LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

?೫೦ ಲಕ್ಷ ವೆಚ್ಚದಲ್ಲಿ ಭವನ ನಿರ್ಮಾಣ: ಶಾಸಕ ಆರ್.ಬಿ. ತಿಮ್ಮಾಪುರ

ಸಾವಿತ್ರಿಬಾಯಿ-ಜ್ಯೋತಿಬಾ ಫುಲೆ ಸಮುದಾಯ ಭವನಕ್ಕೆ ಭೂಮಿಪೂಜೆ

 

 

ರನ್ನ ಬೆಳಗಲಿ, ಸೆ. ೮: ಪಟ್ಟಣದ ಮಾಳಿ ಸಮಾಜದ ವತಿಯಿಂದ ನಿರ್ಮಿಸಲಾಗುತ್ತಿರುವ ಸಾವಿತ್ರಿಬಾಯಿ ಮತ್ತು ಜ್ಯೋತಿಬಾ ಫುಲೆ ಸಮುದಾಯ ಭವನದ ನಿರ್ಮಾಣಕ್ಕೆ ಮುಧೋಳ ಮತಕ್ಷೇತ್ರದ ಶಾಸಕ ಆರ್.ಬಿ. ತಿಮ್ಮಾಪುರ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಆರ್.ಬಿ. ತಿಮ್ಮಾಪುರ, ಶೋಷಿತ ವರ್ಗಗಳ ಮಹಿಳೆಯರಿಗಾಗಿ ದೇಶದಲ್ಲೇ ಮೊಟ್ಟಮೊದಲ ಶಾಲೆ ಸ್ಥಾಪಿಸಿ, ಅಕ್ಷರದ ಬೆಳಕು ನೀಡಿದ ಸಾವಿತ್ರಿಬಾಯಿ ಫುಲೆ ಅವರ ಸ್ಮರಣಾರ್ಥ ನಿರ್ಮಾಣವಾಗುತ್ತಿರುವ ಭವನಕ್ಕೆ ಪ್ರಸ್ತುತ ?೩೫ ಲಕ್ಷ ಅನುದಾನ ನೀಡಲಾಗಿದೆ. ಇನ್ನೂ ?೧೫ ಲಕ್ಷ ಅನುದಾನವನ್ನು ಸರ್ಕಾರದಿಂದ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು. ಒಟ್ಟು ?೫೦ ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣಗೊಳ್ಳಲಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಎಲ್ಲ ಸಮುದಾಯಗಳ ಮಹನೀಯರ ತ್ಯಾಗ, ಬಲಿದಾನ ಹಾಗೂ ಸಮಾಜ ಸೇವೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಅವರ ಸ್ಮಾರಕಗಳನ್ನು ನಿರ್ಮಿಸುತ್ತಿದೆ. ಮಹನೀಯರ ಜೀವನಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ರಾ? ನಾಯಕರು ಯಾವುದೇ ಒಂದು ಸಮುದಾಯಕ್ಕೆ ಸೀಮಿತರಲ್ಲ; ಅವರು ಇಡೀ ನಾಡಿನ ಆಸ್ತಿ. ಅಂತಹ ಮಹನೀಯರನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.ಪ.ಪೂ. ಶ್ರೀ ಜ್ಞಾನೇಂದ್ರ ಮಹಾಸ್ವಾಮಿಗಳು, ಸಿದ್ಧಾರೂಢ ಆಶ್ರಮ, ನಾಗರಾಳ ಅವರು ಪೂಜಾ ಕಾರ್ಯಗಳನ್ನು ನೆರವೇರಿಸಿದರು.ಕಾರ್ಯಕ್ರಮದಲ್ಲಿ ಮಾಳಿ ಸಮಾಜದ ಅಧ್ಯಕ್ಷ ಬಸಪ್ಪ ಮಂಟೂರ, ಉಪಾಧ್ಯಕ್ಷೆ ಸವಿತಾ ಚವಲಿ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೂಪಾ ಹೊಸಟ್ಟಿ, ಪಿಕೆಪಿಎಸ್ ಅಧ್ಯಕ್ಷ ನಿಂಗಪ್ಪ ಆರೇನಾಡ, ತಾಪಂ ಅಧಿಕಾರಿ ರಾಘವೇಂದ್ರ ಕಳ್ಳಿಮನಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಈರಣ್ಣ ದಡ್ಡಿ, ವಕೀಲ ಹನಮಂತ ಕಡಪಟ್ಟಿ, ಪತ್ರಕರ್ತ ರಾಘವೇಂದ್ರ ನೀಲಣ್ಣವರ, ಮುಖಂಡರಾದ ಸಂಗಪ್ಪ ಅಮಾತಿ, ಈರಪ್ಪ ಕಿತ್ತೂರ, ಪ್ರವೀಣ ಪಾಟೀಲ, ಸದುಗೌಡ ಪಾಟೀಲ, ಮಹಾದೇವ ನೀಲಣ್ಣವರ, ಸುಭಾ? ಪುರಾಣಿಕ, ಯಮನಪ್ಪ ಚಂದಪ್ಪನವರ, ಸದಪ್ಪ ಜಂಬಗಿ, ಅಲ್ಲಪ್ಪ ಆರೇನಾಡ, ಶಂಕರ ಆರೇನಾಡ, ಬಸವರಾಜ ರಾವಳೋಜಿ, ಭೀಮಪ್ಪ ಜಂಬಗಿ, ಮಾನಿಂಗ ಕಡಪಟ್ಟಿ, ರಾಮಲಿಂಗ ಹುದ್ದಾರ, ಸದಾಶಿವ ಹೊಸಟ್ಟಿ, ಬಸಪ್ಪ ಹೇಗಾಡಿ, ನಾಗಪ್ಪ ಹೊಸಟ್ಟಿ, ಸಿದ್ದಪ್ಪ ಹೊಸಟ್ಟಿ ಸೇರಿದಂತೆ ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್