LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆಪ್ಟೆಂಬರ್ 28ರಿಂದ ಕನ್ನಡದ ಬಿಗ್‌ಬಾಸ್‌ ಶೋ ಪ್ರಾರಂಭ; ಯಾರೆಲ್ಲ ದೊಡ್ಮನೆಗೆ ಎಂಟ್ರಿ?

ಬೆಂಗಳೂರು:   ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 28ರಂದು ಶೋ ಪ್ರಾರಂಭ ಆಗುತ್ತಿದೆ. ಈ ಶೋಗಾಗಿ ಫ್ಯಾನ್ಸ್ ಕಾದಿದ್ದಾರೆ. ಇದರ ಪ್ರೋಮೋ ಸೆಪ್ಟೆಂಬರ್ 2ರಂದು ರಿಲೀಸ ಆಯಿತು. ಈ ಪ್ರೋಮೋ ಶೂಟ್​ನ ಝಲಕ್​ನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.

ಬಿಗ್ ಬಾಸ್ 12 ಪ್ರೋಮೋ ಹೊರಬಿದ್ದ ಬೆನ್ನಲ್ಲೇ ಈ ಬಾರಿ ಮನೆಯೊಳಗೆ ಹೋಗುವ ಸ್ಪರ್ಧಿಗಳು ಇವರೇ ಎಂಬ ಗುಸುಗುಸು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದು ಯಾರೆಲ್ಲ ಅಂದ್ರೆ, ಈ ಸಾಲಿನಲ್ಲಿ ಕೇಳಿಬರುತ್ತಿರುವ ಮೊದಲ ಹೆಸರು ಸಾಗರ್ ಬಿಳಿಗೌಡ. ಸೀಸನ್ 11ರ ಸ್ಪರ್ಧಿ ಗೌತಮಿ ಜಾಧವ್ ಅವರ ಸತ್ಯ ಸೀರಿಯಲ್​ನಲ್ಲಿ ಸಾಗರ್ ಹೀರೋ ಆಗಿ ಕಾಣಿಸಿಕೊಂಡಿದ್ದರು. ಇನ್ನು ಎರಡನೇ ಹೆಸರು ಶ್ವೇತಾ ಪ್ರಸಾದ್. ಆರಂಭದಲ್ಲಿ ಧಾರಾವಾಹಿಗಳ ಮೂಲಕ ಶ್ವೇತಾ ಗಮನ ಸೆಳೆದವರು. ಆ ಬಳಿಕ ಅವರು ಆರ್​ಜೆ ಪ್ರದೀಪ್ ಜೊತೆ ವಿವಾಹ ಮಾಡಿಕೊಂಡಿದ್ದಾರೆ.


ಝೀ ಕನ್ನಡದಲ್ಲಿ ಪ್ರಸಾರ ಕಂಡ ಭರ್ಜರಿ ಬ್ಯಾಚುಲರ್ಸ್ ಸೀಸನ್ 2ನ ಸ್ಪರ್ಧಿ ಅನನ್ಯಾ ಅಮರ್ ಈ ಬಾರಿ ಬಿಗ್ ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗಿದೆ. ಇನ್ನು ಪತ್ರಿಕೋದ್ಯಮ ಕೋಟಾದಿಂದ ಈ ಬಾರಿ ಜಯಪ್ರಕಾಶ್ ಶೆಟ್ಟಿ ಬಿಗ್ ಬಾಸ್​ಗೆ ಬರಲಿದ್ದಾರೆ ಎಂಬ ಪೋಸ್ಟ್ ವೈರಲ್ ಆಗಿದೆ.


ಇವರ ಜೊತೆಗೆ ಕೆಜಿಎಫ್‌ ಸಿನಿಮಾದ ಮೂಲಕ ದೇಶಾದ್ಯಂತ ಸದ್ದು ಮಾಡಿದವರು ಅರ್ಚನಾ ಜೋಯಿಸ್‌ ಬಿಗ್ ಬಾಸ್​ಗೆ ಪ್ರವೇಶಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಕಳೆದ ಕೆಲವು ವರ್ಷಗಳಿಂದ ಡಾ ಬ್ರೋ ಅಲಿಯಾಸ್ ಗಗನ್ ಶ್ರೀನಿವಾಸ್ ಕೂಡ ಈ ಪಟ್ಟಿಯಲ್ಲಿ ಇದ್ದಾರೆ. ಸೀತಾ ರಾಮ ಸೀರಿಯಲ್‌ನಲ್ಲಿ ನಟಿಸಿದ್ದ ಗಗನ್ ದೊಡ್ಮನೆಯೊಳಗೆ ಕಾಲಿಡಬಹುದು ಎಂಬ ಗುಸು-ಗುಸು ಇದೆ. ಜೊತೆಗೆ ಇದೇ ಧಾರಾವಾಹಿಯಲ್ಲಿ ವಿಲನ್ ಪಾತ್ರ ಮಾಡಿದ ದಿವಂಗತ ನಟ ಲೋಕೇಶ್ - ಗಿರಿಜಾ ಲೋಕೇಶ್ ದಂಪತಿಯ ಪುತ್ರಿ ಪೂಜಾ ಲೋಕೇಶ್ ಕೂಡ ಮನೆಯೊಳಗೆ ಕಾಲಿಡಬಹುದು. ನೂರು ಜನ್ಮಕೂ, ಗೀತಾ ಸೀರಿಯಲ್‌ನಲ್ಲೂ ನಟಿಸಿದ್ದ ಧನುಷ್ ಗೌಡ ಈ ಬಾರಿ ಬಿಗ್ ಬಾಸ್ ಸ್ಪರ್ಧಿಯಾಗಬಹುದು ಎನ್ನಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ