Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಿಗಳ, ಪೊಲೀಸರ ನಡೆಗೆ ಬಿಜೆಪಿ ಆಕ್ರೋಶ


ಚನ್ನಮ್ಮನ ಕಿತ್ತೂರು:  ಇಲ್ಲಿನ ಪಟ್ಟಣ ಪಂಚಾಯತ ಸದಸ್ಯ ನಾಗರಾಜ ಅಸುಂಡಿ ಅಪಹರಣದಲ್ಲಿ ಪೊಲೀಸರು ಮತ್ತು ಅಧಿಕಾರಿಗಳು ದಿವ್ಯ  ನಿರ್ಲಕ್ಷ ದೋರಣೆ ತೋರಿ ಸರ್ಕಾರದ ಪರವಾಗಿ, ಜನರ ವಿರುದ್ಧವಾಗಿ ಕಾರ್ಯ ಮಾಡಿ ಜನಪ್ರತಿನಿದಿನಗಳ ಪರವಾಗಿ ಕೆಲಸ ಮಾಡುತ್ತಿದ್ದು, ನಮ್ಮ ಬಿಜೆಪಿ ಪಕ್ಷದ ಕಾರ್ಯಕರ್ತರು ಧಾಖಲೆ ಸಮೇತ ನಾಗರಾಜ ಅಸುಂಡಿ ಅಪಹಾರನಕ್ಕೆ ಬಳಸಿದ ವಾಹನ, ರೆಸಾರ್ಟ್ ಬಗ್ಗೆ ಮಾಹಿತಿ ನೀಡಿದರು ಇನ್ನೂವರೆಗೂ ಕ್ರಮ ಕೈಗೊಂಡಿಲ್ಲ. ನಮ್ಮ ಚನ್ನಮನ ಕಿತ್ತೂರು ಕ್ಷೇತ್ರದಲ್ಲಿ ಗುಂಡಾ ಗರ್ದಿ  ನಡೆಯುವದಿಲ್ಲ ಎಂದು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಆರೋಪ ಮಾಡಿದರು.


    ಅವರು ಸೋಮವಾರದಂದು  ಪಟ್ಟಣದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಲಾಗಿದ್ದ ಪಟ್ಟಣ ಪಂಚಾಯತ ಸದಸ್ಯ ನಾಗರಾಜ್ ಅಸುಂಡಿ ಅಪಹರಣ ಕುರಿತು ಅಧಿಕಾರಿಗಳು, ಪೊಲೀಸ್ ಇಲಾಖೆ ವೈಫಲ್ಯ ಖಂಡಿಸಿ ನಡೆದ  ಪ್ರತಿಭಟನೆಯಲ್ಲಿ ಮಾತನಾಡಿದರು.


     ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ ಈ ಕೃತ್ಯಕ್ಕೆ ಕಾಂಗ್ರೆಸ್ ನೇರ ಹೊಣೆಯಾಗಿದ್ದು ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿಯಲು ತಾಯಿ ಚನ್ನಮ್ಮಾಜಿಯ ಕ್ಷೇತ್ರ ಕಿತ್ತೂರ ನಾಡಿಗೆ ಅಪಮಾನ ಮಾಡುತ್ತಿದೆ ಎಂದರು.


     ಬೆಳಗಾವಿ ಸಂಸದ ಜಗದೀಶ ಶೆಟ್ಟರ ಮಾತನಾಡಿ ಇದು ಕಾಂಗ್ರಸ್ ಪಕ್ಷಕ್ಕೆ ನಾಚಿಕೆಗೆಡಿನ ಸಂಗತಿ ಅಗಿದ್ದು, ಕಾನೂನು, ಸುವ್ಯವಸ್ಥೆ ನಿರ್ಲಕ್ಷಿಸಿ ಕೆಟ್ಟ ಆಡಳಿತ ನಡೆಸುತಿದ್ದೆ ಎಂದರು.


    ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ, ಲಕ್ಷ್ಮೀ ಇನಾಮದಾರ, ಡಾ. ಸೋನಾಲಿ ಸಾರ್ಬೋಬತ, ಬಿಜೆಪಿ ಪದಾಧಿಕಾರಿಗಳಾದ ಸಂದೀಪ್ ದೇಶಪಾಂಡೆ, ಬಸವರಾಜ ಪರವನವರ, ಉಳವಪ್ಪ ಉಳ್ಳಾಗಡ್ಡಿ, ಬಿ ಎಫ್. ಕೊಳದೂರ, ಶ್ರೀಕರ ಕುಲಕರ್ಣಿ, ಶಂಕರ ಮಾಡಲಗಿ, ನಿಂಗನಗೌಡ ದೊಡ್ಡಗೌಡರ, ಮಲ್ಲಿಕಾರ್ಜುನ ಉಳ್ಳಾಗಡ್ಡಿ ಸೇರಿದಂತೆ ಕಿತ್ತೂರು ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ