Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ

ಬೆಳಗಾವಿ:ಬೆಳಗಾವಿ ಗ್ರಾಮೀಣ ಕ್ಷೇತ್ರದ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೋಮವಾರ ಭೂಮಿ ಪೂಜೆ ನೆರವೇರಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಈ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿದೆ.


      ಬಾಚಿ ಗ್ರಾಮದಲ್ಲಿ ಸುಮಾರು 60 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಬ್ರಹ್ಮಲಿಂಗ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಸ್ಥಳೀಯ ಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.


ಈ ವೇಳೆ ಗ್ರಾಮದ ಹಿರಿಯರು, ಸ್ಥಳೀಯ ನಿವಾಸಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

     ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಂಡೋಳಿ ಗ್ರಾಮದಲ್ಲಿ ಸುಮಾರು 55 ಲಕ್ಷ ರೂ,ಗಳ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆಯುಷ್ಮಾನ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.


ಈ ವೇಳೆ ಗ್ರಾಮದ ಹಿರಿಯರು, ಗ್ರಾಮಸ್ಥರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿ ಉಪಸ್ಥಿತರಿದ್ದರು.


ಸಂಪರ್ಕ ರಸ್ತೆ:ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಟ್ಟಲವಾಡಿ ಹಾಗೂ ನಾವಗೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದ ಕಾಮಗಾರಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು‌.


ಸುಮಾರು 1.40 ಕೋಟಿ ರೂ,ಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಳ್ಳಲಿದೆ. ರಸ್ತೆಯ ಗುಣಮಟ್ಟತೆಯನ್ನು ಕಾಯ್ದುಕೊಳ್ಳುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.


ಈ ವೇಳೆ ಆಯಾ ಗ್ರಾಮಗಳ ಹಿರಿಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ