LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

‘ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್‌' ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ  ಕಿಡಿ

ಬೆಂಗಳೂರು, ಜು.02: ಆರ್ಥಿಕ ಮುಗ್ಗಟ್ಟು ಕುರಿತು ಸರ್ಕಾರಕ್ಕೆ ಇಂಧನ ಇಲಾಖೆ ಬರೆದ ಪತ್ರ ಉಲ್ಲೇಖಿಸಿ ಇಂದು  ರಾಜ್ಯ ಬಿಜೆಪಿ  ಘಟಕ ತನ್ನ ‘ಎಕ್ಸ್’ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದೆ. ‘ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್‌ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಾಗ್ದಾಳಿ ನಡೆಸಿದೆ.

ಜೊತೆಗೆ ‘ದೈನಂದಿನ ಖರ್ಚಿಗೂ ಹಣವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿ ಪಾವತಿಸಿ ಎಂದು ಪತ್ರ ಬರೆದಿರುವುದು, ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸ್ಪಷ್ಟ ನಿದರ್ಶನವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ, ಕರ್ನಾಟಕ ಬರ್ಬಾದ್‌ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯ, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ ಎಂದು ಬಿಜೆಪಿ ಘಟಕ ಕಿಡಿಕಾರಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್