ತಾಳಿಕೋಟೆ: ಬಬಲೇಶ್ವರದಲ್ಲಿ ನಡೆದ ವಿಜಯಪುರ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ತಾಳಿಕೋಟೆ ತಾಲೂಕಿನ ವಿದ್ಯಾರ್ಥಿನಿಯರಾದ ಭೂಮಿಕಾ ಮಡ್ಡಿ ಹಾಗೂ ಸ್ಪೂರ್ತಿ ಹರನಾಳ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.
ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ಮಡ್ಡಿ ಅವರು ೧೪ ವರ್ಷದೊಳಗಿನವರ (ಯು-೧೪) ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದರೆ, ಆಕ್ಸಫರ್ಡ ಪಾಟೀಲ ಶಾಲೆ, ಬಿದರಕುಂದಿಯ ವಿದ್ಯಾರ್ಥಿನಿ ಸ್ಪೂರ್ತಿ ಹರನಾಳ ಅವರು ೧೭ ವರ್ಷದೊಳಗಿನವರ (ಯು-೧೭) ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಪ್ರಾಂಶುಪಾಲರಾದ ಚಂದ್ರಶೇಖರ ಸಜ್ಜನ, ದೈಹಿಕ ಶಿಕ್ಷಣ ಶಿಕ್ಷಕರಾದ ವಿಜಯಮಹಾಂತೇಶ ಸ್ಥಾವರಮಠ, ನಿಲಯಪಾಲಕರಾದ ಸೋಮನೌಡ ಮರಡ್ಡಿ ಸೇರಿದಂತೆ ಎರಡೂ ಶಾಲೆಗಳ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.