Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಬಿಜೆಪಿ ಸಂಚು: ಆಪ್‌ ಗಂಭೀರ ಆರೋಪ

ಹೊಸದಿಲ್ಲಿ: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರಿಗೆ ಜೈಲಿನಲ್ಲಿ ಜೀವ ಬೆದರಿಕೆ ಇದೆ ಎಂದು ಆಪ್‌ ಆತಂಕ ವ್ಯಕ್ತಪಡಿಸಿದೆ. ತಿಹಾರ್‌ನಲ್ಲಿ ಕೇಜ್ರಿವಾಲ್‌ಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡದೇ ಅವರ ಹತ್ಯೆಗೆ ಬಿಜೆಪಿ ಸಂಚು ರೂಪಿಸಿದೆ ಎಂದು ಆಪ್‌ ಗಂಭೀರ ಆರೋಪ ಮಾಡಿದೆ.

ಮಾಧ್ಯಮಗೋಷ್ಠಿ ನಡೆಸಿದ ದಿಲ್ಲಿ ಸಚಿವೆ ಆತಿಷಿ, ಕೇಜ್ರಿವಾಲ್‌ ಅವರನ್ನು ಜೈಲಿಗೆ ತಳ್ಳುವುದು ಮಾತ್ರವಲ್ಲ, ಅವರನ್ನು ಅನಾರೋಗ್ಯಕ್ಕೀಡು ಮಾಡಿ ಕೊಲೆಗೈಯುವ ಸಂಚು ಬಿಜೆಪಿಗಿದೆ. ಸರ್ವಾಧಿಕಾರಿ ತಮ್ಮ ವಿರೋಧಿಗಳನ್ನು ಜೈಲಿಗೆ ತಳ್ಳಿ ಅವರ ಆರೋಗ್ಯ ಹದಗೆಡುವಂತೆ ಮಾಡುತ್ತಿದ್ದಾರೆ. ಕೇಜ್ರಿವಾಲ್‌ಗೆ ಏನಾದರೂ ಹೆಚ್ಚು ಕಡಿಮೆ ಆದರೆ ಅದಕ್ಕೆ ಬಿಜೆಪಿಯೇ ನೇರ ಜವಾಬ್ದಾರಿ ಎಂದು ಹೇಳಿದ್ದಾರೆ.



ಕೇಜ್ರಿವಾಲ್‌ ಕಳೆದ 30 ವರ್ಷಗಳಿಂದ ಸಕ್ಕರೆ ಖಾಯಿಲೆ ಹೊಂದಿರುವ ರೋಗಿ. ಇನ್ಸುಲಿನ್‌ ತೆಗೆದುಕೊಳ್ಳಲು ಅಥವಾ ವೈದ್ಯರನ್ನು ಭೇಟಿ ಮಾಡಲೂ ಅವರಿಗೆ ಬಿಜೆಪಿ ನೇತೃತ್ವದ ಸರ್ಕಾರ ಅವಕಾಶ ನೀಡುತ್ತಿಲ್ಲ. ಕೇಜ್ರಿವಾಲ್‌ಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆಯಾಗಲಿದೆ.


ಸಿಎಂ ಕೇಜ್ರಿವಾಲ್ ಇಡಿ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದಿಂದ ಜಾಮೀನು ಪಡೆದ ತಕ್ಷಣ, ಬಿಜೆಪಿ ಅವರ ಜಾಮೀನು ರದ್ದುಗೊಳಿಸುವಂತೆ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿತ್ತು ಮತ್ತು ನಂತರ ಅವರನ್ನು ಸಿಬಿಐ ಬಂಧಿಸಿತು. ಸಕ್ಕರೆ ಖಾಯಿಲೆಯಿಂದಾಗಿ ಕೇಜ್ರಿವಾಲ್ ಅವರ ಆರೋಗ್ಯ ದಿನೇ ದಿನೇ ಕುಸಿಯುತ್ತಿದೆ. ಅವರ ತೂಕವೂ ಕ್ಷೀಣಿಸುತ್ತಿದೆ ಎಂದು ಎಂದು ಕಳವಳ ವ್ಯಕ್ತಪಡಿಸಿದ್ದಾರೆ.



Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*