LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಡಾ ಹಗರಣ: ಸಿದ್ದರಾಮಯ್ಯಗೆ ಬಿಗ್​ ರಿಲೀಫ್​​

ಧಾರವಾಡಫೆಬ್ರವರಿ 07: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಗೊಳಿಸಿದೆ. ಲೋಕಾಯುಕ್ತ ಪೊಲೀಸರ ತನಿಖೆ ಅಸಮರ್ಪಕ ಎನ್ನುವುದಕ್ಕೆ ಕಾರಣಗಳಿಲ್ಲ, ಲೋಕಾಯುಕ್ತ ತನಿಖೆ ತಾರತಮ್ಯಪೂರಿತ ಎಂಬುದಕ್ಕೆ ಆಧಾರಗಳಿಲ್ಲ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಆದೇಶ ಪ್ರಕರಣವನ್ನು ಸಿಬಿಐಗೆ ನೀಡಲು ನಿರಾಕರಿಸಿ ಆದೇಶ ಹೊರಡಿಸಿದೆ. ಈ ಮೂಲಕ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ.





ಲೋಕಾಯುಕ್ತ ಮುಡಾ ಹಗರಣದ ತನಿಖೆಯನ್ನು ಕೈಗೆತ್ತಿಕೊಂಡ ದಿನದಿಂದಲೂ ದೂರುದಾರ ಸ್ನೇಹಮಯಿ ಕೃಷ್ಣರದ್ದು ಒಂದೇ ಅಸಮಾಧಾನ. ಸಮರ್ಪಕ ತನಿಖೆಯಾಗಲ್ಲ, ನಮಗೆ ನ್ಯಾಯ ಸಿಗಲ್ಲ ಅಂತಿದ್ದ ಸ್ನೇಹಮಯಿ ಸಿಬಿಐ ತನಿಖೆಗೆ ಆಗ್ರಹ ಮಾಡಿ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಲೋಕಾಯುಕ್ತ ಪೊಲೀಸರೂ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್​ಗೆ ಸಲ್ಲಿಸಿದ್ದಾರೆ. ಈ ವರದಿಯನ್ನೂ ಪರಿಶೀಲಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿರುವ ಹೈಕೋರ್ಟ್ ಪೀಠ ಶುಕ್ರವಾರ ತೀರ್ಪು ಪ್ರಕಟಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ