Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಕ್ಸ್ ಕ್ರಿಕೆಟ್ ಸ್ಟೇಡಿಯಂ ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬಾಲಭವನದಿಂದ ಬೆಳಗಾವಿಯಲ್ಲಿ ಹಲವಾರು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲವಾಗುವಂತೆ ಬಾಕ್ಸ್ ಕ್ರಿಕೆಟ್ ಮೈದಾನ ನಿರ್ಮಾಣ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಬಾಲಭವನದ ವತಿಯಿಂದ ನಿರ್ಮಾಣವಾಗಿರುವ ಬಾಕ್ಸ್ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆಯ ನಂತರ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು.

ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್‌ ಶಿಂಧೆ ಅವರು ಆಸಕ್ತಿ ವಹಿಸಿ ಈ ಯೋಜನೆ ರೂಪಿಸಿದ್ದಾರೆ. ಬಾಲಭವನದಿಂದ, ಜಿಲ್ಲಾ ಪಂಚಾಯಿತಿಯಿಂದ ಹಾಗೂ ಶಾಸಕ ಆಸೀಫ್ ಸೇಠ್ ಅವರ ಶಾಸಕರ ಅನುದಾನದಿಂದ ಹಣ ಭರಿಸಲಾಗಿದೆ. ಸರಕಾರಿ ಶಾಲೆಗಳ ಮಕ್ಕಳಿಗೆ ಕ್ರಿಕೆಟ್ ತರಬೇತಿ ನೀಡಿ ಪ್ರತಿಭಾವಂತರನ್ನು ಮುಂದಿನ ಹಂತಕ್ಕೆ ಕಳಿಸಲಾಗುವುದು. 5 ವಿಕಲಚೇತನರಿಗೂ ಅವಕಾಶ ನೀಡಲಾಗುವುದು ಎಂದರು.

ಕೌರಿ ಗುಡ್ಡದಲ್ಲಿ ಗಿಡಗಳನ್ನು ಕಡಿದಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರಕಾರದ ಯೋಜನೆ, ಸರಕಾರದ ಜಾಗ. ಇದರಲ್ಲಿ ಬೇರೆಯವರ ಕೈವಾಡ ಹೇಗಿರುತ್ತದೆ? ನನಗೆ ಯೋಜನೆಯ ಮಾಹಿತಿ ಇರಲಿಲ್ಲ. ಮಾಧ್ಯಮಗಳಲ್ಲಿ ಬಂದ ತಕ್ಷಣ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದೇನೆ. ಯಾರದ್ದೇ ತಪ್ಪಿದ್ದರೂ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಮೆಟ್ರೋ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಕುರಿತು ಕೇಳಿದಾಗ, ಪೆಟ್ರೋಲ್, ಡಿಸೆಲ್, ಬಂಗಾರ್, ಬೆಳ್ಳಿ, ಡಾಲರ್, ಗ್ಯಾಸ್ ಸೇರಿದಂತೆ ನೂರಾರು ವಸ್ತುಗಳ ಬೆಲೆ ಹೆಚ್ಚಳವಾಗಿದೆಯಲ್ಲ ಎಂದರು.

ಬಾಲ್ಯ ವಿವಾಹ ಮತ್ತು ಪೊಕ್ಸೋಪ್ರಕರಣಗಳ ಕುರಿತು ಕೇಳಿದಾಗ, ಅನಿಷ್ಟ ಪದ್ಧತಿಗಳನ್ನು ಬೇರು ಮಟ್ಟದಿಂದ ಕಿತ್ತುಹಾಕಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದಕ್ಕೆ ಎಲ್ಲ ಇಲಾಖೆಗಳ, ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಸಂಸದ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿಯಲ್ಲಿ ಅಡ್ರೆಸ್ಸೇ ಇಲ್ಲ, ಯಾವಾಗಲೋ ಬಂದು ಹೋಗುತ್ತಾರೆ ಎನ್ನುವ ಮಾಧ್ಯಮಗಳ ಪ್ರಶ್ನೆಗೆ, ಸೈಟ್‌ ತೆಗೆದುಕೊಂಡಿದ್ದಾರೆ, ಮನೆ ಕಟ್ಟಿಸುತ್ತಾರೆ ಎಂದು ಕೇಳಿದ್ದೇನೆ ಎಂದು ಹೆಬ್ಬಾಳಕರ್ ಹೇಳಿದರು.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಕೇಳಿದಾಗ, ಈಗಾಗಲೆ 26 ಕಂತುಗಳನ್ನು  ನೀಡಲಾಗಿದ್ದು, ಒಬ್ಬೊಬ್ಬರಿಗೆ 52 ಸಾವಿರ ರೂ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕರಾದ ಆಸಿಫ್ ಸೇಠ್, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಾಹುಲ್ ಸಿಂಧೆ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಚೇತನಕುಮಾರ್, ಸಿಡಿಪಿಒ ಸುಮಿತ್ರಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ