LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

 IAS ಅಧಿಕಾರಿಗಳ ವಿರುದ್ಧ ಲಂಚ ಆರೋಪ; ಹೈಕೋರ್ಟ್ ಮೊರೆಹೋದ ಗುತ್ತಿಗೆದಾರ

ಬೆಂಗಳೂರು, ಏಪ್ರಿಲ್​​ 23:

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಘನತ್ಯಾಜ್ಯ ನಿರ್ವಹಣೆ ಟೆಂಡರ್ ಪ್ರಕ್ರಿಯೆಯಲ್ಲಿ ಹಿರಿಯ ಐಎಎಸ್ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಇದೀಗ ಪ್ರಕರಣ ಹೈಕೋರ್ಟ್ (High Court) ಮೆಟ್ಟಿಲೇರಿದೆ. ಐಎಎಸ್ ಅಧಿಕಾರಿಗಳಾದ ತುಷಾರ್ ಗಿರಿನಾಥ್ ಮತ್ತು ಕರಿಗೌಡ ವಿರುದ್ಧ ಲಂಚದ ಆರೋಪ ಮಾಡಿರುವ ಗುತ್ತಿಗೆದಾರ ಎಸ್.ಎನ್.ಬಾಲಸುಬ್ರಮಣಿಯನ್ ಸಲ್ಲಿಸಿದ್ದ ರಿಟ್ ಅರ್ಜಿ ಹೈಕೋರ್ಟ್​ ವಿಚಾರಣೆ ಕೈಗೆತ್ತಿಕೊಂಡಿದ್ದು, ಈ ವೇಳೆ ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ವಾದ ಪ್ರತಿವಾದ ಆಲಿಸಿದ ಕೋರ್ಟ್, ವಿಚಾರಣೆಯನ್ನು ನಾಳೆಗೆ (ಏಪ್ರಿಲ್ 24) ಮುಂದೂಡಿದೆ.

ಶೇ. 15ರಷ್ಟು ಲಂಚ ನೀಡುವಂತೆ ಒತ್ತಡ

ಗುತ್ತಿಗೆದಾರ ಎಸ್.ಎನ್. ಬಾಲಸುಬ್ರಮಣಿಯನ್, ಸಿ.ವಿ. ರಾಮನ್ ನಗರ ಪ್ಯಾಕೇಜ್-1ರ ಟೆಂಡರ್‌ನಲ್ಲಿ ಎಲ್1 ಬಿಡ್‌ದಾರರಾಗಿದ್ದರು. ಆದರೆ, ಜಿಬಿಎ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಅಧಿಕಾರಿ ಕರಿಗೌಡ ಸರ್ಕಾರದ ಪರವಾಗಿ ಒಟ್ಟು ಗುತ್ತಿಗೆ ಮೊತ್ತದ ಶೇ. 15ರಷ್ಟು ಲಂಚ ನೀಡುವಂತೆ ಒತ್ತಡ ಹೇರಿದ್ದಾರೆ ಮತ್ತು ಹಣ ನೀಡದಿದ್ದರೆ ಟೆಂಡರ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದರು. ಲಂಚಕ್ಕೆ ಒಪ್ಪದ ಕಾರಣ ಮಾರ್ಚ್ 26ರಂದು ಟೆಂಡರ್ ರದ್ದುಪಡಿಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನು ಸರ್ಕಾರದ ಪರವಾಗಿ ವಾದ ಮಾಡಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಗುತ್ತಿಗೆದಾರರ ಪರ ವಕೀಲರ ವಾದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾರ್ಚ್ 10ರಂದು ಅಧಿಕಾರಿಗಳು ಲಂಚ ಕೇಳಿದ್ದಾರೆ ಎಂದು ಅರ್ಜಿದಾರರು ಹೇಳುತ್ತಿದ್ದಾರೆ, ಆದರೆ ಅಂದು ಅವರು ಬೆಂಗಳೂರಿನಲ್ಲಿ ಇರಲಿಲ್ಲ, ದೆಹಲಿಯಲ್ಲಿದ್ದರು. ಅದಕ್ಕೆ ಪೂರಕವಾಗಿ ವಿಮಾನ ಪ್ರಯಾಣದ ಬೋರ್ಡಿಂಗ್ ಪಾಸ್ ಇದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಹಿರಿಯ ಅಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿರುವುದಕ್ಕೆ ಅರ್ಜಿಯನ್ನು ವಜಾಗೊಳಿಸುವಂತೆ ಮನವಿ ಮಾಡಿದರು.

ಎಲ್ಲ ರೀತಿಯ ತನಿಖೆಗೂ ಸಿದ್ಧವಿರುವುದಾಗಿ ಅರ್ಜಿದಾರರ ವಕೀಲರು ತಿಳಿಸಿದ್ದು, ಲಂಚದ ಬೇಡಿಕೆ ಬಗ್ಗೆ ಪ್ರಮಾಣಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ. ವಾದ ಪ್ರತಿವಾದದ ಬಳಿಕ ಹೈಕೋರ್ಟ್‌ನ ಏಕಸದಸ್ಯ ಪೀಠವು ವಿಚಾರಣೆಯನ್ನು ನಾಳೆಗೆ ಅಂದರೆ ಏಪ್ರಿಲ್​ 24ಕ್ಕೆ ಮುಂದೂಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್