LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೌದ್ಧ ಸನ್ಯಾಸಿ ಕೊಲೆ ಆರೋಪಿಗಳನ್ನು ಲಾಕ್‌ ಮಾಡಿದ ಪೊಲೀಸರು

ಧಾರವಾಡ,

ಧಾರವಾಡ ಬೈಪಾಸ್ ಬಳಿ ಏಪ್ರಿಲ್ 28ರಂದು ಟಿಬೆಟಿಯನ್ ಮೂಲದ ಬೌದ್ಧ ಸನ್ಯಾಸಿ ತಾಶಿ ಧೊಂದೂಪ ನಿಗೂಢ ಸಾವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಣ್ಣ ಮಾಹಿತಿಯೂ ಇಲ್ಲದಿದ್ದರೂ ಪ್ರರಕಣದ ಬೆನ್ನು ಬಿದ್ದ ಧಾರವಾಡ ಗ್ರಾಮೀಣ ಪೊಲೀಸರು ಹಂತಕರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಹಣಕ್ಕಾಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಆರಂಭದಲ್ಲಿ ಅಪಘಾತದಿಂದ ಈ ಸಾವಾಗಿರಬಹುದು ಎನ್ನಲಾಗಿತ್ತು. ಆದ್ರೆ, ಮುಖದ ಮೇಲಿನ ಗಾಯದಿಂದ ಅನುಮಾನ ಮೇಲೆ ತನಿಖೆ ನಡೆಸಿದಾಗ ಕೊಲೆ ಎನ್ನುವುದು ಗೊತ್ತಾಗಿದ್ದು, ಇದೀಗ ಮೂವರನ್ನು ಬಂಧಿಸಿದ್ದಾರೆ. ಯಾದವ್(24), ವೈಭವ್ ಚವ್ಹಾಣ(30) ಮತ್ತು ಸಿದ್ಧೇಶ ಭೋಸ್ಲೆ(18) ಬಂಧಿತರು.

ಮುಂಡಗೋಡದಿಂದ ಧಾರವಾಡದ ಮೂಲಕ ಕೊಲ್ಹಾಪುರದ ಕಡೆಗೆ ಕಾರೊಂದು ಹೋಗಿರೋದು ಗೊತ್ತಾಗಿದ್ದು, ಒಂದೆರಡು ಕಡೆ ಸಿಸಿಟಿವಿ ಪರಿಶೀಲಿಸಿದಾಗ ಕಾರಿನ ನಂಬರ್ ಸ್ಪಷ್ಟವಾಗಿ ಕಂಡಿಲ್ಲ. ಆದರೆ ಮುಂಡಗೋಡದ ಬಳಿ ಬಂಕ್ ನಲ್ಲಿ ಸಿಎನ್​​ ಜಿ ತುಂಬಿಸಿಕೊಳ್ಳಲು ಕಾರಿನಿಂದ ಇಳಿದಾಗ ಹಂತಕರು ಸಿಸಿಟಿವಿಯಲ್ಲಿ ಸೆರೆಯಾಗಿದ್ದಾರೆ. ಇದರ ಜಾಡು ಹಿಡಿದು ಹೊರಟ ಪೊಲೀಸರು, ಹಂತಕರನ್ನು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬಂಧಿಸಿದ್ದಾರೆ. ಕೊಲ್ಹಾಪುರ ಸಂಕೇತ ಯಾದವ್(24), ವೈಭವ್ ಚವ್ಹಾಣ(30) ಮತ್ತು ಸಿದ್ಧೇಶ ಭೋಸ್ಲೆ(18) ಅನ್ನೋ ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಹಣಕ್ಕಾಗಿ ಅಪಹರಿಸಿ ಕೊಲೆ

ಅಷ್ಟಕ್ಕೂ ಈ ಕೊಲೆಗೆ ಕಾರಣ ಹಣ. ಬೌದ್ಧ ಸನ್ಯಾಸಿಗಳ ಬಳಿ ಸಾಕಷ್ಟು ಹಣವಿರುತ್ತೆ ಅಂದುಕೊಂಡಿದ್ದ ಹಂತಕರು ತಾಶಿ ಧೊಂದೂಪರನ್ನು ಅವರು ವಾಕಿಂಗ್ ಮಾಡೋ ಸಂದರ್ಭದಲ್ಲಿ ಮುಂಡಗೋಡದಲ್ಲಿಯೇ ಕಿಡ್ನಾಪ್ ಮಾಡಿದ್ದರು. ಬಳಿಕ ಅವರಿಗೆ ಸಾಕಷ್ಟು ಹಿಂಸೆ ಕೊಟ್ಟು ಹಣ ಕೊಡುವಂತೆ ಪೀಡಿಸಿದ್ದರು. ಆದ್ರೆ, ಹಣವಿಲ್ಲದಿದ್ದಾಗ ಕಾರಿನಲ್ಲಿಯೇ ಸನ್ಯಾಸಿ ಮೇಲೆ ಹಲ್ಲೆ ಮಾಡಿದ್ದಾರೆ. ಪರಿಣಾಮ ಸನ್ಯಾಸಿ ಕಾರಿನಲ್ಲೇ ಸಾವನ್ನಪ್ಪಿದ್ದಾರೆ. ಬಳಿಕ ಶವವನ್ನು ಕಾರಿನಲ್ಲಿ ಇಟ್ಟುಕೊಂಡು ಕೊಲ್ಹಾಪುರದತ್ತ ತೆರಳಿದ್ದಾರೆ. ಆದ್ರೆ, ಅದೇನು ತಿಳಿತೋ ಏನೋ ಮಾರ್ಗ ಮಧ್ಯೆ ಧಾರವಾಡ ಬಳಿ ಶವವನ್ನು ಎಸೆದು ಪರಾರಿಯಾಗಿದ್ದರು.

ಮುಂಡಗೋಡದಿಂದ ಕೊಲ್ಹಾಪುರದವರೆಗೆ ವಾರದವರೆಗೆ ಓಡಾಡಿದ ಪೊಲೀಸರು ಎಲ್ಲ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿ, ಕೊನೆಗೂ ಹಂತಕರನ್ನು ಲಾಕ್ ಮಾಡಿದ್ದಾರೆ. ತ್ವರಿತಗತಿಯಲ್ಲಿ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು, ಇದೀಗ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ