Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಂಜಲಿ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ರ್‍ಯಾಲಿ

ಹುಬ್ಬಳ್ಳಿ,16 : ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಅಂಜಲಿ ಹತ್ಯೆಯು ಹುಬ್ಬಳ್ಳಿಯಲ್ಲಿ ಜನತೆಯನ್ನು ಬೆಚ್ಚಿ ಬೀಳಿಸಿದೆ. ಇದೀಗ ಅಂಜಲಿ ಹತ್ಯೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ರ್‍ಯಾಲಿ ನಡೆಸಿದರು.


ನಗರದ ವೀರಾಪೂರ ಓಣಿಯಿಂದ ಶಹರ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಿದ ಪ್ರತಿಭಟನಾಕಾರರು, ಪಗಡಿಗಲ್ಲಿಯಲ್ಲಿ ಟೈರ್​ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು. ಅವಳಿ ನಗರದಲ್ಲಿ ಪೊಲೀಸ್ ಠಾಣೆಗೆ ದೂರು ಕೊಟ್ಟರೆ ಪೊಲೀಸ್ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಹಾಗೂ ಸರ್ಕಾರ ಮಹಿಳೆಯರಿಗೆ ರಕ್ಷಣೆಯನ್ನು ನೀಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ ನೀಡಿ ಎನ್​ಕೌಂಟರ್ ಮಾಡಬೇಕು ಎಂದು ಆಗ್ರಹಿಸಿದರು.


ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಶಹರ ಪೊಲೀಸ್ ಠಾಣೆ ಮುಂಭಾಗದಲ್ಲಿ ಪೊಲೀಸ್ ಬಿಗಿ ಭದ್ರತೆ ವಹಿಸಿದ್ದು ಕಂಡುಬಂತು. ಅಂಜಲಿ ಹತ್ಯೆ ಖಂಡಿಸಿ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

Advertisement

ರಾಜ್ಯದಲ್ಲಿ ‌ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಕೊಲೆ ಆರೋಪಿ ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೆ, ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಎಂದು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಪರಿಸ್ಥಿತಿ ಕೈಮೀರುವುದನ್ನು ಅರಿತ ಪೊಲೀಸರು ಐವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*