LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಸೆನ್ಸಾರ್ ಪಾಸಾದ ಬ್ಲಡಿ ಬಾಬು ಇದೇ ತಿಂಗಳು ತೆರೆಗೆ 







    ಕೆಟ್ಟದ್ದು ಒಳ್ಳೇದರ ನಡುವಿನ ಹೋರಾಟದಲ್ಲಿ ಒಳ್ಳೆಯದಕ್ಕೆ ಯಾವಾಗಲೂ ಜಯ ಸಿಕ್ಕೇ ಸಿಗುತ್ತದೆ. ಇಂಥ ಕಥೆಗಳನ್ನು ಬೆಳ್ಳಿತೆರೆಮೇಲೆ ಸಾಕಷ್ಟು ನೋಡಿದ್ದೇವೆ. ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿರುವ 'ಬ್ಲಡಿ ಬಾಬು' ಕೂಡ ದುಷ್ಟಶಕ್ತಿ ಹಾಗೂ ಆತ್ಮಶಕ್ತಿಯ ನಡುವಿನ ಸಮರದ ಸುತ್ತ ನಡೆಯುವ ಕಥಾಹಂದರದ್ದಾಗಿದೆ.

      ಹಿಂದಿನ ಕಾಲದ ಮಾಟ, ಮಂತ್ರ  ಇಲ್ಲದೆ ಆಧುನಿಕ‌ ಶೈಲಿಯ  ಹಿಪ್ನಟೈಸ್ ಪ್ರಭಾವ  ಇಟ್ಟುಕೊಂಡು 'ಬ್ಲಡಿ ಬಾಬು' ಚಿತ್ರವನ್ನು ನಿರ್ದೇಶಕ ರಾಜೇಶ್ ಮೂರ್ತಿ ಅವರು ನಿರೂಪಿಸಿದ್ದಾರೆ. ದುಷ್ಟನ ಕೈವಶದಲ್ಲಿದ್ದ ನಾಯಕಿಯನ್ನು ನಾಯಕ ತನ್ನ ವಿಲ್ ಪವರ್ ನಿಂದ ಎದುರಿಸಿ ಹೇಗೆ ಬಿಡಿಸಿಕೊಂಡು ಬರುತ್ತಾನೆ ಎನ್ನುವುದೇ ಈ ಚಿತ್ರದ ಪ್ರಮುಖ ಎಳೆ.

     ಚಿತ್ರವನ್ನು ವೀಕ್ಷಿಸಿದ ಸೆನ್ಸಾರ್ ಮಂಡಳಿ ಚಿತ್ರಕ್ಕೆ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು ಇದೇ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ಸಿದ್ದತೆ ನಡೆಸಿದೆ‌.

     ಪ್ರಾರಂಭದಿಂದಲೂ  ವಿಭಿನ್ನ ಶೈಲಿಯ ಚಿತ್ರಗಳನ್ನು ನಿರ್ದೇಶಿಸುತ್ತಾ ಬಂದಿರುವ ರಾಜೇಶ್ ಮೂರ್ತಿ ಅವರು  ಮತ್ತೊಂದು ಥ್ರಿಲ್ಲರ್ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. 'ಬ್ಲಡಿಬಾಬು'  ಮಗನಿಗೆ ತಂದೆಯೇ ಆಕ್ಷನ್ ಕಟ್ ಹೇಳಿರೋ ಚಿತ್ರವೂ ಆಗಿದೆ. ಈ ಮೂಲಕ  ಯಶಸ್ವಾ ಎರಡನೇ ಬಾರಿಗೆ ನಾಯಕನಾಗಿ ತೆರೆಮೇಲೆ ಬರುತ್ತಿದ್ದಾರೆ.

     ರಾಜೇಶ್ ಮೂರ್ತಿ ಅವರೇ  ಕಥೆ ಚಿತ್ರಕಥೆ ಬರೆದು  ನಿರ್ದೇಶಿಸಿರೋ ಈ ಚಿತ್ರವನ್ನು   ಏಂಜಲ್ ಡ್ರೀಮ್ಸ್ ಎಂಟರ್ ಟೈನ್ ಮೆಂಟ್ಸ್ ಮೂಲಕ ಡೋಮ್ನಿಕ್ ಅವರು ನಿರ್ಮಿಸಿದ್ದಾರೆ.

     ಸೈಕಲಾಜಿಕಲ್, ಆಕ್ಷನ್ ಥ್ರಿಲ್ಲರ್  ಕಥಾಹಂದರ ಹೊಂದಿರುವ 'ಬ್ಲಡಿ ಬಾಬು' ಚಿತ್ರಕ್ಕೆ  ಬೆಂಗಳೂರು, ನಂದಿ ಹಿಲ್ಸ್ ಹಾಗೂ ಚಿಕ್ಕಮಗಳೂರು ಸುತ್ತಮುತ್ತ 25ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಿಸಲಾಗಿದೆ. ನವನಟಿ  ಸ್ಮಿತಾ ಈ ಚಿತ್ರದ ನಾಯಕಿಯಾಗಿದ್ದು,  ಬಾಲಿವುಡ್ ಖಳನಟ ದಿಲೀಪ್ ಕುಮಾರ್ ಈ ಚಿತ್ರದ ವಿಲನ್  ಪಾತ್ರ ನಿರ್ವಹಿಸಿದ್ದಾರೆ. ನಟ, ರಾಜಕಾರಣಿ ನೆ.ಲ.ನರೇಂದ್ರ ಬಾಬು ಅವರು  ನಾಯಕಿಯ ತಂದೆಯಾಗಿ ಕಾಣಿಸಿಕೊಂಡಿದ್ದಾರೆ.

      ಈ ಹಿಂದೆ ಲಿಪ್ ಸ್ಟಿಕ್ ಮರ್ಡರ್, ಜೋಕರ್ ಜೋಕರ್, ಸೈಕೋಮ್ಯಾಕ್ಸ್ ನಂಥ ಕ್ರೈಂ, ಥ್ರಿಲ್ಲರ್ ಚಿತ್ರಗಳನ್ನೇ ಮಾಡಿಕೊಂಡು ಬಂದಿದ್ದ  ರಾಜೇಶ್ ಮೂರ್ತಿ ಅವರು ಮತ್ತೊಮ್ಮೆ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ಕೈ ಹಾಕಿದ್ದಾರೆ.  ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿ ಸಂಕಲನದ ಕೆಲಸವನ್ನೂ ನಿರ್ವಹಿಸಿದ್ದಾರೆ. ವಿಭಿನ್ನ ಶೈಲಿಯ 4 ಸಾಹಸ‌ ದೃಶ್ಯಗಳು ಚಿತ್ರದಲ್ಲಿದೆ. ಜೊತೆಗೆ ಈ ಚಿತ್ರದಲ್ಲಿ 3 ಹಾಡುಗಳಿದ್ದು ನಿತೀಶ್ ಕುಮಾರ್  ಸಂಗೀತ ಸಂಯೋಜನೆ ಮಾಡಿದ್ದಾರೆ. ವಿನೋದ್ ಆರ್.  ಛಾಯಾಗ್ರಹಣ  ನಿರ್ವಹಿಸಿದ್ದಾರೆ.


















Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್