LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ ಶಾಸಕರು ಪ್ರತಿಭಟನೆ; ನ್ಯಾಯಾಂಗ ತನಿಖೆಗೆ ಆಗ್ರಹ


ಬೆಳಗಾವಿ: ಪಂಚಮಸಾಲಿ ಲಿಂಗಾಯತ ಹೋರಾಟಗಾರರ ಮೇಲಿನ ಲಾಠಿ ಚಾರ್ಜ್ ಖಂಡಿಸಿ ಬಿಜೆಪಿ ಶಾಸಕರು ಸುವರ್ಣಸೌಧದ ಮುಂಭಾಗದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಕಾಂಗ್ರೆಸ್ ಸರ್ಕಾರವು ವಾಕ್ ಸ್ವಾತಂತ್ರ್ಯ, ಹೋರಾಟ ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದು ಲಿಂಗಾಯತ ವಿರೋಧಿ ಸರ್ಕಾರ ಎಂದು ಧಿಕ್ಕಾರ ಕೂಗಿದರು. ಪ್ರಜಾಪ್ರಭುತ್ವ ಧಮನ ಮಾಡುತ್ತಿದೆ, ಸರ್ವಾಧಿಕಾರ ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ, ಅಲ್ಪಸಂಖ್ಯಾತರಿಗೆ ಕೋಟಿ ಕೋಟಿ ಲಿಂಗಾಯತರಿಗೆ ಲಾಠಿ ಏಟು ಎಂಬ ಘೋಷಣೆಗಳೊಂದಿಗೆ ಶಾಸಕರು ಆಕ್ರೋಶ ಹೊರಹಾಕಿದರು.


ಕಾಂಗ್ರೆಸ್ ಸರ್ಕಾರ ಸ್ವಾಮಿಗಳ ಕ್ಷಮೆಯಾಚಿಸಬೇಕು. ಹಲ್ಲೆ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡಬೇಕು'' ಎಂದು ಆಗ್ರಹಿಸಿದರು.


ಸಿಎಂ ಸಿದ್ದರಾಮಯ್ಯ ಕುಮ್ಮಕ್ಕಿನಿಂದ ಲಾಠಿ ಪ್ರಹಾರ: ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ''ಶಾಂತಿಯುತ ಪಂಚಮಸಾಲಿ ಮೀಸಲಾತಿ ಹೋರಾಟದ ಮೇಲೆ ಸಿಎಂ ಕುಮ್ಮಕ್ಕಿನಿಂದ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಈ ಮುಂಚೆನೂ ಸಿಎಂ ಆಗಿದ್ದಾಗ ಲಿಂಗಾಯತ ಸಮಾಜದ ವಿರುದ್ಧ ಸಿದ್ದರಾಮಯ್ಯ ಅವರು ಒಡೆದು ಆಳುವ ನೀತಿ ಅನುಸರಿಸಿದ್ದರು. ಇಂದು ಶಾಂತಿಯುತವಾಗಿ ಧರಣಿ ನಡೆಯುತ್ತಿರುವಾಗ ಪೊಲೀಸರನ್ನು ಛೂ ಬಿಟ್ಟಿದ್ದೀರಿ. ಸಿದ್ದರಾಮಯ್ಯ ಅವರೇ ನಿಮಗೆ ಪ್ರಜಾಪ್ರಭುತ್ವದ ಮೇಲೆ ವಿಶ್ವಾಸ ಇಲ್ಲವೇ? ಎಂದು ಪ್ರಶ್ನಿಸಿದರು.





''ಮೀಸಲಾತಿ ಹೋರಾಟ ನಡೆದಾಗ ಸೌಜನ್ಯ ಇದ್ದಿದ್ದರೆ ಸಿಎಂ ಅವರು ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಭೇಟಿಯಾಗಬೇಕಿತ್ತು.‌ ಸಿಎಂ ಸಿದ್ದರಾಮಯ್ಯ ಅಹಂ, ದುರಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ. ಅಧಿಕಾರ ಎಂಬುದು ಶಾಶ್ವತ ಅಲ್ಲ. ನೀವು ಅಧಿಕಾರವನ್ನು ಸದ್ಬಳಕೆ ಮಾಡದೇ, ಜಾತಿ, ಧರ್ಮ ಮಧ್ಯೆ ವಿಷ ಬೀಜ ಬಿತ್ತಿದ್ದೀರಿ. ಲಾಠಿ ಪ್ರಹಾರ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದೆ‌. ಸ್ವಾಮಿಗಳು ಹಾಗೂ ಪಂಚಮಸಾಲಿ ಸಮಾಜದ ಕ್ಷಮಾಪಣೆ ಕೇಳಬೇಕು. ದೌರ್ಜನ್ಯ ಮಾಡಿದ ಪೊಲೀಸರ ವಿರುದ್ಧ ಕ್ರಮ ತೆಗದುಕೊಳ್ಳಬೇಕು'' ಎಂದು ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆಕಾಗವಾಡದ ಮಲ್ಲಿಕಾರ್ಜುನ ವಿದ್ಯಾಲಯದಲ್ಲಿ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆವಿಕಾಸ ಯುವಕ ಮಂಡಳದ ತಿಲಕ ಪ್ರಶಸ್ತಿ ಪ್ರಕಟ. : ಸ್ಲಂ ನಲ್ಲಿ ಅರಳಿದ ತಿಲಕರ ಆಶಯ  ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಿ ಪ್ರತಿಭಟನೆ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆ