LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bellary

ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚನೆಗೆ ಆಗ್ರಹ

ಬಳ್ಳಾರಿ, ಅ.28:.p.ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ದಿವಂಗತ ತಂದೆಯವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯನ್ನು ಖಂಡಿಸಿ, ಬಳ್ಳಾರಿಯ ರಾಯಲ್ ವೃತ್ತದಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ ನೇತೃತ್ವದಲ್ಲಿ ಬಿಜೆಪಿ ನಗರ ಮಂಡಲದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗಾಲಿ ಸೋಮಶೇಖರ ರೆಡ್ಡಿ, ಖರ್ಗೆ ಅವರು ತಮ್ಮ ಹೇಳಿಕೆಗೆ ಬಹಿರಂಗವಾಗಿ ಬೇಷರತ್ತಾಗಿ ಕ್ಷಮೆಯಾಚಿಸಬೇಕು ಹಾಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ರಾಜಕೀಯದಲ್ಲಿ ವೈಯಕ್ತಿಕ ನಿಂದನೆಗಳಿಗೆ ಅವಕಾಶ ನೀಡಬಾರದು. ನಾಯಕರು ಪರಸ್ಪರ ಗೌರವದಿಂದ ನಡೆದುಕೊಳ್ಳಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿಯ ಕೆ.ಎಸ್ ದಿವಾಕರ್, ವೆಂಕಟರಮಣ, ಗೋವಿಂದರಾಜುಲು, ಹೆಚ್. ಹನುಮಂತಪ್ಪ, ವೇಮಣ್ಣ, ಶ್ರೀನಿವಾಸ್ ಮೊತ್ಕಾರ್, ಗುಡಿಗಂಟಿ ಹನುಮಂತ, ಹಂಪಿ ರಮಣ ಸೇರಿದಂತೆ ಜಿಲ್ಲಾ ಹಾಗೂ ನಗರ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಮುಖಂಡರು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಾಹಿತಿ ಪ್ರೊ.ಗದ್ದಿಗೌಡರ  ಅವರ ಸಾಹಿತ್ಯ ಸೇವೆ ಅಪಾರ:ಅಶೋಕ ಚಂದರಗಿ   ಸಾಮಾಜಿಕ ಜಾಲತಾಣಗಳು ಹಾಗೂ ಬ್ಲಾಕ್‌ಮೇಲ್ ವಿರುದ್ಧ ಎಚ್ಚರ ವಹಿಸಲು ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆಬಳ್ಳಾರಿ ಜಿಲ್ಲೆ ಮತದಾರರ ಅಂತಿಮ ಪಟ್ಟಿ ಪ್ರಕಟ: ಒಟ್ಟು 10,20,443 ಮತದಾರರುಬಳ್ಳಾರಿ ಕನ್ನಡ ರಾಜ್ಯೋತ್ಸವ: ಧ್ವಜಾರೋಹಣ ನೆರವೇರಿಸಲಿರುವ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ನ.01 ರಂದು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಕ್ಷಮೆಯಾಚನೆಗೆ ಆಗ್ರಹರೂಪನಗುಡಿ ರಸ್ತೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಬಳ್ಳಾರಿಯಲ್ಲಿ ಬೇಸ್‌ಮೆಂಟ್ ಪಾರ್ಕಿಂಗ್ ದುರ್ಬಳಕೆ ತಡೆಗೆ ಸಿದ್ದೇಶ ಊಳೂರು ಆಗ್ರಹಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 59ನೇ ವರ್ಷಾಚರಣೆಯಲ್ಲಿ  ಜಾತಿ  ತಾರತಮ್ಯ  ಸಿಪಿಐ(ಎಂ)ಖಂಡನೆಜಿಲ್ಲೆಯಲ್ಲಿ 10.8 ಲಕ್ಷ ಮತದಾರರು; 14,210 ಹೊಸ ಮತದಾರರ ಸೇರ್ಪಡೆ : ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ