LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

'ಬಿಜೆಪಿಯದು ಒಡೆದು ಆಳುವ ರಾಜಕಾರಣ: ಮೋದಿ ಮುಸ್ಲಿಂ ಲೀಗ್‌ ಹೇಳಿಕೆಗೆ ಕಾಂಗ್ರೆಸ್ ಟಾಂಗ್




ನವದೆಹಲಿ,ಏ.06: ಪಕ್ಷದ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ಕಾಂಗ್ರೆಸ್ ಶನಿವಾರ ತಿರುಗೇಟು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚರಿತ್ರೆಯ ಅರಿವು ಇಲ್ಲ. ಏಕೆಂದರೆ 1940ರ ದಶಕದ ಆರಂಭದಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರೇ ಬಂಗಾಳದಲ್ಲಿ ಮುಸ್ಲಿಂ ಲೀಗ್ ಜೊತೆ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದರು. ಬಿಜೆಪಿಯು "ಒಡೆದು ಆಳುವ ರಾಜಕಾರಣ" ಮಾಡುತ್ತಿದೆ ಎಂದು ಆರೋಪಿಸಿದೆ.




ಸಹರಾನ್‌ಪುರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ, ಆದರೆ ಅದರಲ್ಲಿ ಎಡಪಂಥೀಯರ ಪ್ರಾಬಲ್ಯವಿದೆ ಎಂದು ಹೇಳಿದ್ದರು.

ಪ್ರಧಾನಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, "ಪ್ರಧಾನಿ ಅವರಿಗೆ ಅವರ ಇತಿಹಾಸ ತಿಳಿದಿಲ್ಲ, ವಾಸ್ತವವಾಗಿ, ಆಗ ಹಿಂದೂ ಮಹಾಸಭಾದ ಅಧ್ಯಕ್ಷರಾಗಿದ್ದವರು ಮುಖರ್ಜಿಯ ಹೊರತು ಬೇರೆ ಯಾರೂ ಅಲ್ಲ, ಅವರು ಸ್ವತಃ ಬಂಗಾಳದಲ್ಲಿ ಮುಸ್ಲಿಂ ಲೀಗ್‌ ಜೊತೆಗಿನ ಸಮ್ಮಿಶ್ರ ಸರ್ಕಾರದ ಭಾಗವಾಗಿದ್ದರು. ಸಿಂಧ್ ಹಾಗೂ ವಾಯುವ್ಯ ಪ್ರದೇಶದಲ್ಲೂ ಮುಸ್ಲಿಂ ಲೀಗ್ ಜೊತೆಗೆ ಹಿಂದೂ ಮಹಾಸಭಾ ಹೊಂದಾಣಿಕೆ ಮಾಡಿಕೊಂಡಿತ್ತು ಎಂದು ತಿರುಗೇಟು ನೀಡಿದರು. ಒಡೆದು ಆಳುವ ರಾಜಕಾರಣದಲ್ಲಿ ನಂಬಿಕೆ ಮತ್ತು ಆಚರಣೆ ಮಾಡುತ್ತಿರುವುದು ಬಿಜೆಪಿಯೇ ಹೊರತು ಕಾಂಗ್ರೆಸ್ ಅಲ್ಲ ಎಂದು ರಮೇಶ್ ಹೇಳಿದ್ದಾರೆ.








ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಅವರ ಸಮ್ಮುಖದಲ್ಲಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಲೋಕಸಭಾ ಚುನಾವಣೆಗೆ ಪಕ್ಷದ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಶುಕ್ರವಾರ ಬಿಡುಗಡೆ ಮಾಡಿತ್ತು. ಪ್ರಣಾಳಿಕೆಗೆ ನ್ಯಾಯ ಪತ್ರ ಎಂದು ಹೆಸರಿಟ್ಟಿರುವ ಕಾಂಗ್ರೆಸ್, 25 ಗ್ಯಾರಂಟಿಗಳನ್ನು ಘೋಷಿಸಿದೆ.

 












Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್