LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಭೋಜ್​ಪುರಿ ಗಾಯಕ ಪವನ್​ಸಿಂಗ್ ಬಿಜೆಪಿ​ ಪಕ್ಷದಿಂದ ಉಚ್ಛಾಟನೆ

ಕಾರಕಟ್​ ,22: ಭಾರತೀಯ ಜನತಾ ಪಕ್ಷ(ಬಿಜೆಪಿ) ಭೋಜ್​ಪುರಿ ಗಾಯಕ ಹಾಗೂ ನಟ ಪವನ್​ಸಿಂಗ್​ ಅವರನ್ನು ಪಕ್ಷದಿಂದ ಹೊರಹಾಕಿದೆ. ಲೋಕಸಭಾ ಚುನಾವಣೆಯಲ್ಲಿ ಎನ್​ಡಿಎ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಕ್ಕಾಗಿ ಪವನ್​ ಸಿಂಗ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.

ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವ ನಿರ್ಧಾರವನ್ನು ಪವನ್​ಸಿಂಗ್ ಈ ಹಿಂದೆಯೇ ಪ್ರಕಟಿಸಿದ್ದರು. ಬಿಹಾರದ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ಎನ್​ಡಿಎ ಅಧಿಕೃತ ಅಭ್ಯರ್ಥಿ ಉಪೇಂದ್ರ ಕುಶ್ವಾಹ ವಿರುದ್ಧ ಪವನ್ ಸಿಂಗ್ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಪವನ್​ಸಿಂಗ್ ತಾಯಿ ಪ್ರತಿಮಾ ದೇವಿ ಕಾರಕಟ್​ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿದ್ದಾರೆ. ಆದರೆ ಬಿಜೆಪಿಯ ಒತ್ತಡದ ನಡುವೆಯೂ ಅವರ ಪುತ್ರ ಕ್ಷೇತ್ರದಲ್ಲಿ ನಿಂತಿದ್ದಾರೆ.

ಬಿಜೆಪಿ ಮೊದಲು ಪವನ್​ ಸಿಂಗ್ ಅವರನ್ನು ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಕಣಕ್ಕಿಳಿಸಿತ್ತು. ಆ ವೇಳೆ ಪವನ್​ ಸಿಂಗ್ ತುಂಬಾ ಸಂಭ್ರಮಿಸಿದ್ದರು. ಆದರೆ ಅವರ ಹಾಡುಗಳಿಗೆ ಸಂಬಂಧಿಸಿದಂತೆ ಬಂಗಾಳದಲ್ಲಿ ಪ್ರತಿಭಟನೆಗಳು ನಡೆದ ಬಳಿಕ ಹಿಂದೆ ಸರಿದರು. ಪಶ್ಚಿಮ ಬಂಗಾಳದ ಅಸನ್ಸೋಲ್​ನಿಂದ ಬಿಜೆಪಿ ಟಿಕೆಟ್ ತಿರಸ್ಕರಿಸಿ ಕಾರಕಟ್​ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ಸಿಂಗ್ ನಿರ್ಧರಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ