಲೆಯ ಶಾಸಕರಾದ ಡಾ ಶ್ರೀನಿವಾಸ್, ಲತಾ ಮಲ್ಲಿಜಕಾರ್ಜುನ್ ಹಾಗೂ ಕೃಷ್ಣ ನಾಯಕ್ ಭಾಗವಹಿಸಿದ್ದರು. ಇತರೇ ಜಿಲ್ಲೆಗಳ ಶಾಸಕರೂ ಭಾಗವಹಿಸಿ 371(ಜೆ ) ಅನುಷ್ಠಾನದಲ್ಲಿ ಆಗುತ್ತಿರುವ ಸಮಸ್ಯೆ ಕುರಿತು ಗಮನ ಸೆಳೆದರು. ಈ ದಿಸೆಯಲ್ಲಿ ತೆಗೆದುಕೊಂಡಿರುವ ಮತ್ತು ಮುಂದಿನ ದಿನಗಳಲ್ಲಿ ಕ್ರಮ ವಹಿಸುವ ಬಗ್ಗೆ ಅಜಯ್ ಸಿಂಗ್ ಹಾಗೂ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.

ಈ ಸಭೆ ಕರೆದ ಬಿ. ಆರ್. ಪಾಟೀಲ್ ಅವರ ಕ್ರಮವನ್ನು ಪಾಲ್ಗೊಂಡಿದ್ದ ಶಾಸಕರು ಪಕ್ಷಾತೀತವಾಗಿ ಶ್ಲಾಘಿಸಿ, ಅಭಿವೃದ್ಧಿ ಕೆಲಸಗಳಿಗೆ ಒಗ್ಗಟ್ಟಿನ ಅವಶ್ಯಕತೆಯನ್ನು ಒತ್ತಿ ಹೇಳಿದರು. ಅಲ್ಲದೆ ಪ್ರತಿ ಮೂರು ತಿಂಗಳಿಗೊಮ್ಮೆ ಕಲ್ಯಾಣ ಕರ್ನಾಟಕದ ಶಾಸಕರ ಸಭೆ ಕರೆಯಬೇಕೆಂದು ಸಲಹೆ ನೀಡಿದರು. ಇದಕ್ಕೆ ಬಿ. ಆರ್. ಪಾಟೀಲ್ ಒಪ್ಪಿಗೆ ಸೂಚಿಸಿದರು. ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಲಕ್ಷ್ಮಣ ದಸ್ತಿ , ಡಾ ರಜಾಕ್ ಉಸ್ತಾದ್, ಪನ್ನ ರಾಜ್ ಸಿರಿಗೇರಿ ಹಾಗೂ ಇತರರು ಭಾಗವಹಿಸಿ ತಮ್ಮ ಬಹು ದಿನಗಳ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ