Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಮಾಡೆಲ್‌ಗಳನ್ನು ಕಾಪಿ ಮಾಡುವುದೇ ಬಿಜೆಪಿ ಕೆಲಸ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ

ಬೆಂಗಳೂರು: ಬಿಜೆಪಿಯವರು ಮಾತನಾಡುವುದು ಒಂದು, ಮಾಡುವುದು ಮತ್ತೊಂದು. ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಕಾಪಿ ಹೊಡೆದು ಪಾಸಾಗಿರುವ ಸ್ಟೂಡೆಂಟ್ಸ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಟೀಕಿಸಿದ್ದಾರೆ.


ಮುಂಬರುವ ಬಿಹಾರ ಚುನಾವಣೆಗೆ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಘೋಷಿಸಿರುವ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ ನರೇಗಾ, ಆಧಾರ್ ಕಾರ್ಡ್ ಜಾರಿಗೆ ತರುವುದನ್ನು ವಿರೋಧ ಮಾಡಿದ್ದರು. ದೇಶದಲ್ಲಿ ಉತ್ತಮ ಯೋಜನೆಗಳನ್ನು ವಿರೋಧಿಸಿದರು. ಆದರೀಗ ನಮ್ಮ ಯೋಜನೆಗಳನ್ನೇ ಅನುಸರಿಸುತ್ತಿದ್ದಾರೆ ಎಂದರು.


ಮಹಿಳಾ ಸಬಲೀಕರಣಕ್ಕೆ ಗ್ಯಾರಂಟಿ ಯೋಜನೆಗಳನ್ನು ಮಾಡಿದ್ದೆವು. ಇದೀಗ ಕರ್ನಾಟಕದಲ್ಲಿ ಯಶಸ್ವಿಯಾಗಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದನ್ನು ನೋಡಿದ ಬಿಜೆಪಿಗರು, ಮಹಾರಾಷ್ಟ್ರ, ದೆಹಲಿಯಲ್ಲಿ ನಮ್ಮ ಯೋಜನೆಗಳನ್ನು ಘೋಷಣೆ ಮಾಡಿ ಚುನಾವಣೆ ಗೆದ್ದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.


ಕೇಂದ್ರದ ಬಿಜೆಪಿ ನಾಯಕರು ಕರ್ನಾಟಕಕ್ಕೆ ಬಂದಾಗಲೆಲ್ಲಾ ಗ್ಯಾರಂಟಿ ಯೋಜನೆಗಳನ್ನು ಟೀಕೆ ಮಾಡುತ್ತಾರೆ. ಆದರೆ, ಕರ್ನಾಟಕ ಮಾಡೆಲ್ ಇಟ್ಟುಕೊಂಡು ನರೇಂದ್ರ ಮೋದಿ ರಾಜಕಾರಣ ಮಾಡುತ್ತಿದ್ದಾರೆ. ಕರ್ನಾಟಕದ ಯೋಜನೆಗಳನ್ನ ಹಾಗೂ ಮಾಡೆಲ್ ಅನ್ನು ಟೀಕೆ ಮಾಡುವ ನೈತಿಕತೆ ಇದೆಯೇ ಎಂದು ಸಚಿವರು ಪ್ರಶ್ನಿಸಿದರು.


* *ಪೀಠಕ್ಕೆ ಬೀಗ ಹಾಕಿದ್ದು ಸರಿಯಿಲ್ಲ*

ಕೂಡಲ ಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಈ ವಿಷಯದಲ್ಲಿ ನಾನು ಕಾಂಗ್ರೆಸ್, ಬಿಜೆಪಿ ಅಂತ ಮಾತನಾಡುವುದಿಲ್ಲ. ಪೀಠಕ್ಕೆ ಬೀಗ ಹಾಕಿದ್ದು ಸಭ್ಯತೆ ಅಲ್ಲ. ಇದನ್ನು ಖಂಡಿಸುತ್ತೇನೆ. ನಾನು ಗುರುಗಳ ಸಂಪರ್ಕದಲ್ಲಿದ್ದೇನೆ. ಶ್ರೀಗಳು ನಾಡಿದ್ದು ಬೆಳಗಾವಿಗೆ ಬರುತ್ತಿದ್ದು, ಈ ಬಗ್ಗೆ ಗುರುಗಳ ಜೊತೆ ಮಾತನಾಡುತ್ತೇನೆ ಎಂದರು.


ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಮಾತಿಗೆ ಬೆಲೆ ಕೊಡುವುದು ಬೇಡ. ಪಂಚಮಸಾಲಿ ಸಮುದಾಯದ ಮೀಸಲಾತಿಗೆ ಲಕ್ಷ್ಮೀ ಹೆಬ್ಬಾಳಕರ್ ಏನು ಮಾಡಿದ್ದಾರೆ ಎಂಬುದು ಅವರಿಗೆ ಗೊತ್ತಿಲ್ಲ. ಸರ್ಕಾರದಲ್ಲಿ ನಾವು ಏನು ಒತ್ತಡ ಹೇರುತ್ತಿದ್ದೇವೆ ಎಂದು ಬೆಲ್ಲದ್ ಅವರಿಗೆ ಗೊತ್ತಿಲ್ಲ ಎಂದು ಸಚಿವರು ತಿರುಗೇಟು ನೀಡಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ