Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬಳ್ಳಾರಿ: ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ


ಬಳ್ಳಾರಿ,ಜು.20 ನಗರದ ಕೌಲ್ ಬಜಾರ್ ಹಾಗೂ ಕಂಟೋನ್ಮೆAಟ್ ಪ್ರದೇಶಗಳಲ್ಲಿ ಅನಧಿಕೃತವಾಗಿ ಒತ್ತುವರಿಯಾಗಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಜೆಸಿಬಿ ಯಂತ್ರಗಳ ಸಹಾಯದೊಂದಿಗೆ ಯಶಸ್ವಿಯಾಗಿ ತೆರವುಗೊಳಿಸಿದ್ದಾರೆ.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ನಿರ್ದೇಶನದಂತೆ, ಅಪರ ಜಿಲ್ಲಾಧಿಕಾರಿ ಮಹಮ್ಮದ್.ಎನ್ ಝುಬೇರ್, ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರ ನೇತೃತ್ವದಲ್ಲಿ ಶನಿವಾರ ಬಳ್ಳಾರಿ ತಹಶೀಲ್ದಾರ್ ಟಿ.ರೇಖಾ ಮತ್ತು ಕಂದಾಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಯ ಜಂಟಿ ಕಾರ್ಯಾಚರಣೆ ನಡೆಯಿತು.
ಬಳ್ಳಾರಿ ನಗರದ ಸಿಟಿಸಿ ವಾರ್ಡ್ ನಂ. 20, ಬ್ಲಾಕ್ ನಂ. 13, ಟಿಎಸ್ ನಂ. 1074 ರಲ್ಲಿ ಬರುವ ಸುಮಾರು 0.93 ಸೆಂಟ್ಸ್ ವಿಸ್ತೀರ್ಣದ ಸರ್ಕಾರಿ ಹಳ್ಳದ ಜಮೀನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸ್ಥಳದಲ್ಲಿದ್ದ ಅನಧಿಕೃತ ತಾತ್ಕಾಲಿಕ ಶೆಡ್‌ಗಳು ಮತ್ತು ಕಟ್ಟಡಗಳನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.
ಬಳ್ಳಾರಿ ಕೋಟೆ ಸಮೀಪದ ಹೊಸಪೇಟೆ ರಸ್ತೆಯ ಕಂಟೋನ್ಮೆAಟ್ ವ್ಯಾಪ್ತಿಯಲ್ಲಿರುವ ಸಿಟಿಸಿ ವಾರ್ಡ್ ನಂ. 21, ಬ್ಲಾಕ್ ನಂ. 03, ಟಿಎಸ್ ನಂ.59(ಪಿ) ರಲ್ಲಿ ಬರುವ 0.10.50 ಸೆಂಟ್ಸ್ ಸರ್ಕಾರಿ ಜಮೀನಿನ ಒತ್ತುವರಿಯನ್ನೂ ಸಹ ಅಧಿಕಾರಿಗಳ ತಂಡ ಸಮ್ಮುಖದಲ್ಲಿ ತೆರವುಗೊಳಿಸಿ, ಸರ್ಕಾರದ ವಶಕ್ಕೆ ಪಡೆಯಲಾಯಿತು.
*ಎಚ್ಚರಿಕೆ ಫಲಕ ಅಳವಡಿಕೆ – ಕ್ರಿಮಿನಲ್ ಮೊಕದ್ದಮೆಯ ಎಚ್ಚರಿಕೆ:*
ತೆರವುಗೊಳಿಸಲಾದ ಜಾಗಗಳಲ್ಲಿ ಅಧಿಕೃತ ಸರ್ಕಾರಿ ಎಚ್ಚರಿಕೆ ಫಲಕಗಳನ್ನು ಅಳವಡಿಸಲಾಗಿದೆ. ಈ ಜಮೀನು ಸರ್ಕಾರಕ್ಕೆ ಸೇರಿದ್ದಾಗಿದ್ದು, ಮುಂದಿನ ದಿನಗಳಲ್ಲಿ ಯಾರಾದರೂ ಇದನ್ನು ಒತ್ತುವರಿ ಮಾಡಲು ಯತ್ನಿಸಿದರೆ ಅವರ ವಿರುದ್ಧ ಕಠಿಣ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಬೋರ್ಡ್ಗಳ ಮೂಲಕ ಸಾರ್ವಜನಿಕರಿಗೆ ಕಡಕ್ ಎಚ್ಚರಿಕೆ ನೀಡಲಾಗಿದೆ.
ಕಾರ್ಯಾಚರಣೆಯ ಸಂದರ್ಭದಲ್ಲಿ ಸ್ಥಳೀಯ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಕೌಲ್ ಬಜಾರ್ ಪೊಲೀಸ್ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ಇಲಾಖೆಯ ಈ ದಿಟ್ಟ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾನೂನು ಶಿಕ್ಷಣವು ನ್ಯಾಯಯುತ ಸಮಾಜ ನಿರ್ಮಾಣದ ಪ್ರಮುಖ ಸಾಧನ: ಹಿರಿಯ ನ್ಯಾಯವಾದಿ ಕೆ.ಎಲ್. ಪಾಟೀಲ’ನನ್ನ ದೇಹ, ನನ್ನ ಸುರಕ್ಷತೆ’ ಪರಿಕಲ್ಪನೆಯಡಿ ಮಕ್ಕಳಿಗೆ ಜಾಗೃತಿ ಮೂಡಿಸಿದ ಸಂಪನ್ಮೂಲ ವ್ಯಕ್ತಿಗಳು "ಫಲಾಪೇಕ್ಷೆಯಿಲ್ಲದ ಕಾರ್ಯ ಶ್ಲಾಘನೀಯ" -ಶ್ರೀಗುರುಸಿದ್ದೇಶ್ವರ ಶ್ರೀದೇಶನೂರ ಬಂಗಲೆ ರಸ್ತೆ, ದೇವಸ್ಥಾನದ ಅಭಿವೃದ್ಧಿ ಆದಷ್ಟು ಬೇಗ  ಪ್ರಾರಂಭ : ಬಾಬಾಸಾಹೇಬ ಪಾಟೀಲ ಹತ್ತರಗಿ : ದೀಪ ಸಂಜೀವಿನಿ ಉತ್ಪನ್ನಗಳ ಮಳಿಗೆ ಉದ್ಘಾಟನೆ,"ನಾಡು ನುಡಿ, ಗಡಿ ವಿಚಾರದಲ್ಲಿ ಒಗ್ಗಟ್ಟಿನಿಂದ ಶ್ರಮಿಸಿ  / ನಾಡು ನುಡಿಯ ರಕ್ಷಣೆಗೆ ಪ್ರತಿಯೊಬ್ಬ ಕನ್ನಡಿಗ ಮುಂದಾಗಬೇಕು"  *ಶಾಲಾ ದಾಖಲಾತಿಯಲ್ಲಿ ಗಣನೀಯ ಏರಿಕೆ: ಸರ್ಕಾರಿ ಶಾಲೆಗಳತ್ತ ಪೋಷಕರ ಒಲವು*ವಕೀಲರ ಸಂರಕ್ಷಣೆಯ ಕಾಯ್ದೆ ಪರಿಣಾಮಕಾರಿ ಜಾರಿಗೆ ಸವದತ್ತಿ ವಕೀಲರ ಸಂಘದಿಂದ ರಾಜ್ಯ ಸರ್ಕಾರಕ್ಕೆ ಮನವಿ  ಇಂಡಿ: ಸಿದ್ದೇಶ್ವರ ಸ್ವಾಮೀಜಿ ಮಳಿಗೆಗಳ ಬಹಿರಂಗ ಹರಾಜು – ಶಾಸಕ ಯಶವಂತರಾಯಗೌಡ ಪಾಟೀಲ ಚಾಲನೆವಿದ್ಯುತ್‌ ಸಮಸ್ಯೆಗಳಿಗೆ ಶೀಘ್ರ ಪರಿಹರಿಸಲು ಆಗ್ರಹಿಸಿ ಅನಿರ್ದಿಷ್ಟ ಹೋರಾಟ