LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೋವಿಡ್ ಅವ್ಯವಹಾರ ತನಿಖೆಗೆ ಎಸ್.ಐ.ಟಿ, ಸಂಪುಟ ಉಪಸಮಿತಿ: ಸಚಿವ ಸಂಪುಟ ನಿರ್ಧಾರ

ಬೆಂಗಳೂರು:  ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬAಧಿಸಿದAತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ವಿಶೇಷ ತನಿಖಾ ತಂಡ ನೇಮಿಸಲು (ಎಸ್ಐಟಿ) ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ.

ಸಚಿವ ಸಂಪುಟದ ನಿರ್ಣಯಗಳನ್ನು ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ರವರು ಸತ್ಯಸಂಶೋಧನಾ ವರದಿಯ ನಂತರ ಯಾರ ಪಾತ್ರ ಏನು ಎಂಬುದನ್ನು ತನಿಖೆ ಮಾಡಿ ಎಸ್.ಐ.ಟಿ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

• ಕುನ್ಹಾ ಆಯೋಗವು 11 ಸಂಪುಟಗಳಲ್ಲಿ ವರದಿ ಸಲ್ಲಿಸಿದ್ದು, ರೂ.7223.64 ಕೋಟಿಗಳ ಮೊತ್ತದ ವೈದ್ಯಕೀಯ ಉಪಕರಣಗಳ ಖರೀದಿಯ ಅವ್ಯವಹಾರದ ಕುರಿತು ತನಿಖೆ ನಡೆಸಿದೆ.

• ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಶಿಫಾರಸ್ಸು ಮಾಡಿದೆ. ಬಿ.ಬಿ.ಎಂ.ಪಿ 4 ವಲಯಗಳ ಮತ್ತು ರಾಜ್ಯದ ಎಲ್ಲಾ 31 ಜಿಲ್ಲೆಗಳ ವರದಿ ಸಲ್ಲಿಕೆ ಬಾಕಿಯಿದೆ. 55000 ಕಡತಗಳನ್ನು ಸಂಬAಧಪಟ್ಟ ಇಲಾಖೆಗಳಿಂದ ಪಡೆದು ಪರಿಶೀಲಿಸಿ ಆಯೋಗವು ವರದಿ ಸಲ್ಲಿಸಿದೆ.

ಈ ತನಿಖೆ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಿರಂತರವಾಗಿ ಮೇಲ್ವಿಚಾರಣೆ ನಡೆಸಲು ಸಚಿವ ಸಂಪುಟದ ಉಪಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟದ ಉಪಸಮಿತಿಯ ಸದಸ್ಯರನ್ನು ಅಂತಿಮಗೊಳಿಸಲು ಮುಖ್ಯಮಂತ್ರಿಯವರಿಗೆ ಅಧಿಕಾರ ನೀಡಲಾಗಿದೆ ಎಂದು ಮಾನ್ಯ ಸಚಿವರು ವಿವರಿಸಿದರು.

ರೂ.500.00 ಕೋಟಿಗಳ ಮೊತ್ತದ ವಸೂಲಾತಿ ಕುರಿತು ಪ್ರಕ್ರಿಯೆಯನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ವಿವರಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಸಾರ್ವಜನಿಕರ ಹಣದ ದುರುಪಯೋಗ ಮತ್ತು ಅಧಿಕಾರ ದುರುಪಯೋಗ ಬಗ್ಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿದ ವರದಿಯನ್ನು ದಿನಾಂಕ: 17.07.2023 ರಂದು 15ನೇ ವಿಧಾನಸಭೆಯಲ್ಲಿ ಮಂಡಿಸಲಾಗಿರುತ್ತದೆ. ಈ ವರದಿಯ ಆಧಾರದ ಮೇಲೆ ಸತ್ಯಸಂಶೋಧನೆ ಮಾಡಿ ವರದಿ ನೀಡಲು ಕುನ್ಹಾ ಆಯೋಗವನ್ನು ನೇಮಿಸಲಾಗಿತ್ತು. ಈ ಆಯೋಗವು 12 ವಿಶ್ಲೇಷಣಾ ವರದಿಗಳನ್ನು ನೀಡಿದೆ ಎಂದು ಸಚಿವರು ವಿವರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ