LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು, ಆಗಸ್ಟ್ 17: ಮುಡಾ ಹಗರಣ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರ ಪ್ರತಿಯನ್ನು ಲಗತ್ತಿಸಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕು ಎಂದು ಹೇಳಿದ್ದಾರೆ.

‘ಮುಖ್ಯಮಂತ್ರಿ ವಿರುದ್ಧದ ಮುಡಾ ಹಗರಣದ ದೂರಿನ ಮೇಲೆ ಕಾನೂನು ಕ್ರಮಕ್ಕೆ ಅಧಿಕಾರ ನೀಡಲು ರಾಜ್ಯಪಾಲರು ತಮ್ಮ ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ, ಅಕ್ರಮಗಳ ಬಗ್ಗೆ ಸಾಕಷ್ಟು ಪುರಾವೆಗಳು ಇವೆ. ಗಂಭೀರ ಆರೋಪಗಳು ಕೇಳಿಬಂದಿರುವ ಕಾರಣ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವುದು ನಿರ್ಣಾಯಕವಾಗಿದೆ. ಅವರು ರಾಜೀನಾಮೆ ನೀಡಿ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಕಲ್ಪಿಸಿ, ಮುಖ್ಯಮಂತ್ರಿ ಕಚೇರಿಯ ಘನತೆ ಕಾಪಾಡಬೇಕಿದೆ. ಅವರಿಗೆ ನ್ಯಾಯ ಸಿಗುತ್ತದೆ’ ಎಂದು ವಿಜಯೇಂದ್ರ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್