Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ. ಮಹಾಂತೇಶ ದರಗದ


ಕೊಪ್ಪಳ ಜೂನ್ 03: ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಗೌರವಾನ್ವಿತ ಹಿರಿಯ ಸಿವ್ಹಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಎಸ್. ದರಗದ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ರಾಜೀವ್‌ಗಾಂಧಿ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯ, ದದೇಗಲ್ ಇವರುಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ (ಜೂ. 1ರಂದು) ಹಮ್ಮಿಕೊಂಡಿದ್ದ “ವಿಶ್ವ ತಂಬಾಕು ರಹಿತ ದಿನಾಚರಣೆ” ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಜನರು ತಂಬಾಕಿಗೆ ಹೆಚ್ಚು ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಇಂದಿನ ಸಮಾಜದಲ್ಲಿ ಅನೇಕ ಯುವಕರು ತಂಬಾಕು ಸೇವನೆ ಹಾಗೂ ಧೂಮಪಾನಕ್ಕೆ ಒಳಗಾಗುತ್ತಿದ್ದಾರೆ, ಇದರಿಂದ ಅವರ ಆರೋಗ್ಯ ಮತ್ತು ಸಮಾಜದ ಮೇಲೆ ಬಹಳಷ್ಟು ದುಷ್ಪರಿಣಾಮಗಳು ಬೀರುತ್ತವೆ ಮತ್ತು ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಕುಂಠಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ತಂಬಾಕು ಮುಕ್ತ ಸಮಾಜ ನಿರ್ಮಾಣ ಮಾಡಲು ಪ್ರತಿಯೊಬ್ಬರ ಕೈಜೋಡಿಸಬೇಕು ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಾದ ಡಾ. ನಂದಕುಮಾರ ಹೆಚ್. ಅವರು ಪ್ರಾಸ್ತಾವಿಕವಾಗಿ ಕಾರ್ಯಕ್ರಮದ ಕುರಿತು ಮಾತನಾಡಿ, ಪ್ರತಿ ವರ್ಷ ಮೇ 31ರಂದು “ವಿಶ್ವ ತಂಬಾಕು ರಹಿತ ದಿನಾಚರಣೆಯನ್ನು ಆಯೋಜಿಸಲಾಗುತ್ತದೆ. ಈ ವರ್ಷ “ಆಕರ್ಷಣೆಯನ್ನು ಬಹಿರಂಗಪಡಿಸುವುದು-ನಿಕೋಟಿನ್ ಮತ್ತು ತಂಬಾಕು ವ್ಯಸನವನ್ನು ಎದುರಿಸುವುದು” ಎಂಬ ಘೋಷವಾಕ್ಯದೊಂದಿಗೆ “ವಿಶ್ವ ತಂಬಾಕು ರಹಿತ ದಿನಾಚರಣೆ” ಕಾರ್ಯಕ್ರಮ ಆಚರಿಸಲಾಗುತ್ತಿದೆ. ಡಬ್ಲೂö್ಯ.ಹೆಚ್.ಓ ಪ್ರಕಾರ ತಂಬಾಕು ಮತ್ತು ನಿಕೋಟಿನ್ ಉದ್ಯಮವು ಯುವಕರನ್ನು ಗುರಿಯಾಗಿಸಲು ಸುವಾಸನೆ, ವರ್ಣರಂಜಿತ ಪ್ಯಾಕೇಜಿಂಗ್ ಮತ್ತು ಸಾಮಾಜಿಕ ಮಾಧ್ಯಮವನ್ನು ಹೇಗೆ ಬಳಸುತ್ತದೆ ಎಂಬುವದನ್ನು ಬಹಿರಂಗಪಡಿಸುವುದು ಈ ಘೋಷವಾಕ್ಯದ ಉದ್ದೇಶವಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಕೊಟ್ಪಾ-2003ರ ಕಾಯ್ದೆಯ ಪ್ರಕಾರ, ದಂಡ ಮತ್ತು ಶಿಕ್ಷೆ ವಿಧಿಸಲಾಗುತ್ತದೆ ಮತ್ತು ಸೆಕ್ಷನ್:6ಬಿ ಪ್ರಕಾರ ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ತಿಳಿದರು.
ಗ್ಲೋಬಾಲ ಅಡಲ್ಟ್ ಟೊಬಾಕೋ ಸರ್ವೇ-1 2009-10ರ ಪ್ರಕಾರ ಭಾರತದಲ್ಲಿ ಶೇ 34.6 ರಷ್ಟು ವಯಸ್ಕರು ತಂಬಾಕು ವ್ಯಸನಿಗಳಿದ್ದಾರೆ. ಸರ್ವೇ-2 2016-17ರ ಪ್ರಕಾರ ಭಾರತದಲ್ಲಿ ಶೇ 28.6 ರಷ್ಟು ವಯಸ್ಕರು ತಂಬಾಕು ವ್ಯಸನಿಗಳಿದ್ದಾರೆ. ಈ ಎರಡು ಸಮೀಕ್ಷೆಗಳಿಗೆ ಹೊಲಿಸಿದರೆ ಒಟ್ಟಾರೆ ತಂಬಾಕು ಬಳಕೆಯಲ್ಲಿ ಶೇ 6 ರಷ್ಟು ಇಳಿಕೆ ಕಂಡುಬAದಿದೆ ಎಂದು ಜಿಎಟಿಎಸ್-2 ವರದಿಯು ತಿಳಿಸುತ್ತದೆ. ತಂಬಾಕಿನ ಬಗೆಗಿನ ಸತ್ಯಾಂಶಗಳು ಮತ್ತು ವಿಶ್ವದಾದ್ಯಂತ ತಂಬಾಕು ಸೇವನೆಯಿಂದ ಮತ್ತು ಧೂಮಪಾನದಿಂದ ಬರುವಂತಹ ಖಾಯಿಲೆಗಳಾದ ಬಾಯಿ ಕ್ಯಾನ್ಸರ್, ಹೃದಯ ಸಂಬAಧಿತ ಕಾಯಿಲೆಗಳು ಮತ್ತು ಶ್ವಾಸಕೋಶದ ಕಾಯಿಲೆಗಳ ನಿಯಂತ್ರಣ ಮತ್ತು ತಡೆಗಟ್ಟುವ ಕ್ರಮಗಳ ಕುರಿತು ವಿವರವಾಗಿ ಮಾತನಾಡಿದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರವೀಂದ್ರನಾಥ ಎಂ.ಹೆಚ್ ಅವರು ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಯುವಕರು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿ ದುಷ್ಚಟ್ಟಕ್ಕೆ ಒಳಗಾಗುತಿದ್ದಾರೆ. ಹದಿಹರೆಯದವರ ಆರೋಗ್ಯ ಸಮಸ್ಯೆಗಳು ಮತ್ತು ಪರಿಹಾರ ಕುರಿತು ಇದೇ ವೇಳೆ ತಿಳಿಸಿದರು. ಮುಂದುವರೆದು ಮಾತನಾಡಿ, ತಂಬಾಕು ಸೇವನೆಯಿಂದ ದೂರವಿದ್ದು, ಯುವಕರು ಜಾಗೃತರಾಗಿ ತಮ್ಮ ವಿದ್ಯಾಭ್ಯಾಸ ಮತ್ತು ಉತ್ತಮ ಜೀವನದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಲ್ಲಾ ಪ್ರಶಿಕ್ಷಣಾರ್ಥಿಗಳು ತಮ್ಮ ಮನೆ, ಶಾಲಾ, ಕಾಲೇಜುಗಳನ್ನು ತಂಬಾಕು ಮುಕ್ತ ಮಾಡುವುದರಲ್ಲಿ ತಮ್ಮದು ಪ್ರಮುಖ ಪಾತ್ರ ಇರುತ್ತದೆ. ಆದ್ದರಿಂದ ನಮ್ಮ ದೇಶವನ್ನು ತಂಬಾಕು ಮುಕ್ತವನ್ನಾಗಿಸಲು ಸಾಧ್ಯ ಹಾಗೂ ಪ್ರಶಿಕ್ಷಣಾರ್ಥಿಗಳು “ಉತ್ತಮ ಜೀವನವನ್ನು ಆಯ್ದುಕೊಳ್ಳಿ ತಂಬಾಕನ್ನಲ್ಲ” ಎಂದು ಮತ್ತು ಒಳ್ಳೆಯ ಆರೋಗ್ಯಕರ ಅಭ್ಯಾಸಗಳನ್ನು ರೂಡಿಸಿಕೊಂಡು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಉತ್ತಮ ಸಮಾಜ ನಿರ್ಮಾಣ ಮಾಡೋಣ ಎಂದರು.
ಹಿರಿಯ ಉಪನ್ಯಾಸಕರಾದ ರಾಚಮ್ಮ ಹಿರೇಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿ, ರಾಜೀವ್‌ಗಾಂಧಿ ಗ್ರಾಮೀಣ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆಯ ಜಿಲ್ಲಾ ಮಟ್ಟದ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ನಮಗೆ ನಮ್ಮ ಪ್ರಶಿಕ್ಷಣಾರ್ಥಿಗಳಿಗೆ ತುಂಬಾ ಉಪಯುಕ್ತವಾಗಿದೆ. ಇದರಿಂದ ನಮ್ಮ ಪ್ರಶಿಕ್ಷಣಾರ್ಥಿಗಳು ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಶಿಕ್ಷಣ ನೀಡಲು ಹೋದ ಸಮಯದಲ್ಲಿ ತಂಬಾಕು ಸೇವನೆಯಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ. ಹೆಚ್.ಪ್ರಕಾಶ, ಡಾ. ಗೋನಾಳ ಕುಮಾರಸ್ವಾಮಿ, ಡಿ.ವೈ.ಡಿ.ಹೆಚ್.ಇ.ಓ ಕಾಲೇಜಿನ ಸಹ ಉಪನ್ಯಾಸಕರಾದ ದೇವಮ್ಮ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಸರ್ವೇಕ್ಷಣಾ ಘಟಕದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಮತ್ತು ಕಾಲೇಜಿನ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕರಾದ ಬಸವರಾಜ ನಾಯ್ಕ ಅವರು ಕಾರ್ಯಕ್ರಮ ನಿರೂಪಿಸಿದರು. ಬಿ.ಹೆಚ್.ಇ.ಓ ಗಂಗಮ್ಮ ಅವರು ವಿಶ್ವ ತಂಬಾಕು ರಹಿತ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
****
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ