Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗೆ 18ಕೋಟಿ ಅನುದಾನ; ಕೇಂದ್ರಕ್ಕೆ ಬೊಮ್ಮಾಯಿ ಥ್ಯಾಂಕ್ಸ್‌

ಬೆಂಗಳೂರು: ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿರುವ ಪ್ರಸಿದ್ಧ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ತೀರ್ಥಯಾತ್ರೆ ಪುನರುಜ್ಜೀವನ ಮತ್ತು ಆಧ್ಯಾತ್ಮಿಕ ಪರಂಪರೆ ವೃದ್ಧಿ ಡ್ರೈವ್(ಪ್ರಸಾದ್) ಯೋಜನೆಯಡಿ ಅಭಿವೃದ್ಧಿ ಮಾಡುವುದಾಗಿ ಕೇಂದ್ರ ಸರ್ಕಾರ ಮಂಗಳವಾರ ಘೋಷಿಸಿದೆ.

ಈ ನಿರ್ಧಾರವನ್ನು ಸ್ವಾಗತಿಸಿದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ಹೇಳಿದ್ದಾರೆ.

"ಪ್ರಸಾದ್ ಯೋಜನೆಯಡಿಯಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಂಸ್ಕೃತಿ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಧನ್ಯವಾದಗಳು.

ಈ ಉಪಕ್ರಮವು ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಅನುಭವವನ್ನು ಹೆಚ್ಚಿಸುತ್ತದೆ ಮತ್ತು ಸಾವಿರಾರು ಭಕ್ತರಿಗೆ ಆಧುನಿಕ ಸೌಲಭ್ಯಗಳನ್ನು ಒದಗಿಸುತ್ತದೆ" ಎಂದು ಬೊಮ್ಮಾಯಿ ಹೇಳಿದ್ದಾರೆ.

"ಇಂದು, ನಮ್ಮ ಪ್ರವಾಸೋದ್ಯಮ ಸಚಿವಾಲಯವು ಕರ್ನಾಟಕದ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯವನ್ನು ಪ್ರಶಾದ್ ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲು ಅನುಮೋದಿಸಿದೆ" ಎಂದು ಸಚಿವ ಶೇಖಾವತ್ ಸಾಮಾಜಿಕ ಮಾಧ್ಯಮ X ನಲ್ಲಿ ಘೋಷಿಸಿದ್ದಾರೆ.

ಕೇಂದ್ರ ಸರ್ಕಾರವು ಪ್ರಸಾದ್ ಯೋಜನೆಯಲ್ಲಿ 18.37 ಕೋಟಿ ರೂ. ಅನುದಾನವನ್ನು ಕರ್ನಾಟಕದ ಬೆಳಗಾವಿಯ ಸವದತ್ತಿ ದೇಗುಲಕ್ಕೆ ನೀಡಲು ಮಂಜೂರಾತಿ ನೀಡಿದೆ ಎಂದು ಕೇಂದ್ರ ಸಚಿವರು ತಿಳಿದ್ದಾರೆ.

18.37 ಕೋಟಿ ರೂ. ಅನುದಾನದಲ್ಲಿ ದೇವಾಲಯಕ್ಕೆ ಭಕ್ತಾಧಿಗಳ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದು ದೇವಾಲಯಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ