Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಳ್ಳಾರಿ: ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆಸರೆಯಾದ ‘ಸಖಿ ಒನ್ ಸ್ಟಾಪ್ ಸೆಂಟರ್’


ಬಳ್ಳಾರಿ,ಜೂ.26 : ಮಹಿಳೆಯರ ಸುರಕ್ಷತೆ, ಗೌರವ ಮತ್ತು ಸಬಲೀಕರಣವನ್ನು ಉತ್ತೇಜಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಸಖಿ ಒನ್ ಸ್ಟಾಪ್ ಸೆಂಟರ್' ಸಂಕಷ್ಟದಲ್ಲಿರುವ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ರಕ್ಷಣಾ ಸೇವೆಗಳನ್ನು ಒದಗಿಸುವ ಮೂಲಕ ಪ್ರಮುಖ ಆಸರೆಯಾಗಿದೆ.
ಮಹಿಳೆಯರು ಯಾವುದೇ ರೀತಿಯ ದೈಹಿಕ, ಮಾನಸಿಕ, ಭಾವನಾತ್ಮಕ ಹಾಗೂ ಲೈಂಗಿಕ ಹಿಂಸೆಗೆ ಒಳಗಾದ ಸಂದರ್ಭದಲ್ಲಿ ತಕ್ಷಣದ ನೆರವು ಪಡೆಯಲು ಸಖಿ ಕೇಂದ್ರವು ಪ್ರಮುಖ ವೇದಿಕೆಯಾಗಿದೆ. ‘ನೊಂದ ಮಹಿಳೆ, ಹಲವು ಸಮಸ್ಯೆ, ಒಂದು ಸೂರು, ಹಲವು ಸೇವೆ’ ಎಂಬ ಧ್ಯೇಯದೊಂದಿಗೆ ಈ ಕೇಂದ್ರವು ಕಾರ್ಯನಿರ್ವಹಿಸುತ್ತಿದೆ.
*ಒಂದೇ ಸೂರಿನಡಿ ವಿವಿಧ ಸೇವೆಗಳು:*
ಸಖಿ ಕೇಂದ್ರದಲ್ಲಿ ಸಂಕಷ್ಟಕ್ಕೆ ಒಳಗಾದ ಮಹಿಳೆಯರಿಗೆ ಒಂದೇ ಸ್ಥಳದಲ್ಲಿ ಅಗತ್ಯವಿರುವ ಎಲ್ಲಾ ನೆರವುಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಅದರಲ್ಲಿ ಉಚಿತ ಆಪ್ತಸಮಾಲೋಚನೆ ಮತ್ತು ಕಾನೂನು ಸಲಹೆ, ತುರ್ತು ವೈದ್ಯಕೀಯ ನೆರವು ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ, ತಾತ್ಕಾಲಿಕ ಆಶ್ರಯ ಹಾಗೂ ನ್ಯಾಯಾಲಯದ ಪ್ರಕ್ರಿಯೆಗಳಿಗೆ ಸೂಕ್ತ ಮಾರ್ಗದರ್ಶನ ಪ್ರಮುಖವಾಗಿವೆ.
ಮಹಿಳೆಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಅವರ ಆತ್ಮಸ್ಥೆöÊರ್ಯವನ್ನು ಹೆಚ್ಚಿಸಿ ಸಮಾಜದ ಮುಖ್ಯವಾಹಿನಿಗೆ ಮರಳಲು ಅಗತ್ಯ ಸಹಕಾರವನ್ನು ಕೇಂದ್ರವು ನೀಡುತ್ತಾ ಬಂದಿದೆ.
*ಇಲಾಖೆಗಳ ಸಮನ್ವಯದೊಂದಿಗೆ ರಕ್ಷಣೆ:*
ಕೌಟುಂಬಿಕ ಹಿಂಸೆ, ವರದಕ್ಷಿಣೆ ಕಿರುಕುಳ, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ, ಮಾನವ ಕಳ್ಳಸಾಗಣೆ ಹಾಗೂ ಇತರೆ ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗೆ ಸಂಬAಧಿಸಿದ ಪ್ರಕರಣಗಳಲ್ಲಿ ಕೇಂದ್ರವು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದೊಂದಿಗೆ ಸಂತ್ರಸ್ತರಿಗೆ ಸೂಕ್ತ ರಕ್ಷಣೆ ಮತ್ತು ನ್ಯಾಯ ದೊರಕಿಸಿಕೊಡಲಾಗುತ್ತಿದೆ.
*ವ್ಯಾಪಕ ಜಾಗೃತಿ ಕಾರ್ಯಕ್ರಮಗಳು:*
ಕೇವಲ ನೆರವು ನೀಡುವುದಷ್ಟೇ ಅಲ್ಲದೆ, ಸಾರ್ವಜನಿಕ ಸ್ಥಳಗಳು, ಗ್ರಾಮ ಪಂಚಾಯಿತಿಗಳು, ಶಾಲೆ-ಕಾಲೇಜುಗಳು ಹಾಗೂ ಕೈಗಾರಿಕಾ ಸಂಸ್ಥೆಗಳಲ್ಲಿ ಮಹಿಳಾ ಸುರಕ್ಷತೆ, ಲಿಂಗ ಸಮಾನತೆ, ಸೈಬರ್ ಸುರಕ್ಷತೆ, ಬಾಲ್ಯ ವಿವಾಹ ತಡೆ, ಪೋಕ್ಸೋ ಕಾಯ್ದೆ ಮತ್ತು ಮಹಿಳಾ ಸಬಲೀಕರಣದ ಕುರಿತು ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಸಖಿ ಕೇಂದ್ರವು ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 3,667 ಫಲಾನುಭವಿಗಳಿಗೆ ಯಶಸ್ವಿಯಾಗಿ ಸೇವೆಗಳನ್ನು ಒದಗಿಸಿದೆ.
*ಒದಗಿಸಲಾದ ಸೇವೆಗಳು ಮತ್ತು ಫಲಾನುಭವಿಗಳ ಸಂಖ್ಯೆ:*
ಮಾನಸಿಕ-ಸಾಮಾಜಿಕ ಆಪ್ತಸಮಾಲೋಚನೆ: 998
ಕಾನೂನು ಸಮಾಲೋಚನೆ: 952
ಪೊಲೀಸ್ ಸಹಾಯ: 730
ವೈದ್ಯಕೀಯ ನೆರವು: 704
ತಾತ್ಕಾಲಿಕ ಆಶ್ರಯ ಸೌಲಭ್ಯ: 259
ಯಾವುದೇ ಮಹಿಳೆ ಹಿಂಸೆ, ಕಿರುಕುಳ ಅಥವಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದರೆ, ಅದನ್ನು ಸಹಿಸಿಕೊಳ್ಳದೆ ಧೈರ್ಯದಿಂದ ಮುಂದೆ ಬಂದು ಸಖಿ ಕೇಂದ್ರದ ನೆರವು ಪಡೆಯಬಹುದು. ಇಲ್ಲಿ ನೀಡಲಾಗುವ ಎಲ್ಲಾ ಸೇವೆಗಳು ಸಂಪೂರ್ಣ ಉಚಿತವಾಗಿದ್ದು, ಸಂತ್ರಸ್ತರ ಗೌಪ್ಯತೆಯನ್ನು ಕಟ್ಟುನಿಟ್ಟಾಗಿ ಕಾಪಾಡಲಾಗುತ್ತದೆ.
*ಸಂಪರ್ಕಿಸಬೇಕಾದ ವಿಳಾಸ:*
ಸಖಿ ಒನ್ ಸ್ಟಾಪ್ ಸೆಂಟರ್, ಶಾಂತಿಧಾಮ ಆವರಣ, ಕಂಟೊನ್ಮೆAಟ್, ಬಳ್ಳಾರಿ.
ಮಾಹಿತಿಗಾಗಿ ಉಚಿತ ಮಹಿಳಾ ಸಹಾಯವಾಣಿ ಸಂಖ್ಯೆ 181 ಗೆ ಕರೆ ಮಾಡಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ.ಎಂ ಅವರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಶಿಕ್ಷಣವು ನ್ಯಾಯಯುತ ಸಮಾಜ ನಿರ್ಮಾಣದ ಪ್ರಮುಖ ಸಾಧನ: ಹಿರಿಯ ನ್ಯಾಯವಾದಿ ಕೆ.ಎಲ್. ಪಾಟೀಲ’ನನ್ನ ದೇಹ, ನನ್ನ ಸುರಕ್ಷತೆ’ ಪರಿಕಲ್ಪನೆಯಡಿ ಮಕ್ಕಳಿಗೆ ಜಾಗೃತಿ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು "ಫಲಾಪೇಕ್ಷೆಯಿಲ್ಲದ ಕಾರ್ಯ ಶ್ಲಾಘನೀಯ" -ಶ್ರೀಗುರುಸಿದ್ದೇಶ್ವರ ಶ್ರೀದೇಶನೂರ ಬಂಗಲೆ ರಸ್ತೆ, ದೇವಸ್ಥಾನದ ಅಭಿವೃದ್ಧಿ ಆದಷ್ಟು ಬೇಗ  ಪ್ರಾರಂಭ : ಬಾಬಾಸಾಹೇಬ ಪಾಟೀಲ ಹತ್ತರಗಿ : ದೀಪ ಸಂಜೀವಿನಿ ಉತ್ಪನ್ನಗಳ ಮಳಿಗೆ ಉದ್ಘಾಟನೆ,"ನಾಡು ನುಡಿ, ಗಡಿ ವಿಚಾರದಲ್ಲಿ ಒಗ್ಗಟ್ಟಿನಿಂದ ಶ್ರಮಿಸಿ  / ನಾಡು ನುಡಿಯ ರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗ ಮುಂದಾಗಬೇಕು"  *ಶಾಲಾ ದಾಖಲಾತಿಯಲ್ಲಿ ಗಣನೀಯ ಏರಿಕೆ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು*ವಕೀಲರ ಸಂರಕ್ಷಣೆಯ ಕಾಯ್ದೆ ಪರಿಣಾಮಕಾರಿ ಜಾರಿಗೆ ಸವದತ್ತಿ ವಕೀಲರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ  ಇಂಡಿ: ಸಿದ್ದೇಶ್ವರ ಸ್ವಾಮೀಜಿ ಮಳಿಗೆಗಳ ಬಹಿರಂಗ ಹರಾಜು – ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆವಿದ್ಯುತ್‌ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಲು ಆಗ್ರಹಿಸಿ ಅನಿರ್ದಿಷ್ಟ ಹೋರಾಟ