LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿಆರ್​ಎಸ್ ನಾಯಕಿ ಕವಿತಾಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಹಾಗೂ ಹಿರಿಯ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರಿಗೆ ಅನಾರೋಗ್ಯ ಕಾಡಿದ್ದು, ಹೈದರಾಬಾದ್​ನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯದ ಕುರಿತು ವರದಿ ಬಂದ ಬಳಿಕ ಆಸ್ಪತ್ರೆಯಲ್ಲೇ ಸ್ವಲ್ಪ ದಿನ ಇರಬೇಕೇ ಅಥವಾ ಮನೆಗೆ ಕಳುಹಿಸಬೇಕೆ ಎನ್ನುವ ಕುರಿತು ವೈದ್ಯರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕವಿತಾ ದೆಹಲಿ ಮದ್ಯ ನೀತಿಯ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿದ್ದಾಗ ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

ಕೆ ಕವಿತಾ ಅವರನ್ನು ಮಾರ್ಚ್ 15, 2024 ರಂದು ಇಡಿ ಮತ್ತು ಏಪ್ರಿಲ್ 11, 2024 ರಂದು ಸಿಬಿಐ ಬಂಧಿಸಿತ್ತು. ಇತ್ತೀಚೆಗೆ, ಜಾರಿ ನಿರ್ದೇಶನಾಲಯ (ಇಡಿ) ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿತ್ತು, ಬಿಆರ್‌ಎಸ್ ನಾಯಕಿ ಕೆ ಕವಿತಾ ಮತ್ತು ಇತರ ಆರೋಪಿಗಳಾದ ಚನ್‌ಪ್ರೀತ್ ಸಿಂಗ್, ದಾಮೋದರ್, ಪ್ರಿನ್ಸ್ ಸಿಂಗ್ ಮತ್ತು ಅರವಿಂದ್ ಕುಮಾರ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.

ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಆಕೆಗೆ ಜಾಮೀನು ನೀಡಿದೆ. ದೆಹಲಿ ಮದ್ಯ ನೀತಿ ಹಗರಣದಲ್ಲಿ 1,100 ಕೋಟಿ ರೂ. ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ಗೂ ಜಾಮೀನು ಸಿಕ್ಕಿದೆ. ಲೋಕಸಭೆ ಚುನಾವಣೆ 2024ರ ಸಂದರ್ಭದಲ್ಲಿ ಚುನಾವಣಾ ಪ್ರಚಾರವನ್ನು ನಡೆಸಲು ಮಾತ್ರ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲು ವಿಶೇಷ ಅವಕಾಶ ನೀಡಲಾಗಿತ್ತು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್