Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲಿನ ಪ್ರೋತ್ಸಾಹ ಧನ ನೀಡಲು ಅಗ್ರಹಿಸಿ ಬಿಜೆಪಿ ಪ್ರತಿಭಟನೆ

ಬೆಳಗಾವಿ. ರಾಜ್ಯ ಸರ್ಕಾರ ರೈತರಿಗೆ ಶೀಘ್ರವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಹಾಗೂ ಹಾಲಿನ ಪ್ರೋತ್ಸಾಹ ಧನವನ್ನು ಐದರಿಂದ ಹತ್ತು ರೂಪಾಯಿಗೆ ಏರಿಕೆ ಮಾಡಬೇಕು ಮತ್ತು ಸದ್ಯ ಗ್ರಾಹಕರಿಗೆ ಏರಿಕೆ ಮಾಡಿರುವ ಹಾಲಿನ ದರ ಏರಿಕೆಯನ್ನು ಹಿಂಪಡೆಯಲು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ ಮನವಿ ನೀಡಲಾಯಿತು.


ಹಾಲಿನ ಕ್ಯಾನ್ ಗಳನ್ನು ಪ್ರದರ್ಶಿಸಿ  ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕುತ್ತಾ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.


ಬೆಳಗಾವಿ ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಎದುರು ಭಾರತೀಯ ಜನತಾ ಪಾರ್ಟಿ ರೈತ ಮೋರ್ಚಾ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾ.ಜ.ಪ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ  ಸುಭಾಷ್  ಪಾಟೀಲ್ ಮಾತನಾಡಿ ರಾಜ್ಯ ಸರ್ಕಾರ ಹಾಲಿನ  ದರವನ್ನು ಏರಿಸಿ ರಾಜ್ಯಾದ್ಯಂತ ಜನ ವಿರೋಧಿ ನೀತಿಯನ್ನ ಅನುಸರಿಸುತ್ತಿದ್ದು ಇದು ಜನರ ಮೇಲೆ ಸರ್ಕಾರ ಲೋಕಸಭೆ ಚುನಾವಣೆಯ ಸೋಲಿನ ಪ್ರತಿಕಾರವನ್ನು ತೀರಿಸಿಕೊಂಡಂತೆ ಕಾಣುತ್ತಿದೆ ಎಂದು ಹೇಳಿದರು.

ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ ಶೀಘ್ರವೇ ಹಾಲಿನ ದರವನ್ನು ಇಳಿಕೆ ಮಾಡಿ ಜೊತೆಗೆ ಅಗತ್ಯ ವಸ್ತುಗಳ ಬೆಲೆಯನ್ನು ಏರಿಸುತ್ತಿರುವುದನ್ನು ನಿಲ್ಲಿಸಿ ಜನಪರ ಆಡಳಿತವನ್ನು ನೀಡಬೇಕು ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕೆಂದು ಹೇಳಿದರು.


ಮಹಾನಗರ ಜಿಲ್ಲಾ ಅಧ್ಯಕ್ಷರಾದ ಗೀತಾ ಸುತಾರ ಮಾತನಾಡಿ ರಾಜ್ಯ ಸರ್ಕಾರವು ರೈತರಿಗೆ ಶಿಘ್ರವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಹಾಗೂ ಹಾಲಿನ ಪ್ರೋತ್ಸಾಹ ಧನವನ್ನು 5 ರಿಂದ 10 ರೂಪಾಯಿಗೆ ಏರಿಕೆ ಮಾಡಬೇಕು ಜೋತೆಗೆ ಸದ್ಯ ಏರಿಕೆ ಮಾಡಿರುವ ಗ್ರಾಹಕರ ಹಾಲಿನ ದರ ಇಳಿಸಬೇಕೆಂದು ಹೇಳಿದರು.

ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ ಮಾತನಾಡಿ ಕಾಂಗ್ರೆಸ್ ಸರ್ಕಾರ ರೈತರಿಗೆ ಶಿಘ್ರವೇ  ಹಾಲಿನ ಪ್ರೋತ್ಸಾಹ ಧನವನ್ನು 5 ರಿಂದ 10 ರೂಪಾಯಿಗೆ ಏರಿಕೆ ಮಾಡಬೇಕು. ಏರಿಕೆ ಮಾಡಿರುವ ಗ್ರಾಹಕರ ಹಾಲಿನ ದರವನ್ನು ಶೀಘ್ರವೇ ಇಳಿಕೆ ಮಾಡದಿದ್ದರೆ ರೈತ ಮೋರ್ಚಾ ನೇತೃತ್ವದಲ್ಲಿ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಮಾಡಲಾಗುವುದು ಅದಕ್ಕೆ ಸರ್ಕಾರವೇ ಹೊಣೆ ಯಾಗುತ್ತದೆ ಎಂದು ಹೇಳಿದರು.


ಈ ಸಂದರ್ಭದಲ್ಲಿ ಮಹಾನಗರ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಲ್ಲಪ್ಪ ಶಹಪುರಕರ್, ರಾಜ್ಯ ಮಾಧ್ಯಮ ಸಮಿತಿ ಸದಸ್ಯ ಎಫ್ ಎಸ್ ಸಿದ್ದನಗೌಡರ್, ರಾಜ್ಯ ಸಾಮಾಜಿಕ ಜಾಲತಾಣ ಸಮಿತಿ ಸದಸ್ಯ ನಿತಿನ್ ಚೌಗಲೆ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಶ್ರೀ ದೇಸಾಯಿ, ರಾಜಶೇಖರ್ ಡೋಣಿ, ಮಲ್ಲಿಕಾರ್ಜುನ್ ಮಾದಮ್ಮನವರ್, ಸಚಿನ್ ಕಡಿ, ಈರಣ್ಣ ವಾರದ, ಚಂದ್ರಶೇಖರಯ್ಯ ಹಿರೇಮಠ್, ಸಂತೋಷ ಹಡಪದ, ಶಂಕರ್ ಚೌಡಣ್ಣವರ, ಲಕ್ಕಪ್ಪ ಕಾರಗಿ, ಸುಭಾಷ್ ತುರಮರಿ, ವಿಠ್ಠಲ್ ಸಾಯಣ್ಣವರ, ಲೀನಾ ಟೋಪಣ್ಣವರ್, ರಾಮು ಸಲಬಯ್ಯನವರಮಠ ಹಾಗೂ ಅನೇಕ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ