LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಶಿಕ್ಷಕರ ದಿನಾಚರಣೆ ಅಂಗವಾಗಿ ಸೆ.೩ರಂದು ಬೃಹತ್ ರಕ್ತದಾನ ಶಿಬಿರ, "ರಕ್ತದಾನ - ಮಹಾದಾನ" /ಅಥಣಿಯಲ್ಲಿ ೧೦೦೦ಕ್ಕೂ ಹೆಚ್ಚು ಮಂದಿ ಹೆಸರು ನೋಂದಣಿ: ಶಿವಾನಂದ ಕಲ್ಲಾಪೂರ


ಅಥಣಿ: ಶಿಕ್ಷಕರ ದಿನಾಚರಣೆ ಅಂಗವಾಗಿ ಶಿಕ್ಷಕರಿಗೆ ಗೌರವ ಸಲ್ಲಿಸುವ ಉದ್ದೇಶದಿಂದ ಅಥಣಿ ತಾಲೂಕು ಆಡಳಿತದ ವತಿಯಿಂದ ಸೆ.೩ರಂದು ಅಥಣಿ ಪಟ್ಟಣದ ಆರ್.ಎಚ್. ಕುಲಕರ್ಣಿ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪುರ ಹೇಳಿದರು
ಅಥಣಿ ನಿರೀಕ್ಷಣಾ ಮಂದಿರದ ಸಭಾಭವನದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಶಿವಾನಂದ ಕಲ್ಲಾಪೂರ ಮಾತನಾಡಿ ಬೆಳಗಾವಿ ಜಿಲ್ಲಾ ಪಂಚಾಯಿತಿ, ಅಥಣಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಥಣಿ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಪಟ್ಟಣದ ಜೆ ಇ ಶಿಕ್ಷಣ ಸಂಸ್ಥೆಯ ಆರ್ ಹೆಚ್ ಸಭಾ ಭವನದಲ್ಲಿ  ರಕ್ತದಾನ ಶಿಬಿರ ನಡೆಯಲಿದೆ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸಲು ಸಹಕರಿಸಬೇಕು. ಎಲ್ಲ ದಾನಗಳಲ್ಲಿಯೂ ರಕ್ತದಾನ ಶ್ರೇಷ್ಠವಾದುದು. ನಮ್ಮ ಒಂದು ಹನಿ ರಕ್ತ ಮತ್ತೊಬ್ಬರ ಜೀವಕ್ಕೆ ಆಸರೆಯಾಗಬಹುದು ಎಂದು ಹೇಳಿದರು.
ತಾಲೂಕು ವೈದ್ಯಾಧಿಕಾರಿ ಬಸಗೌಡ ಕಾಗೆ ಮಾತನಾಡಿ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಅಥಣಿಯಲ್ಲಿ ನಡೆಯಲಿರುವ ಶಿಬಿರವು ಬೆಳಿಗ್ಗೆ ೮ ರಿಂದ ಮಧ್ಯಾಹ್ನ ೨ರವರೆಗೆ ನಡೆಯಲಿದೆ. ೧೮ ವರ್ಷ ಮೇಲ್ಪಟ್ಟು ೫೫ ವಷÀð ವಯೋಮಿತಿಯೊಳಗಿನ ಆರೋಗ್ಯವಂತ ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕು. ಒಬ್ಬ ವ್ಯಕ್ತಿ ರಕ್ತದಾನ ಮಾಡುವುದರಿಂದ ಅಗತ್ಯವಿರುವ ಸಂದರ್ಭದಲ್ಲಿ ಹಲವು ರೋಗಿಗಳಿಗೆ ನೆರವಾಗಬಹುದು. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ಮನವಿಗೆ ಸ್ಪಂದಿಸಿ ಸಾರ್ವಜನಿಕರು ಶಿಬಿರದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಈ ವೇಳೆ ಬಿಇಓ ಎಂ ಆರ್ ಮುಂಜಿ, ಅಧಿಕಾರಿಗಳಾದ ಮಲ್ಲಿಕಾರ್ಜುನ ನಾಮದಾರ, ಬೀರಪ್ಪ ಗಾವಡೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡ