Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ʼಮೊಬೈಲ್ ಬಳಕೆಯಿಂದ 10 ವರ್ಷದಲ್ಲಿ ಜಗತ್ತು ಅಂತ್ಯʼ ಬಿಹಾರ ಸಿಎಂ ಹೇಳಿಕೆಗೆ ಕಾಂಗ್ರೆಸ್‌ ಕಿಡಿ

ಪಾಟ್ನಾ, ಮಾರ್ಚ್ 20: ಬಿಹಾರದ ಅಧಿವೇಶನದಲ್ಲಿ ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಶಾಸಕ ಕುಮಾರ್ ಕೃಷ್ಣ ಮೋಹನ್ ಅಲಿಯಾಸ್ ಸುದಯ್ ಯಾದವ್ ಮೊಬೈಲ್ ಫೋನ್ ಬಳಸುವುದನ್ನು ಗಮನಿಸಿದ ನಂತರ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಇಂದು ಬಿಹಾರದ ವಿಧಾನಸಭೆಯಲ್ಲಿ ತಮ್ಮ ತಾಳ್ಮೆ ಕಳೆದುಕೊಂಡರು. ಇದಕ್ಕೆ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ವಿಧಾನಸಭೆಯೊಳಗೆ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದರು. ಈ ವೇಳೆ, ಮೊಬೈಲ್ ಫೋನ್ ಬಳಕೆಯಿಂದ 10 ವರ್ಷಗಳಲ್ಲಿ ಜಗತ್ತು ಅಂತ್ಯವಾಗಲಿದೆ ಎಂದು ನಿತೀಶ್ ಕುಮಾರ್ ಹೇಳಿದ್ದರು. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.







“ಈ ಹಿಂದೆ ನಾನು ಕೂಡ ಬಹಳ ಮೊಬೈಲ್ ಬಳಸುತ್ತಿದ್ದೆ. ಅದರಿಂದ ತೊಂದರೆ ಆಗುತ್ತದೆ ಎಂದು ತಿಳಿದ ನಂತರ ನಾನು 2019ರಲ್ಲಿ ಮೊಬೈಲ್ ಬಳಸುವುದನ್ನು ನಿಲ್ಲಿಸಿದ್ದೇವೆ. ಮೊಬೈಲ್ ಬಳಕೆ ಅಧಿಕವಾದರೆ ಮುಂದಿನ 10 ವರ್ಷಗಳಲ್ಲಿ ಜಗತ್ತು ಅಂತ್ಯಗೊಳ್ಳುತ್ತದೆ” ಎಂದು ನಿತೀಶ್ ಕುಮಾರ್ ಹೇಳಿದ್ದರು. ಬಿಹಾರದ ಸಿಎಂ ರಾಜ್ಯ ವಿಧಾನಸಭೆಯೊಳಗೆ ಆರ್‌ಜೆಡಿ ಶಾಸಕರಿಗೆ ಛೀಮಾರಿ ಹಾಕುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ಇದಾದ ಬಳಿಕ ವಿರೋಧ ಪಕ್ಷಗಳ ನಾಯಕರು ವಿಧಾನಸಭೆಯೊಳಗೆ ಮೊಬೈಲ್ ಫೋನ್ ಬಳಕೆಯ ಬಗ್ಗೆ ಬಿಹಾರ ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಕ್ಕಾಗಿ ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಇಂದು ನಿತೀಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿದರು. “ಮೊಬೈಲ್ ಫೋನ್‌ಗಳಿಂದಾಗಿ 10 ವರ್ಷಗಳಲ್ಲಿ ಜಗತ್ತು ಕೊನೆಗೊಳ್ಳುತ್ತದೆ ಎಂದು ವಿಧಾನಸಭೆಯಲ್ಲಿ ಸಿಎಂ ಒಬ್ಬರು ಹೇಳುತ್ತಿದ್ದಾರೆ?! ಹುಚ್ಚುತನ ಮತ್ತು ಅಸಂಬದ್ಧ ಮಾತುಗಳಿಗೂ ಒಂದು ಮಿತಿ ಇದೆ!” ಎಂದು ಅವರು ಹೇಳಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*