LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪ್ರಧಾನಿ ಮೋದಿ ಪ್ರಮಾಣ ವಚನ ವೇಳೆ ಬಿಜೆಪಿ ಕಚೇರಿಗೆ ಬೆಂಕಿ

ಇಂದೋರ್​,10: ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ವೇಳೆ ಬಿಜೆಪಿ ಕಚೇರಿ ಹೊತ್ತಿ ಉರಿದಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ಭಾನುವಾರ ರಾತ್ರಿ ಮಧ್ಯಪ್ರದೇಶದ ಇಂದೋರ್‌ನಲ್ಲಿರುವ ನಾಲ್ಕು ಅಂತಸ್ತಿನ ಬಿಜೆಪಿ ಕಚೇರಿಯ ಮೇಲ್ಛಾವಣಿಗೆ ಬೆಂಕಿ ಆವರಿಸಿದ್ದು, ಪಕ್ಷದ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರದ ವೇಳೆ ಪಟಾಕಿ ಸಿಡಿಸಿದ್ದರು.

ಕಟ್ಟಡದ ಮೇಲ್ಛಾವಣಿಯಲ್ಲಿದ್ದ ಪ್ಲೈವುಡ್, ಹಳೆಯ ಸೋಫಾ, ತ್ಯಾಜ್ಯ ವಸ್ತುಗಳು ಮತ್ತು ಇತರ ಪೀಠೋಪಕರಣಗಳ ತುಣುಕುಗಳಿಗೆ ಕೆಲವು ಬೆಂಕಿ ಕಿಡಿಗಳು ತಾಗಿ ಹೊತ್ತಿ ಉರಿದಿವೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. “ಬಿಜೆಪಿ ಕಚೇರಿಯ ಕೆಳಗೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾಗ, ರಾಕೆಟ್ ಅಥವಾ ಪಟಾಕಿಗಳಿಂದ ಕಚೇರಿಯ ಮೇಲಿನ ಮಹಡಿ, 4 ನೇ ಮಹಡಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಇಂದೋರ್ ಎಸಿಪಿ ತುಷಾರ್ ಸಿಂಗ್ ಹೇಳಿದ್ದಾರೆ.

ಸೋಫಾ ಹಾಗೂ ಕೆಲವು ತ್ಯಾಜ್ಯ ವಸ್ತುಗಳು ಅಲ್ಲಿ ಬಿದ್ದಿದ್ದರಿಂದ ಬೆಂಕಿ ಹೊತ್ತಿಕೊಂಡಿತ್ತು, ಸಮಯಕ್ಕೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು ಮತ್ತು ಹೆಚ್ಚಿನ ಹಾನಿಯಾಗಿಲ್ಲ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆ ಮುಗಿದಿದ್ದು ಫಲಿತಾಂಶ ಹೊರಬಿದ್ದಿದೆ, ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರವು ಬಹುಮತ ಪಡೆದಿದೆ. ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್