LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಇಂದು ಮಧ್ಯಾಹ್ನ 1 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಪೀಠ ಸೂಚನೆ ನೀಡಿದೆ.

ಇನ್ನು ಜಾಮೀನು ನೀಡಿರುವ ಹೈಕೋರ್ಟ್ ಏಕಸದಸ್ಯ ಪೀಠ ಭವಾನಿ ಅವರನ್ನು ಇಂದು ಮಧ್ಯಾಹ್ನ1 ಗಂಟೆಗೆ ಆರಂಭವಾಗಲಿರುವ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. ಅಲ್ಲದೆ ಎಸ್ ಐಟಿ ಅಧಿಕಾರಿಗಳ ತನಿಖೆಗೆ ಸಹಕರಿಸಬೇಕು. ಕೆಆರ್ ನಗರ ಪ್ರವೇಶ ಮಾಡಬಾರದು ಎಂದು ಸೂಚನೆ ನೀಡಿದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪಹರಿಸಿದ  ಪ್ರಕರಣದಲ್ಲಿ ಭವಾನಿ ರೇವಣ್ಣ  ಅವರಿಗೆ ಹೈಕೋರ್ಟ್  ಏಕಸದಸ್ಯ ಪೀಠ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಇದೇ ವೇಳೆ ಈ ಆದೇಶವು ಜಾಮೀನಿಗಾಗಿ ಮಾತ್ರವೇ ಹೊರತು ಭವಾನಿ ಈ ಆದೇಶವನ್ನು ಸಂಭ್ರಮಿಸುವಂತಿಲ್ಲ. ಆರೋಪಿ ಭವಾನಿ ರೇವಣ್ಣ ತಪ್ಪದೇ ಎಸ್‌ಐಟಿ ಮುಂದೆ ವಿಚಾರಣೆಗೆ ಹಾಜರಾಗಬೇಕು ಮತ್ತು ತನಿಖೆಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ನ್ಯಾಯಾಲಯವು ಕಠಿಣ ಷರತ್ತುಗಳನ್ನು ವಿಧಿಸಿದೆ.

ಅಂತೆಯೇ ಎಸ್‌ಐಟಿ ಆಕೆಯನ್ನು ಬಂಧಿಸಬಾರದು ಎಂದು ಹೇಳಿರುವ ನ್ಯಾಯಾಲಯ ತನಿಖೆಯ ನೆಪದಲ್ಲಿ ಸಂಜೆ 5 ಗಂಟೆಯ ನಂತರ ಆಕೆಯನ್ನು ಕಚೇರಿಯಲ್ಲಿ ಉಳಿಸಿಕೊಳ್ಳಬಾರದು. ಮುಂದಿನ ದಿನಗಳಲ್ಲಿ ಆಕೆ ತನಿಖೆಗೆ ಹಾಜರಾಗುವವರೆಗೆ ಈ ಷರತ್ತುಗಳು ಜಾರಿಯಲ್ಲಿರುತ್ತವೆ ಎಂದು ನ್ಯಾಯಾಲಯ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್