LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಯರಗಟ್ಟಿ-ಸವದತ್ತಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಲು ಬಿಜೆಪಿ ಆಗ್ರಹ

 

ಯರಗಟ್ಟಿ: ಅವಳಿ ತಾಲ್ಲೂಕುಗಳನ್ನು ಬರ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಮಂಡಳ ಅಧ್ಯಕ್ಷ ವಿರೂಪಾಕ್ಷ ಮಾಮನಿ ಮಾತನಾಡಿ, ತಾಲ್ಲೂಕಿನಲ್ಲಿ ಶೇ ೨೫ಕ್ಕಿಂತ ಹೆಚ್ಚು ಪ್ರಮಾಣದ ಮಳೆ ಕೊರತೆಯಾಗಿದೆ. ಇದರಿಂದ ಬೆಳೆಗಳು ಸಂಪೂರ್ಣವಾಗಿ ಒಣಗಿದ್ದು, ಕಾಳು ಕಟ್ಟುವ ಹಂತದಲ್ಲಿದ್ದ ಹೆಸರು, ಉದ್ದು, ಗೋವಿನಜೋಳ ನೆಲ ಕಚ್ಚಿದೆ. ಅಲ್ಲದೆ ಶೇಂಗಾ, ಸೋಯಾ, ಹತ್ತಿ ಸೇರಿದಂತೆ ಇನ್ನಿತರ ಬೆಳೆಗಳು ಸಹ ಸಂಪೂರ್ಣವಾಗಿ ಹಾಳಾಗಿವೆ ಎಂದು ಹೇಳಿದರು.ಬಿತ್ತನೆ, ಕಳೆ ಸೇರಿದಂತೆ ಬೆಳೆಗೆ ರೈತರು ಸಾವಿರಾರು ರೂಪಾಯಿ ಖರ್ಚು ಮಾಡಿದ್ದು, ಸಾಲದ ಸುಳಿಯಲ್ಲಿ ಸಿಲುಕಿದ್ದಾರೆ. ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಅರಿಯಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ತಾಲ್ಲೂಕುಗಳನ್ನು ಬರ ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ  ಮಂಡಳ ಉಪಾಧ್ಯಕ್ಷರಾದ ಮಹಾಂತೇಶ ಗೋಡಿ ಹಾಗೂ ಸಂಜುಕುಮಾರ ನವಲಗುಂದ ಮಾತನಾಡಿ, ರೈತರ ಸಂಕಷ್ಟ ಪರಿಗಣಿಸಿ ವೈಜ್ಞಾನಿಕವಾಗಿ ಬೆಳೆ ಹಾನಿಯ ಸಮೀಕ್ಷೆ ನಡೆಸುವ ಮೂಲಕ ಖಚಿತಪಡಿಸಿಕೊಳ್ಳಬೇಕು. ಗೋ ಶಾಲೆ ತೆರೆಯಬೇಕು ಮತ್ತು ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ತೀವ್ರ ನಿಗಾ ವಹಿಸಬೇಕು ಎಂದು ಆಗ್ರಹಿಸಿದರು.

ಪಟ್ಟಣದ ಮಹಾಂತ ದುರದುಂಡೇಶ್ವರ ಮಠದಿಂದ ಹೊರಟ ಪ್ರತಿಭಟನಾ ಮೆರವಣೆಗೆ ಬಾಗವಾ ಚೌಕ್, ಗಾಂಧಿ ವೃತದ ಮೂಲಕ  ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈಯರಗೆ ಮತ್ತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಚಿತ್ರಕ್ಕೆ ಬೆಂಕಿ ಹಚ್ಚಿ  ಪ್ರತಿಭಟನಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಮದುರ್ಗ ಮಂಡಳ ಅಧ್ಯಕ್ಷ ಡಾ. ಕೆ. ವ್ಹಿ. ಪಾಟೀಲ, ಬಿಜೆಪಿ ಮಂಡಳ ಉಪಾಧ್ಯಕ್ಷರಾದ  ಮಹಾಂತೇಶ ಗೋಡಿ, ಸಂಜುಕುಮಾರ ನವಲಗುಂದ, ತಾ. ಪಂ ಮಾಜಿ ಅಧ್ಯಕ್ಷ ಪರ್ವತಗೌಡ ಪಾಟೀಲ, ಈರಣ್ಣಾ ಚಂದರಗಿ, ವೆಂಕಟೇಶ ದೇವರಡ್ಡಿ, ಗೌಡಪ್ಪ ಸವದತ್ತಿ, ವೆಂಕಣ್ಣಾ ಹುರಕನ್ನವರ, ಚೇತನ ಜಕಾತಿ ಕೃಷ್ಣಮೂರ್ತಿ ತೋರಗಲ್ಲ, ಮಹಾಂತೇಶ ಚೆನ್ನಗೌಡರ, ಆನಂದ ಅತ್ತೂಗೋಳ,  ಮಹಾದೇವ ಮುರಗೋಡ, ಈರಣ್ಣಾ ವೀರಶೆಟ್ಟಿ, ಆನಂದ ಬಾಗೋಡಿ, ಸದಾನಂದ ಪಾಟೀಲ, ಕುಮಾರ ಹಿರೇಮಠ, ಬಸವರಾಜ ಕಟ್ಟಿಮನಿ, ಶಿವಾನಂದ ಪಟ್ಟಣಶೆಟ್ಟಿ, ಚಂದ್ರಪ್ಪ ಹೊಸಮನಿ, ಪಂಚು ಪಂಚನ್ನವರ, ಶಂಕರ ದಂಡೈನ್ನವರ, ಚಂದ್ರಶೇಖರ ಸವದತ್ತಿ, ಮೈತ್ರಾ  ಹೊಂಗಲ,  ಲಕ್ಷ್ಮೀ ಪಾಟೀಲ, ಕಸ್ತೂರಿ ಹೊಸೂರ, ಸುಜಾತ ಬೆನಕಟ್ಟಿ, ವಾಜಿರ್ಬಿ ಚೈಪ್ತಿ, ಸಿಕ್ಕುಬಾಯಿ ಕುಂಬಾರ ಸೇರಿದಂತೆ ಅನೇಕರು ಇದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್