ಇಷ್ಟೆಲ್ಲ ಅಪಾರ ನೈಸರ್ಗಿಕ ಸಂಪತ್ತು ಹೊಂದಿರುವ ಗಡಿನಾಡು ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಅಪಖ್ಯಾತಿ ಕೂಡ ಇದೆ. ಈ ಹಣೆಪಟ್ಟಿ ಪಡೆದಿರುವ ಚಾಮರಾಜನಗರದ ಕಳಂಕ ಅಳಿಸಲು ಸಿದ್ದರಾಮಯ್ಯ ಹಾಗೂ ಅವರ ಸರ್ಕಾರ ಮುಂದಾಗಿದೆ. ಇದೇ ಫೆಬ್ರವರಿ 17 ಕ್ಕೆ ಮಲೆಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸುವ ಮೂಲಕ ಚಾಮರಾಜನಗರ ಜಿಲ್ಲೆಗೆ ಕೆಲವು ಉಡುಗೊರೆ ನೀಡಲು ಮುಂದಾಗಿದೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಆದಮೇಲೆ 20ಕ್ಕೂ ಹೆಚ್ಚು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿ ಈ ಮೌಢ್ಯ ತೊಲಗಿಸುವ ಪ್ರಯತ್ನ ಕೂಡ ಪಟ್ಟಿದ್ದಾರೆ. ಅಷ್ಟೇ ಯಾಕೆ, ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಮಲೆಮಹದೇಶ್ವರ ಬೆಟ್ಟದಲ್ಲಿ ಪೂರ್ಣ ಪ್ರಮಾಣದ ಸಂಪುಟ ಸಭೆ ನಡೆಸುವ ಮೂಲಕ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಒತ್ತು ಕೊಡಲು ಮುಂದಾಗಿದ್ದಾರೆ. ಈ ಸಚಿವ ಸಂಪುಟ ಸಭೆಯಲ್ಲಿ ಉದ್ಯೋಗ, ಆಕ್ಸಿಜನ್ ದುರಂತ ಸೇರಿದಂತೆ ಹತ್ತು ಹಲವು ಪ್ರಮುಖ ವಿಚಾರಗಳು ಚರ್ಚೆಯಾಗಲಿವೆ.
ಈ ಕ್ಯಾಬಿನೆಟ್ ಮೀಟಿಂಗ್ ಗಡಿ ನಾಡ ಜನರಿಗೆ ಭಾರೀ ನಿರೀಕ್ಷೆ ಹುಟ್ಟಿಸಿದ್ದು ಚಾಮರಾಜನಗರದ ಸರ್ವಾಂಗೀಣ ಅಭಿವೃದ್ಧಿಗೆ ಈ ಸಚಿವ ಸಂಪುಟ ಸಭೆ ಎಷ್ಟರ ಮಟ್ಟಿಗೆ ಎಷ್ಟರ ಮಟ್ಟಿಗೆ ಅನುಕೂಲ ಆಗಲಿದೆ ಕಾದು ನೋಡಬೇಕಿದೆ.