LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಬಿಜೆಪಿಯಿಂದ ‘ಭೀಮ ಸಂಗಮ’ ಅಭಿಯಾನ!

ಬೆಂಗಳೂರು, ಜನವರಿ 10: ಸಂವಿಧಾನ ವಿಚಾರದಲ್ಲಿ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಪ್ರಯತ್ನಿಸುತ್ತಲೇ ಇರುವ ಬಿಜೆಪಿ ಹೊಸ ಹೊಸ ಪ್ರಯೋಗಗಳನ್ನು ‌ಮಾಡುತ್ತಲೇ ಇದೆ. ಇದೀಗ ಸಂವಿಧಾನ ಗೌರವ ಅಭಿಯಾನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ‘ಭೀಮ ಸಂಗಮ’ ಅಭಿಯಾನಕ್ಕೆ ಬಿಜೆಪಿ ಮುಂದಾಗಿದೆ. ಈ ಮೂಲಕ ಸಂವಿಧಾನ ವಿಚಾರದಲ್ಲಿ ಆಗಿರುವ ಚುನಾವಣಾ ಹಿನ್ನೆಡೆಯನ್ನು ಭರ್ತಿ ಮಾಡಿಕೊಳ್ಳಲು ತೀರ್ಮಾನಿಸಿದೆ.‌ ಜನವರಿ 25 ರೊಳಗೆ ರಾಜ್ಯವ್ಯಾಪಿ ಭೀಮ ಸಂಗಮ ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಾಗಿದ್ದು, ಶಾಸಕರು ಮತ್ತು ಸಂಸದರಿಗೆ ಜವಾಬ್ದಾರಿ ಹೊರಿಸಲಾಗಿದೆ.





ಬಿಜೆಪಿ‌ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ತಮ್ಮ ಮನೆಗಳಲ್ಲಿ ನಡೆಸಲಿರುವ ಕಾರ್ಯಕ್ರಮ ಇದಾಗಿದ್ದು, ಎಸ್​​ಸಿ ಮತ್ತು ಎಸ್​​ಟಿ ಸಮುದಾಯದವರನ್ನು ತಮ್ಮ ಮನೆಗೆ ಕರೆಸಿಕೊಂಡು ಸನ್ಮಾನ ಮಾಡಲಿದ್ದಾರೆ.

ಮನೆ ಮನೆಗಳಿಗೆ ಅಂಬೇಡ್ಕರ್ ಅವರ ವಿಚಾರಧಾರೆ ಮುಟ್ಟಿಸುವುದು, ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳನ್ನು ಸೇರಿಸಿ ಭೀಮ ಸಂಗಮ ನಡೆಸುವುದು ಮತ್ತು ಸಂವಿಧಾನ ಪೀಠಿಕೆ ಓದುವ ಭೀಮ ಸಮ್ಮೇಳನ ಹಮ್ಮಿಕೊಳ್ಳಲು ಬಿಜೆಪಿ ತೀರ್ಮಾನಿಸಿದೆ.





ಬೆಂಗಳೂರಿನ‌ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿ ಗುರುವಾರ ನಡೆದ ಸಂವಿಧಾನ ಗೌರವ ಅಭಿಯಾನ ಕಾರ್ಯಕ್ರಮದಲ್ಲಿ ಈ ನಿರ್ದೇಶನಗಳನ್ನು ನೀಡಲಾಗಿದೆ. ಅಲ್ಲದೇ, ದೇಶದ ಎಲ್ಲಾ ರಾಜ್ಯಗಳಲ್ಲೂ ಪಕ್ಷದ ಮುಖವಾಣಿಯಲ್ಲಿ ಸಂವಿಧಾನ ವಿಚಾರದಲ್ಲಿ ಕಾಂಗ್ರೆಸ್ ಮಾಡಿರುವ ತಪ್ಪುಗಳನ್ನು ಮುದ್ರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದು, ರಾಜ್ಯದಲ್ಲೂ ಸಹ ಪಾಲನೆಯಾಗಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್