Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅರ್ಥಶಾಸ್ತ್ರದೊಂದಿಗೆ ಭಾವಕೋಶವು ವಿಸ್ತರಣೆಯಾಗಬೇಕು : ಜಯಂತ ಕಾಯ್ಕಿಣಿ

ಅರ್ಥಶಾಸ್ತ್ರವು ಹಣಕಾಸಿನ ಕುರಿತು ಬೋಧಿಸುತ್ತದೆ. ಅದರ ಜೊತೆಗೆ ಭಾವಕೋಶದ ವಿಸ್ತರಣೆಯೂ ಆಗಬೇಕು. ತಂತ್ರಜ್ಞಾನ ಮನುಷ್ಯನನ್ನು ಭೌತಿಕವಾಗಿ ದೂರಮಾಡಿದೆ. ಸಂಪತ್ತಿನ ಗಳಿಕೆಗಾಗಿ ದೂರಾದ ನಮ್ಮ ಮಕ್ಕಳಿಂದ ನಾವು ಕೇವಲ ಧ್ವನಿಯನ್ನು ಕೇಳುತ್ತಾ ಬದುಕನ್ನು ಸವೆಸುತ್ತಿದ್ದೇವೆ ಎಂದು ಹಿರಿಯ ಸಾಹಿತಿ ಹಾಗೂ ಖ್ಯಾತ ಚಲನಚಿತ್ರ ಗೀತ  ರಚನೆಕಾರರಾದ ಜಯಂತ ಕಾಯ್ಕಿಣಿ ಅಭಿಪ್ರಾಯಪಟ್ಟರು.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕಾಲೇಜು ಅರ್ಥಶಾಸ್ತ್ರ ಅಧ್ಯಾಪಕರ ಸಂಘ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೃತಕ ಬುದ್ಧಿಮತ್ತೆ ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಡಿಜಿಟಲ್ ಯುಗದಲ್ಲಿ ಅರ್ಥಶಾಸ್ತ್ರವನ್ನು ಕಲಿಸುವುದರ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಜಯಂತ ಕಾಯ್ಕಿಣಿ ಇಂದು ಜಗತ್ತು ತಂತ್ರಜ್ಞಾನಾಧಾರಿತವಾಗಿದೆ.

ತಂತ್ರಜ್ಞಾನ ದ ಮುಖೇನ ಎಲ್ಲವೂ ಸಾಗುವಂತ ಕಾಲಘಟ್ಟದಲ್ಲಿ ನಾವಿದ್ದೇವೆ. ಹಾಗಾಗಿ ತಂತ್ರಜ್ಞಾನವನ್ನು ಶಿಕ್ಷಕರು ಬಳಸಿಕೊಂಡು ತಮ್ಮ ಬೋಧನೆಯನ್ನು ಪರಿಣಾಮಕಾರಿಯಾಗಿಸಿಕೊಳ್ಳಬೇಕು. ನಾವು ಸಿದ್ಧ ಪಡಿಸುವ ಪಠ್ಯಗಳು ಮನುಷ್ಯನ ಬದುಕನ್ನು ರೂಪಿಸುವಂತಿರಬೇಕು. ಜಾತಿ, ಮತ, ಪಂಥಗಳನ್ನು ವಿದ್ಯಾರ್ಥಿಗಳ ತಲೆಯಲ್ಲಿ ತುಂಬಿದಾಗ ಅನಾರೋಗ್ಯಕರ ಸಮಾಜದ ಸೃಷ್ಟಿಗೆ ನಾವೇ ಕಾರಣರಾಗುತ್ತೇವೆ.

ಪಠ್ಯಗಳು ಮನುಷ್ಯ ಮನುಷ್ಯನನ್ನು ಬೆಸೆಯುವಂತಿರಬೇಕು. ಭಾರತ ಜಗತ್ತಿನ ಮೊದಲ ಐದನೆಯ ಆರ್ಥಿಕತೆ ಯನ್ನು ಹೊಂದಲು ಪ್ರತಿಯೊಬ್ಬ ಶ್ರೀಸಾಮಾನ್ಯನು ನೀಡುವ ತೆರಿಗೆಯಿಂದ ಸಾಧ್ಯವಾಯಿತು. ಮನುಷ್ಯನ ಬದುಕು ಅತ್ಯಂತ ಸರಳವಾಗಿರಬೇಕು. ಅದುವೇ ನಿಜವಾದ ಆಧ್ಯಾತ್ಮಿಕತೆ. ಯಾವುದು ಅಹಂಕಾರ ಕೊಡುತ್ತದೆ ಅದು ಜ್ಞಾನವನ್ನು ನೀಡುವುದಿಲ್ಲ ಎಂದರು.

ಕುಲಪತಿಗಳಾದ ಪ್ರೊ. ಸಿ. ಎಂ. ತ್ಯಾಗರಾಜ ಅವರು ಹಣ ಮನುಷ್ಯನಿಗೆ ನೆಮ್ಮದಿಯನ್ನು ತಂದು ಕೊಡಬೇಕು. ಹಣವೇ ನಮ್ಮ ಬದುಕಿನ ಉದ್ದೇಶವಾಗಬಾರದು. ಕೃತಕ ಬುದ್ಧಿಮತ್ತೆ ಇಂದು ಜಗತ್ತನ್ನು ಆಳುತ್ತಿದೆ. ಇದರಿಂದಾಗಿ ಜಗತ್ತು ತಲ್ಲಣಗೊಂಡಿದೆ. ಮುಂದಿನ ದಿನಮಾನದಲ್ಲಿ ಉದ್ಯೋಗ ಕ್ಷೇತ್ರದಲ್ಲಿ ಮನುಷ್ಯನಿಗೆ ಅತಿ ದೊಡ್ಡ ಸವಾಲನ್ನು ಇದು ಒಡ್ಡಲಿದೆ. ನಮ್ಮ ಬೋಧನಾ ವ್ಯವಸ್ಥೆಗಳು ಸಮಕಾಲೀನ ಸಂದರ್ಭಕ್ಕೆ ತಕ್ಕಂತೆ ಬದಲಾಗಬೇಕು. ನಮ್ಮ ವಿದ್ಯಾರ್ಥಿಗಳು ಭವಿಷ್ಯದ ಸವಾಲನ್ನು ಎದುರಿಸುವ ಸಾಮರ್ಥ್ಯವನ್ನು ನಾವು ವಿದ್ಯಾರ್ಥಿಗಳಲ್ಲಿ ತುಂಬಬೇಕು. ನಮ್ಮ ಪಠ್ಯಗಳು ಜಗತ್ತಿನ ಆರ್ಥಿಕತೆಯನ್ನು ಪರಿಚಯಿಸುವಂತಿರಬೇಕು. ಮುಂದಿನ ಹತ್ತು ವರ್ಷಗಳಲ್ಲಿ ಉಂಟಾಗುವ ಜಗತ್ತಿನ ಆರ್ಥಿಕ ಸ್ಥಿತಿಯನ್ನು ವಿದ್ಯಾರ್ಥಿಗಳು ಅರಿಯಬೇಕು. ಪಾರಂಪರಿಕವಾಗಿ ಬೋಧಿಸುತ್ತಿರುವ ಕ್ರಮವನ್ನು ಬದಲಾಯಿಸಿಕೊಂಡು ಆಧುನಿಕ ತಂತ್ರಜ್ಞಾನ ಆಧಾರಿತವಾಗಿ ಬೋಧಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ. ಎಸ್ ಎಸ್ ತೇರದಾಳ ಅವರು ಅರ್ಥಶಾಸ್ತ್ರವು ಮನುಷ್ಯನ ಅವಿಭಾಜ್ಯ ಅಂಗವಾಗಿದೆ. ಪ್ರತಿಯೊಬ್ಬರು ಅರ್ಥಶಾಸ್ತ್ರ ವಿಷಯವನ್ನು ತಿಳಿಯಬೇಕು. ಆ ಮೂಲಕ ತಮ್ಮ ಹಣಕಾಸಿನ ನಿರ್ವಹಣೆ ಅತ್ಯುತ್ತಮ ಪಡಿಸಿಕೊಳ್ಳುವುದರ ಜೊತೆಗೆ ದೇಶದ ಆರ್ಥಿಕತೆಗೆ ಕೊಡುಗೆಯನ್ನು ಕೊಡಬಹುದು ಎಂದರು.

ಪ್ರೊ. ಡಿ.ಎನ್. ಪಾಟೀಲ್ ಅವರು ಆಧುನಿಕ ತಂತ್ರಜ್ಞಾನ ಯುಗಕ್ಕೆ ತಕ್ಕಂತೆ ಅರ್ಥಶಾಸ್ತ್ರ ಪಠ್ಯಕ್ರಮವನ್ನು ಸಿದ್ಧಪಡಿಸಬೇಕು ಎಂದು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ರಾಚವಿ ಕುಲಸಚಿವರಾದ ರಾಜಶ್ರೀ ಜೈನಾಪುರ, ಮೌಲ್ಯಮಾಪನ ಕುಲಸಚಿವರಾದ
ಪ್ರೊ. ರವೀಂದ್ರನಾಥ ಕದಮ್, ಡಾ. ಕಿರಣ್ ಕುಮಾರ್, ಪ್ರೊ. ಆರ್ ಎಂ ತೇಲಿ, ಡಾ. ಬಿ.ಎಸ್. ಕಾಂಬ್ಳೆ, ಡಾ. ಅರ್ಜುನ್ ಜಂಬಗಿ ಉಪಸ್ಥಿತರಿದ್ದರು.

ಡಾ. ಅಪ್ಪು ಮಾದರ ಪ್ರಾರ್ಥಿಸಿದರು. ಡಾ. ಎನ್. ಪಿ. ಬಿರಾದಾರ ಸ್ವಾಗತಿಸಿದರು, ಉಪನ್ಯಾಸಕರಾದ ರಾಜು ಬಿ. ಕಪಾಲಿ ನಿರೂಪಿಸಿದರು, ರುದ್ರಪ್ಪ ಅರಳಿಮಟ್ಟಿ ವಂದಿಸಿದರು. ಕಾರ್ಯಾಗಾರದಲ್ಲಿ ಅರ್ಥಶಾಸ್ತ್ರದ ಮೌಲ್ಯಮಾಪಕರು, ಮಹಾವಿದ್ಯಾಲಯದ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ