LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಡಾ ಹಗರಣದ ವಿರುದ್ಧ ನಾಳೆ ಮೈಸೂರು ಚಲೋಗೆ ಸಿದ್ಧವಾದ ಬಿಜೆಪಿ ಹಾಗೂ ಜೆಡಿಎಸ್

ಬೆಂಗಳೂರು: ಅಸಮಾಧಾನ ದೂರ ಮಾಡಿಕೊಂಡಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್, ಮುಡಾ ಹಗರಣದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಮೈಸೂರು ಚಲೋ ಪಾದಯಾತ್ರೆಗೆ ಸಿದ್ಧವಾಗಿವೆ. ಪೂರ್ವನಿಗದಿಯಂತೆ ಆಗಸ್ಟ್ 3ರಿಂದ ಆಗಸ್ಟ್​ 10ರವರೆಗೆ ಬೆಂಗಳೂರಿನಿಂದ ಮೈಸೂರಿನವರೆಗೆ ಜಂಟಿ ಪಾದಯಾತ್ರೆ ನಡೆಯಲಿದೆ. 140 ಕಿ.ಮೀ. ಪಾದಯಾತ್ರೆ ಇದಾಗಿದೆ.


ಬಿಜೆಪಿ ರಾಜ್ಯ ಪದಾಧಿಕಾರಿಗಳು ಆಂತರಿಕ ಸಭೆ ನಡೆಸಿದ್ದು, ಮತ್ತೊಂದು ತಂಡ ಪಾದಯಾತ್ರೆ ಮಾರ್ಗಪಥದ ಸಮೀಕ್ಷೆ, ವಸತಿ, ಉಟೋಪಚಾರ ಸ್ಥಳ ಜೊತೆಗೆ ಬಹಿರಂಗ ಸಭೆಗಳಿಗೆ ಅಗತ್ಯ ಮೈದಾನ ಗುರುತಿಸಿ ಅಂತಿಮಗೊಳಿಸಿದೆ.


ಕೆಂಗೇರಿಯಿಂದ ಪಾದಯಾತ್ರೆ ಆರಂಭ: ಕೆಂಗೇರಿಯ ಕೆಂಪಮ್ಮ ದೇವಸ್ಥಾನ, ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ 9 ಗಂಟೆಗೆ ಪೂಜೆ ಸಲ್ಲಿಸಿ, 7 ದಿನಗಳ ಪಾದಯಾತ್ರೆಗೆ ಚಾಲನೆ ನೀಡಲಾಗುತ್ತಿದೆ. ಇದಕ್ಕಾಗಿ ಸಭಾಮಂಟಪ ಹಾಗೂ ವೇದಿಕೆ ನಿರ್ಮಾಣ ಕಾರ್ಯ ನಡೆದಿದೆ. ಪಾದಯಾತ್ರೆ ಚಾಲನಾ ಕಾರ್ಯಕ್ರಮಕ್ಕೆ 10 ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ನಿರ್ವಹಣೆಗೆ ವಿವಿಧ ಮೋರ್ಚಾಗಳ ಜೊತೆಗೆ ತಂಡಗಳು ರಚನೆಯಾಗಿವೆ. ಮೊದಲ ದಿನದ ಪಾದಯಾತ್ರೆಯನ್ನು ಯುವ ಮೋರ್ಚಾ ನಿರ್ವಹಿಸಲಿದೆ.


ಅಲ್ಲಲ್ಲಿ ಬಹಿರಂಗ ಸಭೆಗಳು: ಕೆಂಗೇರಿಯಲ್ಲಿ ಉದ್ಘಾಟನೆ, ಮೈಸೂರಿನ ಸಮಾರೋಪ ಕಾರ್ಯಕ್ರಮ ಹೊರತುಪಡಿಸಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ ಮತ್ತು ಶ್ರೀರಂಗಪಟ್ಟಣದಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಬೆಳಗ್ಗೆ 10 ಕಿ.ಮೀ. ಮಧ್ಯಾಹ್ನ ಊಟದ ನಂತರ 10 ಕೀ.ಮೀನಂತೆ ಪ್ರತಿದಿನ 20 ಕಿ.ಮೀ. ಕ್ರಮಿಸಲು ಯೋಜಿಸಲಾಗಿದೆ.


ವಿಧಾನಸಭೆ ಕ್ಷೇತ್ರವಾರು 200 ಜನರು ಸೇರಿ ಪ್ರತಿದಿನ ಐದಾರು ಸಾವಿರ ಜನರು ಭಾಗಹಿಸಲಿದ್ದಾರೆ. ವಿಧಾನಸಭೆ, ವಿಧಾನ ಪರಿಷತ್ ಸದಸ್ಯರು ಸೇರಿ ರಾಜ್ಯದ ಎಲ್ಲ ಜಿಲ್ಲೆಗಳ ಮುಖಂಡರು, ಪದಾಧಿಕಾರಿಗಳು ಏಳು ದಿನವೂ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪಾದಯಾತ್ರೆಯ ಯಶಸ್ಸಿಗೆ 20ರಿಂದ 22 ವಿಭಾಗಗಳನ್ನು ರಚಿಸಲಾಗಿದೆ. ಆಗಸ್ಟ್​ 10ರಂದು ಬೆಳಗ್ಗೆ 10.30ಕ್ಕೆ ಮೈಸೂರಿನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.


ಜೆಡಿಎಸ್ ಸಿದ್ಧತೆ: ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಸೂಚನೆ ಮೇರೆಗೆ ಜೆಡಿಎಸ್ ಪಕ್ಷದ ಮುಖಂಡರು, ಸಂಸದರು, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ರಾಜ್ಯ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು, ವಿವಿಧ ವಿಭಾಗಗಳ ರಾಜ್ಯಾಧ್ಯಕ್ಷರು ಹಾಗೂ ತಮ್ಮ ಬೆಂಬಲಿಗರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಬೇಕಾಗಿ ಮಾಜಿ ಸಚಿವ, ಜೆಡಿಎಸ್ ರಾಜ್ಯ ಮಹಾಪ್ರಧಾನ ಕಾರ್ಯದರ್ಶಿ ವೆಂಕಟರಾವ್ ನಾಡಗೌಡ ಮನವಿ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್