Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ' ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜೂನ್‌ 24: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿ ಸಂವಿಧಾನಕ್ಕೆ ಅಪಚಾರ ಮಾಡಿದ್ದ ಕಾಂಗ್ರೆಸ್ ಪಕ್ಷ ಮತ್ತು​ ನಾಯಕ ರಾಹುಲ್‌ ಗಾಂಧಿ ರಾಮ್‌ಲೀಲಾ ಮೈದಾನದಲ್ಲಿ ತಲೆಬಾಗಿ ನಿಂತು ಜನರಿಗೆ ಕ್ಷಮೆ ಕೇಳಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ನಡೆದ ತುರ್ತು ಪರಿಸ್ಥಿತಿ ಸಂಬಂಧ ರಾಹುಲ್‌ ಗಾಂಧಿ ಕ್ಷಮೆ ಕೋರಬೇಕೆಂಬ ಆಗ್ರಹದ ಪೋಸ್ಟರ್‌ ಅಭಿಯಾನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಾ.ಬಿ.ಆರ್.ಅಂಬೇಡ್ಕರ್‌ ರಚಿಸಿದ ಸಂವಿಧಾನವನ್ನು ಮೂಲೆಗೆ ತಳ್ಳಿ ಸರ್ವಾಧಿಕಾರಿ ಧೋರಣೆ ತೋರಿದ ಕಾಂಗ್ರೆಸ್‌ ಪಕ್ಷ ಹಾಗೂ ಇಂದಿರಾ ಗಾಂಧಿ ರಾತ್ರೋರಾತ್ರಿ ತುರ್ತು ಪರಿಸ್ಥಿತಿ ಹೇರಿದ್ದರು. ನ್ಯಾಯಾಂಗ ವ್ಯವಸ್ಥೆಯನ್ನು ಕಪಿಮುಷ್ಟಿಗೆ ತೆಗೆದುಕೊಂಡು, ಪತ್ರಕರ್ತರನ್ನು ಜೈಲಿಗೆ ಹಾಕಿದ್ದರು. ಎಲ್‌.ಕೆ.ಅಡ್ವಾಣಿ, ಅಟಲ್‌ ಬಿಹಾರಿ ವಾಜಪೇಯಿ ಮೊದಲಾದ ಘಟಾನುಘಟಿ ನಾಯಕರನ್ನು ಜೈಲಿಗೆ ತಳ್ಳಿದ್ದರು ಎಂದರು.

ಆಗ ನಾನು ವಿವಿ ಪುರ ಕಾಲೇಜಿನಲ್ಲಿ ಮೊದಲ ಪಿಯುಸಿ ವಿದ್ಯಾರ್ಥಿಯಾಗಿದ್ದೆ. ಯಶವಂತಪುರ ಸರ್ಕಲ್‌ನಲ್ಲಿ ಆರ್‌ಎಸ್‌ಎಸ್‌ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಇಂದಿರಾಗಾಂಧಿ ವಿರುದ್ಧ ಎರಡು ವಾಕ್ಯ ಘೋಷಣೆ ಕೂಗಿದ್ದೆ. ಆಗ ಯಶವಂತಪುರ ಪೊಲೀಸರು ಬಂಧಿಸಿ ಚಿತ್ರಹಿಂಸೆ ನೀಡಿದ್ದರು. ನಮ್ಮ ಇಡೀ ಕುಟುಂಬದಲ್ಲಿ ಆರ್‌ಎಸ್‌ಎಸ್‌ನವರೇ ಇದ್ದರು. ಅವರು ಕೂಡ ತಲೆಮರೆಸಿಕೊಳ್ಳಬೇಕಾಯಿತು. ನಾನು ಒಂದು ತಿಂಗಳು ಸ್ವಾತಂತ್ರ್ಯ ಉದ್ಯಾನದ ಜೈಲಿನಲ್ಲಿದ್ದೆ. 200 ಜನರಿಗೆ ಒಂದು ಶೌಚಾಲಯವಿತ್ತು. ಊಟ ಕೂಡ ಕೊಡುತ್ತಿರಲಿಲ್ಲ. ಆ ಕಷ್ಟಗಳು ಈಗಲೂ ನೆನಪಿನಲ್ಲಿದೆ. ಜನರಿಗೆ ಅಷ್ಟು ಕಿರುಕುಳ ನೀಡಿದ ಕಾಂಗ್ರೆಸ್‌ ಈಗ ಅಧಿಕಾರದಲ್ಲಿದೆ ಎಂದು ಕಿಡಿಕಾರಿದರು.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*