LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಬಿಜೆಪಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಮುಷ್ಕರ

ಸಿರುಗುಪ್ಪ : 04:."ತಾಲೂಕಿನ ರೈತರು ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ತಕ್ಷಣವೇ ಅವರ ನೆರವಿಗೆ ಬರಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ" ಎಂದು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಎಚ್ಚರಿಸಿದರು.
ನಗರದ ಸರ್ಕಾರಿ ನೌಕರರ ಆವರಣದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಗುರುವಾರ ಆಯೋಜಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಧರಣಿಯಲ್ಲಿ ಮಾತನಾಡಿದರು.
ತಾಲ್ಲೂಕಿನಲ್ಲಿ ಮಳೆ ಅಭಾವ ಹಾಗೂ ನೀರಾವರಿ ಸಮಸ್ಯೆಯಿಂದ ಬೆಳೆಗಳು ಒಣಗುತ್ತಿದ್ದು, ತಕ್ಷಣವೇ ಸಿರುಗುಪ್ಪ ತಾಲೂಕನ್ನು ‘ಬರಪೀಡಿತ ತಾಲೂಕು’ ಎಂದು ಘೋಷಿಸಬೇಕು. ತುಂಗಭದ್ರಾ ನದಿಗೆ ಸಮರ್ಪಕವಾಗಿ ನೀರು ಹರಿಸುವ ಮೂಲಕ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲ ಮಾಡಿಕೊಡಬೇಕು. ವೇದಾವತಿ ನದಿಗೆ (ಹಗರಿಗೆ) ಎಲ್‌ಎಲ್‌ಸಿ ಕಾಲುವೆ ಮುಖಾಂತರ ತಕ್ಷಣವೇ ನೀರು ಹರಿಸಬೇಕು. ರೈತರು ಕಟ್ಟಿರು ಬೆಳೆ ವಿಮೆ ಪರಿಹಾರ ಹಣವನ್ನು ತಕ್ಷಣವೇ ಜಮಾ ಮಾಡಬೇಕೆಂದು ಒತ್ತಾಯಿಸಿದರು.
ಬಿಜೆಪ ತಾಲ್ಲೂಕು ಅಧ್ಯಕ್ಷ ಕುಂಟ್ನಾಳ ಮಲ್ಲಿಕಾರ್ಜುನ ಸ್ವಾಮಿ, ಬಿಜೆಪಿ ಮುಖಂಡರು, ರೈತ ನಾಯಕರು ಮತ್ತು ಕಾರ್ಯಕರ್ತರು ಇದ್ದರು.
ಸಿರುಗುಪ್ಪ ನಗರದ ಸರ್ಕಾರಿ ನೌಕರರ ಆವರಣದಲ್ಲಿ ಬಿಜೆಪಿ ತಾಲ್ಲೂಕು ಘಟಕದಿಂದ ಗುರುವಾರ ಆಯೋಜಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರ ಧರಣಿಯಲ್ಲಿ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್