LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನನ್ನ ವೃತ್ತಿಜೀವನದ ಬಿಗ್ ಬಜೆಟ್ ಚಿತ್ರ ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್  

     ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು ಪ್ರೇಕ್ಷಕರ ಮನ ಗೆದ್ದಿದೆ.

     ಆಗಸ್ಟ್ ಹದಿನೈದರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ.


     "ದಂಡುಪಾಳ್ಯ ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ಚಿತ್ರದ ಕಥೆ ಹೇಳಲು ಬರುತ್ತಿದ್ದಾರೆ ಎಂದಾಗ, ಅವರು ನನ್ನ ಜಾನರ್ ಬದಲಾಯಿಸುವ ಕಥೆ ಮಾಡಿರಬಹುದು ಅಂದುಕೊಂಡೆ. ಆದರೆ  ಆರಂಭದಲ್ಲೇ ಅವರು ಎಂಟು ನಾಯಕಿಯರು ಎಂದಾಗ,‌ ಓ ಇದು ನನ್ನ ಜಾನರ್ ನ ಚಿತ್ರ ಅನಿಸಿತು. 'ಕೃಷ್ಣಂ ಪ್ರಣಯ ಸಖಿ' ಉತ್ತಮ ಕಥಾಹಂದರ ಹೊಂದಿರುವ ಚಿತ್ರ.  ಕನ್ನಡ ಚಿತ್ರರಂಗದ ಹಿರಿಯ ನಟರೊಂದಿಗೆ ಈ ಚಿತ್ರದಲ್ಲಿ ನಟಿಸಿದ್ದು ಸಂತೋಷವಾಯಿತು. ನೋಡುಗರಿಗೂ ಈ ಚಿತ್ರ ಇಷ್ಟವಾಗುತ್ತದೆ. ಅಂತಹ ಉತ್ತಮ ಚಿತ್ರ ಮಾಡಿದ್ದಾರೆ ಶ್ರೀನಿವಾಸರಾಜು.  ಪ್ರಶಾಂತ್ ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ . 'ಕೃಷ್ಣಂ ಪ್ರಣಯ ಸಖಿ' ನನ್ನ ಈವರೆಗಿನ ವೃತ್ತಿಜೀವನದ ಬಿಗ್ ಬಜೆಟ್ ನ ಚಿತ್ರ.  ನೋಡಿ ಪ್ರೋತ್ಸಾಹಿಸಿ ಎಂದು ಗೋಲ್ಡನ್ ಸ್ಟಾರ್ ಗಣೇಶ್ ಮನವಿ ಮಾಡಿದರು.


     "ಇದು ಗಣೇಶ್ ಅವರಿಗೆ ಸೂಕ್ತವಾದ ಕಥೆ. ಅವರ ಹಾಗೂ ಚಿತ್ರದಲ್ಲಿ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಉತ್ತಮವಾಗಿ ಮೂಡಿಬಂದಿದೆ. ತಂತ್ರಜ್ಞರ ಕಾರ್ಯವೈಖರಿ ಕೂಡ ಚೆನ್ನಾಗಿದೆ.  ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದ್ದು, ಎರಡು ಹಾಡುಗಳು ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಇತ್ತೀಚಿಗೆ ಬಿಡುಗಡೆಯಾದ 'ಚಿನ್ನಮ್ಮ' ಹಾಡಂತೂ ಈಗಾಗಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ" ಎಂದು ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದರು.


      ಚಿತ್ರ ಉತ್ತಮವಾಗಿ ಮೂಡಿಬಂದಿರುವುದಕ್ಕೆ ನಿರ್ಮಾಪಕರ ಪುತ್ರಿ ಪ್ರೇರಣಾ ಪ್ರಶಾಂತ್ ಧನ್ಯವಾದ ತಿಳಿಸಿದ ನಾಯಕಿಯರಾದ ಮಾಳವಿಕಾ ನಾಯರ್ ಹಾಗೂ ಶರಣ್ಯ ಶೆಟ್ಟಿ ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಿವಧ್ವಜ್, ಗಿರಿ ಮುಂತಾದವರು 'ಕೃಷ್ಣಂ ಪ್ರಣಯ ಸಖಿ' ಚಿತ್ರದ ಕುರಿತು ಮಾತನಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್