ಬೆಂಗಳೂರು, ಆಗಸ್ಟ್.19: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಪಾದಯಾತ್ರೆ ನಡೆಸಿದ್ದ ಬಿಜೆಪಿ-ಜೆಡಿಎಸ್ ನಾಯಕರಿಗೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಬ್ರಹ್ಮಾಸ್ತ್ರವಾಗಿ ಸಿಕ್ಕಿದೆ. ಹೀಗಾಗಿ ಇದೇ ಬ್ರಹ್ಮಾಸ್ತ್ರವನ್ನ ಬಳಸಿಕೊಂಡು ಹೋರಾಟಕ್ಕಿಳಿದಿರೋ ದೋಸ್ತಿಗಳು ಇವತ್ತು ಕಾಂಗ್ರೆಸ್ ಸರ್ಕಾರದ (Congress Government) ವಿರುದ್ಧ ಪ್ರತಿಭಟನೆ ಮಾಡಿದ್ರು. ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ರು. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್‌ನ ನಾಯಕರು ಪ್ರತಿಭಟನೆ ನಡೆಸಿ ಸಿಎಂ ವಿರುದ್ಧ ಆಕ್ರೋಶ ಹೊರಹಾಕಿದ್ರು.
ಪ್ರತಿಭಟನೆ ವೇಳೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಈ ಹಿಂದೆ ನೀಡಿದ್ದ ಹೇಳಿಕೆಯೊಂದರ ವಿಡಿಯೋ ಪ್ರದರ್ಶನ ಮಾಡಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದ ಅವಧಿಯಲ್ಲಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದ ವಿಡಿಯೋ ಪ್ರದರ್ಶಿಸಿದ್ದಾರೆ. ವಿಡಿಯೋ ಪ್ಲೇ ಮಾಡಿ, ಸಿದ್ದರಾಮಯ್ಯ ಹೇಳಿಕೆ ನೀಡಿದ್ದ ಆಡಿಯೋವನ್ನ ಪ್ರತಿಭಟನೆಯಲ್ಲೇ ಪ್ರಸಾರ ಮಾಡಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.